ಯೆರೆಮೀಯ 37:7 - ಕನ್ನಡ ಸಮಕಾಲಿಕ ಅನುವಾದ7 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನೆಂದರೆ, ಇಗೋ, ನಿಮ್ಮ ಸಹಾಯಕ್ಕೆ ಹೊರಟ, ‘ಫರೋಹನ ಸೈನ್ಯವು, ಅದರ ಸ್ವದೇಶವಾದ ಈಜಿಪ್ಟಿಗೆ ಹಿಂದಿರುಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ - ನನ್ನ ಅಭಿಪ್ರಾಯವನ್ನು ವಿಚಾರಿಸಲು ನಿಮ್ಮನ್ನು ನನ್ನ ಬಳಿಗೆ ಕಳಿಸಿದ ಜುದೇಯದ ಅರಸನಿಗೆ ಹೀಗೆಂದು ಹೇಳಿರಿ: ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶಕ್ಕೆ ಹಿಂದಿರುಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ವಿಚಾರಿಸುವದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ - ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯನೇ, ಯೆಹೂದದ ರಾಜನಾದ ಚಿದ್ಕೀಯನು ನನಗೆ ಪ್ರಶ್ನೆಗಳನ್ನು ಕೇಳುವದಕ್ಕಾಗಿ ನಿಮ್ಮನ್ನು ನನ್ನಲ್ಲಿಗೆ ಕಳಿಸಿದ್ದಾನೆಂಬುದು ನನಗೆ ಗೊತ್ತು. ರಾಜನಾದ ಚಿದ್ಕೀಯನಿಗೆ ಹೀಗೆ ಹೇಳಿರಿ. ಬಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಬರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು. ಅಧ್ಯಾಯವನ್ನು ನೋಡಿ |