ಯೆರೆಮೀಯ 38:19 - ಕನ್ನಡ ಸಮಕಾಲಿಕ ಅನುವಾದ19 ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನಾನು ಕಸ್ದೀಯರಿಗೆ ಒಳಗಾಗಿರುವ ಯೆಹೂದ್ಯರ ವಿಷಯ ಅಂಜುತ್ತೇನೆ. ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು. ಆಗ ಅವರು ನನ್ನನ್ನು ಹಿಂಸಿಸಬಹುದು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಕಸ್ದೀಯರು ತಮ್ಮನ್ನು ಮೊರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಬಹುದು ಎಂದು ಶಂಕೆಪಡುತ್ತೇನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇದನ್ನು ಕೇಳಿದ ಅರಸ ಚಿದ್ಕೀಯನು ಯೆರೆಮೀಯನಿಗೆ, “ಬಾಬಿಲೋನಿಯದವರು ತಮ್ಮನ್ನು ಮರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸಬಹುದು. ಅವರು ನನ್ನನ್ನು ಹಿಂಸಿಸಬಹುದು ಎಂಬ ಸಂಶಯ ನನಗಿದೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ಕಸ್ದೀಯರು ತಮ್ಮನ್ನು ಮರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಿಯಾರು ಎಂದು ಶಂಕೆಪಡುತ್ತೇನೆ ಎಂದುತ್ತರಕೊಡಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಗ ಚಿದ್ಕೀಯನು, “ನಾನು ಈಗಾಗಲೇ ಬಾಬಿಲೋನಿನ ಸೈನ್ಯದ ಕಡೆಗೆ ಸೇರಿದ ಯೆಹೂದ್ಯರಿಗೆ ಹೆದರುತ್ತೇನೆ. ಆ ಸೈನಿಕರು ನನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸಿಕೊಡಬಹುದು ಮತ್ತು ಅವರು ನನಗೆ ಕೇಡುಮಾಡಬಹುದು; ನನ್ನನ್ನು ಹಿಂಸಿಸಬಹುದು ಎಂದು ಭಯವಾಗುತ್ತದೆ” ಎಂದು ಯೆರೆಮೀಯನಿಗೆ ಹೇಳಿದನು. ಅಧ್ಯಾಯವನ್ನು ನೋಡಿ |