ಯೆರೆಮೀಯ 38:2 - ಕನ್ನಡ ಸಮಕಾಲಿಕ ಅನುವಾದ2 “ಯೆಹೋವ ದೇವರು ಹೀಗೆನ್ನುತ್ತಾರೆ: ‘ನಗರದಲ್ಲಿ ನಿಲ್ಲುವವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವರು. ನಗರವನ್ನು ಬಿಟ್ಟು ಹೋಗಿ, ಬಾಬಿಲೋನಿಯರನ್ನು ಮೊರೆಹೋಗುವವರು ಬದುಕುವರು. ತಮ್ಮ ಪ್ರಾಣದೊಂದಿಗೆ ತಪ್ಪಿಸಿಕೊಂಡವರು, ಬದುಕುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆರೆಮೀಯನು ಸಮಸ್ತ ಜನರಿಗೆ, “ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಬಾಬಿಲೋನಿನ ಅರಸನು ಈ ನಗರವನ್ನು ಆಕ್ರಮಿಸುವನು. ಇದು ಅವನ ವಶವಾಗುವುದು ನಿಶ್ಚಯ” ಎಂದು ಸಾರುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರವಿುಸುವನು; ಅದು ಅವನ ಸೈನ್ಯದ ವಶವಾಗುವದು ಖಂಡಿತ ಎಂದು ಸಾರುತ್ತಿರುವಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಯೆಹೋವನು ಹೀಗೆನ್ನುತ್ತಾನೆ: ‘ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರು ಖಡ್ಗದಿಂದಾಗಲಿ ಕ್ಷಾಮದಿಂದಾಗಲಿ ಭಯಂಕರವಾದ ವ್ಯಾಧಿಯಿಂದಾಗಲಿ ಸತ್ತುಹೋಗುವರು. ಆದರೆ ಬಾಬಿಲೋನಿನ ಸೈನಿಕರಿಗೆ ಶರಣಾಗುವ ಪ್ರತಿಯೊಬ್ಬರು ಬದುಕುವರು. ಅವರು ಜೀವಂತ ಉಳಿಯುವರು.’ ಅಧ್ಯಾಯವನ್ನು ನೋಡಿ |
“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.