ಯೆರೆಮೀಯ 38:16 - ಕನ್ನಡ ಸಮಕಾಲಿಕ ಅನುವಾದ16 ಹೀಗೆ ಅರಸನಾದ ಚಿದ್ಕೀಯನು ಯೆರೆಮೀಯನಿಗೆ ಅಂತರಂಗದಲ್ಲಿ ಪ್ರಮಾಣಮಾಡಿ, “ನಮಗೆ ಈ ಪ್ರಾಣವನ್ನು ಉಂಟುಮಾಡಿದ ಯೆಹೋವ ದೇವರ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸುವುದಿಲ್ಲ, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ” ಎಂದು ರಹಸ್ಯವಾಗಿ ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅದಕ್ಕೆ ಅರಸ ಚಿದ್ಕೀಯನು, “ನಮಗೆ ಈ ಪ್ರಾಣವನ್ನು ದಯಪಾಲಿಸಿದ ಸರ್ವೇಶ್ವರನ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ. ನಿನ್ನ ಪ್ರಾಣವನ್ನು ಹುಡುಕುವ ಈ ಜನರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ,” ಎಂದು ಗುಟ್ಟಾಗಿ ಪ್ರಮಾಣಮಾಡಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸೆನು, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸೆನು ಎಂದು ರಹಸ್ಯವಾಗಿ ಪ್ರಮಾಣಮಾಡಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ರಾಜನಾದ ಚಿದ್ಕೀಯನು ಯೆರೆಮೀಯನಿಗೆ ರಹಸ್ಯವಾಗಿ, “ಯೆರೆಮೀಯನೇ, ನಮಗೆ ಉಸಿರನ್ನೂ ಜೀವವನ್ನೂ ದಯಪಾಲಿಸಿದ ಯೆಹೋವನ ಆಣೆಯಾಗಿ ಹೇಳುತ್ತೇನೆ, ನಾನು ನಿನ್ನನ್ನು ಕೊಲ್ಲುವುದಿಲ್ಲ. ಕೊಲ್ಲಬಯಸುವ ಅಧಿಕಾರಿಗಳ ಕೈಗೂ ನಿನ್ನನ್ನು ಕೊಡುವದಿಲ್ಲವೆಂದು ನಾನು ಮಾತು ಕೊಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |