Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:1 - ಕನ್ನಡ ಸಮಕಾಲಿಕ ಅನುವಾದ

1 ಮತ್ತಾನನ ಮಗ ಶೆಫಟ್ಯ, ಪಷ್ಹೂರನ ಮಗ ಗೆದಲ್ಯ, ಶೆಲೆಮ್ಯನ ಮಗ ಯೂಕಲ ಹಾಗೂ ಮಲ್ಕೀಯನ ಮಗ ಪಷ್ಹೂರ, ಇವರು ಯೆರೆಮೀಯನು ಜನರೆಲ್ಲರಿಗೆ ಹೇಳುತ್ತಿದ್ದುದನ್ನು ಕೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರು ಯೆರೆಮೀಯನ ಮಾತುಗಳನ್ನು ಕೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೆರೆಮೀಯನು ಜನರೆಲ್ಲರಿಗೆ, “ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: ನಗರದಲ್ಲಿ ನಿಲ್ಲುವವನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ಸಾಯುವನು. ನಗರವನ್ನು ಬಿಟ್ಟುಹೋಗಿ ಬಾಬಿಲೋನಿಯರನ್ನು ಮರೆಹೋಗುವವನು ಬದುಕುವನು. ತನ್ನ ಪ್ರಾಣವೊಂದನ್ನಾದರೂ ಬಾಚಿಕೊಂಡು ಹೋಗಿ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆರೆಮೀಯನು ಸಮಸ್ತ ಜನರಿಗೆ - ಯೆಹೋವನು ಇಂತೆನ್ನುತ್ತಾನೆ - ಪಟ್ಟಣದಲ್ಲಿ ನಿಲ್ಲುವವನು ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮರೆಹೊಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗಿ ಬದುಕುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆರೆಮೀಯನು ಪ್ರವಾದಿಸುತ್ತಿರುವುದನ್ನು ಕೆಲವು ಜನ ರಾಜಾಧಿಕಾರಿಗಳು ಕೇಳಿಸಿಕೊಂಡರು. ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರುಗಳು ಅವನ ಮಾತನ್ನೆಲ್ಲಾ ಕೇಳಿಸಿಕೊಂಡರು. ಯೆರೆಮೀಯನು ಎಲ್ಲಾ ಜನರಿಗೆ ಈ ಸಂದೇಶವನ್ನು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:1
12 ತಿಳಿವುಗಳ ಹೋಲಿಕೆ  

ಅವನು, “ಈ ಹೆಸರಿನಲ್ಲಿ ಉಪದೇಶ ಮಾಡಬಾರದೆಂದು ನಾವು ನಿಮಗೆ ಕಟ್ಟುನಿಟ್ಟಾಗಿ ಅಪ್ಪಣೆಕೊಟ್ಟೆವು. ಇಗೋ ನೀವಾದರೋ ನಿಮ್ಮ ಬೋಧನೆಯಿಂದ ಇಡೀ ಯೆರೂಸಲೇಮನ್ನು ತುಂಬಿಸಿರುವಿರಿ. ಅಲ್ಲದೆ ಈ ಮನುಷ್ಯನನ್ನು ಕೊಂದು ರಕ್ತ ಸುರಿಸಿದ ಅಪರಾಧಕ್ಕೆ ನಮ್ಮನ್ನು ನೀವು ಹೊಣೆಮಾಡಲು ಉದ್ದೇಶಿಸಿದ್ದೀರಿ,” ಎಂದು ಹೇಳಿದನು.


ದೇವಾಲಯದ ಕೆಲಸವನ್ನು ನಡೆಸುವ ಅವರ ಸಹೋದರರು 822 ಮಂದಿ ಇದ್ದರು. ಮಲ್ಕೀಯನ ಮಗ, ಪಷ್ಹೂರನ ಮಗ, ಜೆಕರ್ಯನ ಮಗ, ಅಮ್ಚೀಯ ಮಗ, ಪೆಲಲ್ಯನ ಮಗ, ಯೆರೋಹಾಮನ ಮಗ ಅದಾಯನೂ.


ಶೆಫಟ್ಯನ ವಂಶಜರು 372 ಮಂದಿ ಇದ್ದರು.


ಮಲ್ಕೀಯನ ಮಗ ಪಷ್ಹೂರನ ಮಗ ಯೆರೋಹಾಮನ ಮಗ ಅದಾಯನು. ಇಮ್ಮೇರನ ಮಗ ಮೆಷಿಲ್ಲೇಮೋತನ ಮಗ ಮೆಷುಲ್ಲಾಮನ ಮಗ ಯಹ್ಜೇರನ ಮಗ ಅದೀಯೇಲನ ಮಗ ಮಾಸೈಯನೂ;


ಅವನು ಮೀಕಾಯೇಲನ ಮಗನು, ಅವನು ಬಾಸೇಯನ ಮಗನು, ಅವನು ಮಲ್ಕೀಯನ ಮಗನು,


ಪ್ರವಾದಿಯಾದ ಯೆರೆಮೀಯನು ಯೆಹೂದದ ಸಮಸ್ತ ಜನರಿಗೂ, ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನೆಂದರೆ:


ಆದರೆ ಆ ದಿವಸದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು