Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:22 - ಕನ್ನಡ ಸಮಕಾಲಿಕ ಅನುವಾದ

22 ಇಗೋ, ಯೆಹೂದದ ಅರಸನ ಅರಮನೆಯಲ್ಲಿ ಉಳಿದ ಹೆಂಗಸರೆಲ್ಲರು ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಕರೆತರಲಾಗಿ ಹೇಳುವುದೇನೆಂದರೆ, “ನಿನ್ನ ಸ್ನೇಹಿತರು ನಿನ್ನನ್ನು ಪ್ರೇರೇಪಿಸಿ, ನಿನ್ನನ್ನು ಗೆದ್ದಿದ್ದಾರೆ. ನಿನ್ನ ಕಾಲುಗಳು ಕೆಸರಿನಲ್ಲಿ ಹೂತಿರುವುದನ್ನು ನೋಡಿ, ಹಿಂದಿರುಗಿದ್ದಾರೆಂದು ನಿಂದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೂದದ ಅರಸನ ಮನೆಯಲ್ಲಿ ಉಳಿದಿರುವ ಸಕಲ ಸ್ತ್ರೀಯರು ಬಾಬೆಲಿನ ಅರಸನ ಸರದಾರರ ಬಳಿಗೆ ತರಲ್ಪಟ್ಟವರಾಗಿ ನಿನ್ನನ್ನು ಪ್ರೇರೇಪಿಸಿ ಒಳಪಡಿಸಿಕೊಂಡಿದ್ದ ನಿನ್ನ ಆಪ್ತಮಿತ್ರರು ನಿನ್ನ ಕಾಲುಗಳ ಬದಿಯಲ್ಲಿ ಹೂತದ್ದನ್ನು ನೋಡಿ ಹಿಂದಿರುಗಿದ್ದಾರೆ ಎಂದು ನಿಂದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಜುದೇಯದ ಅರಸನ ಮನೆಯಲ್ಲಿ ಉಳಿದಿರುವ ಎಲ್ಲ ಮಹಿಳೆಯರನ್ನು ಬಾಬಿಲೋನಿಯದ ಅರಸನ ದಳಪತಿಗಳ ಬಳಿಗೆ ತರಲಾಗುವುದು. ಆ ಮಹಿಳೆಯರೇ: ‘ಆಪ್ತ ಮಿತ್ರರು ನಿನ್ನನ್ನು ವಂಚಿಸಿ ಒಳಪಡಿಸಿಕೊಂಡರು; ನಿನ್ನ ಕಾಲುಗಳು ಬದಿಯಲ್ಲಿ ಹೂತಿರುವುದನ್ನು ನೋಡಿಯೂ ನಿನ್ನಿಂದ ದೂರವಾದರು’ ಎಂದು ತಮ್ಮನ್ನು ನಿಂದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೂದದ ಅರಸನ ಮನೆಯಲ್ಲಿ ಉಳಿದಿರುವ ಸಕಲ ಸ್ತ್ರೀಯರು ಬಾಬೆಲಿನ ಅರಸನ ಸರದಾರರ ಬಳಿಗೆ ತರಲ್ಪಟ್ಟವರಾಗಿ ನಿನ್ನನ್ನು ಪ್ರೇರಿಸಿ ಒಳಪಡಿಸಿಕೊಂಡಿದ್ದ ನಿನ್ನ ಆಪ್ತವಿುತ್ರರು ನಿನ್ನ ಕಾಲುಗಳು ಬದಿಯಲ್ಲಿ ಹೂತದ್ದನ್ನು ನೋಡಿ ಹಿಂದಿರುಗಿದ್ದಾರೆ ಎಂದು ನಿಂದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೂದದ ರಾಜನ ಅರಮನೆಯಲ್ಲಿ ಉಳಿದ ಎಲ್ಲಾ ಸ್ತ್ರೀಯರನ್ನು ಬಾಬಿಲೋನಿನ ಸೈನ್ಯಾಧಿಕಾರಿಗಳ ಬಳಿಗೆ ತರಲಾಗುವುದು. ನಿನ್ನ ಸ್ತ್ರೀಯರು ಹಾಡನ್ನು ಹಾಡಿ ನಿನ್ನನ್ನು ತಮಾಷೆ ಮಾಡುವರು. ಆ ಸ್ತ್ರೀಯರು ಹೀಗೆ ಹೇಳುವರು: ‘ನಿನಗಿಂತಲೂ ಪ್ರಬಲರಾಗಿದ್ದ ನಿನ್ನ ಒಳ್ಳೆಯ ಸ್ನೇಹಿತರು ನಿನ್ನನ್ನು ತಪ್ಪುದಾರಿಗೆ ಎಳೆದರು. ಆ ಸ್ನೇಹಿತರನ್ನು ನೀನು ತುಂಬಾ ನಂಬಿಕೊಂಡಿದ್ದೆ. ನಿನ್ನ ಪಾದಗಳು ಕೆಸರಿನಲ್ಲಿ ಹೂತಿವೆ. ನಿನ್ನ ಸ್ನೇಹಿತರು ನಿನ್ನಿದ ದೂರವಾಗಿದ್ದಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:22
22 ತಿಳಿವುಗಳ ಹೋಲಿಕೆ  

ಅವರು ಚೀಯೋನಿನಲ್ಲಿ ಸ್ತ್ರೀಯರ ಮೇಲೆ ಮತ್ತು ಯೆಹೂದದ ನಗರಗಳಲ್ಲಿ ಕನ್ಯೆಯರ ದೌರ್ಜನ್ಯ ಮಾಡಲಾಗಿದೆ.


ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ, ಆಕೆಯ ಕಣ್ಣೀರು, ಆಕೆಯ ಕೆನ್ನೆಗಳ ಮೇಲಿದೆ. ಆಕೆಯ ಎಲ್ಲಾ ಪ್ರಿಯರಲ್ಲಿ, ಆಕೆಯನ್ನು ಸಂತೈಸುವವರು ಒಬ್ಬರೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ, ಆಕೆಗೆ ವಂಚನೆಮಾಡಿ, ಆಕೆಗೆ ಶತ್ರುಗಳಾದರು.


ಅಂದರೆ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಅರಸನ ಪುತ್ರಿಯರನ್ನೂ, ಕಾವಲಿನವರ ಅಧಿಪತಿಯಾದ ನೆಬೂಜರದಾನನು ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ, ಪ್ರವಾದಿಯಾದ ಯೆರೆಮೀಯನನ್ನೂ, ನೇರೀಯನ ಮಗ ಬಾರೂಕನನ್ನೂ ತೆಗೆದುಕೊಂಡು ಈಜಿಪ್ಟ್ ದೇಶಕ್ಕೆ ಹೋದರು.


ನೆರೆಯವನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸೆ ಇಡಬೇಡಿರಿ; ನಿನ್ನ ಎದೆಯಲ್ಲಿ ಮಲಗುವವಳಿಗೆ ನಿನ್ನ ಬಾಯಿಯ ಬಾಗಿಲುಗಳನ್ನು ಕಾಯಿ.


ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿದ್ದಾನೆ. ಆತನು ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ, ಆತನು ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾರೆ. ಆತನು ನನ್ನನ್ನು ದಿನವೆಲ್ಲಾ ಹಾಳಾಗಿಯೂ, ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.


ಇಷ್ಮಾಯೇಲನು ಮಿಚ್ಪದಲ್ಲಿದ್ದ ಜನರ ಉಳಿದವರನ್ನೆಲ್ಲಾ ಅರಸನ ಪುತ್ರಿಯರನ್ನೂ, ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟು, ಉಳಿದ ಜನರೆಲ್ಲರನ್ನು ಸೆರೆಯಾಗಿ ಒಯ್ದನು. ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು, ಅಮ್ಮೋನ್ಯರ ಬಳಿಗೆ ದಾಟಿಹೋಗುವುದಕ್ಕೆ ಹೊರಟನು.


ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನಾನು ಕಸ್ದೀಯರಿಗೆ ಒಳಗಾಗಿರುವ ಯೆಹೂದ್ಯರ ವಿಷಯ ಅಂಜುತ್ತೇನೆ. ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು. ಆಗ ಅವರು ನನ್ನನ್ನು ಹಿಂಸಿಸಬಹುದು,” ಎಂದನು.


ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. “ಸುತ್ತಲೂ ಭಯವಿದೆ. ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ ಒಂದು ವೇಳೆ ಅವನು ಮೋಸಗೊಂಡಾನು. “ಆಗ ನಾವು ಅವನನ್ನು ಗೆದ್ದು, ಅವನಲ್ಲಿ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.”


ಅವರ ಮನೆಗಳೂ ಹೊಲಗಳೂ, ಹೆಂಡತಿಯರೂ ಸಹಿತವಾಗಿ ಬೇರೊಬ್ಬರ ಪಾಲಾಗುವುವು. ಏಕೆಂದರೆ, ದೇಶದ ನಿವಾಸಿಗಳ ಮೇಲೆ ನನ್ನ ಕೈಚಾಚುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, ‘ನೀವೇ ನಮ್ಮ ದೇವರುಗಳು,’ ಎಂದು ಹೇಳುವವರು ಹಿಂದೆ ಬಿದ್ದು, ನಾಚಿಕೆಗೆ ಈಡಾಗುವರು.


ನನ್ನನ್ನು ಕೆಸರಿನೊಳಗಿಂದ ಬಿಡಿಸಿರಿ. ನಾನು ಮುಳುಗದೆ ಇರಲಿ. ನನ್ನನ್ನು ದ್ವೇಷಿಸಿಸುವವರಿಂದಲೂ ನೀರಿನ ಅಗಾಧದಿಂದಲೂ ನನಗೆ ಬಿಡುಗಡೆ ಆಗಲಿ.


ನೆಲವಿಲ್ಲದಿರುವ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತಿದ್ದೇನೆ. ಪ್ರವಾಹಗಳು ನನ್ನ ಮೇಲೆ ಹಾದುಹೋಗುವ ನೀರಿನ ಅಗಾಧಕ್ಕೆ ನಾನು ಬಂದಿದ್ದೇನೆ.


ನನ್ನ ರೊಟ್ಟಿಯನ್ನು ತಿಂದವನೂ ನಾನು ನಂಬಿದ್ದವನೂ ಆಗಿರುವ ನನ್ನ ಆಪ್ತ ಸ್ನೇಹಿತನು ಸಹ ನನಗೆ ವಿರೋಧವಾಗಿ ತನ್ನ ಕಾಲನ್ನು ಎತ್ತಿದ್ದಾನೆ.


ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಕರುಗಳಂತಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಏಕೆಂದರೆ ಅವರ ಆಪತ್ತಿನ ದಿವಸವೂ, ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.


ಆಹಾ, ನಾನು ಕಂಡದ್ದೇನು? ಅವರು ದಿಗಿಲುಪಟ್ಟು ಹಿಂದಿರುಗಿದ್ದನ್ನು, ಅವರ ಪರಾಕ್ರಮಶಾಲಿಗಳು ಪೆಟ್ಟುತಿಂದಿದ್ದಾರೆ. ಹಿಂದೆ ನೋಡದೆ ಓಡಿಹೋಗುತ್ತಾರೆ, ಏಕೆಂದರೆ ಸುತ್ತಲು ದಿಗಿಲು ಕವಿದಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ, ಅವರ ಹೊಲಗಳನ್ನು ಹೊಸ ಮಾಲಿಕನಿಗೆ ನಾನು ಕೊಟ್ಟುಬಿಡುವೆನು. ಏಕೆಂದರೆ, ಚಿಕ್ಕವನು ಮೊದಲುಗೊಂಡು ದೊಡ್ಡವರತನಕ ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.


ನಿಮ್ಮ ವಿಶೇಷ ಮಿತ್ರರಾಗಿ ನೀವು ಬೆಳೆಸಿದವರನ್ನು ಯೆಹೋವ ದೇವರು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳೋ ಎಂಬಂತೆ ಹಿಡಿಯುವುದಲ್ಲವೆ?


ಆದರೆ ನೀನು ಶರಣಾಗತಿಯನ್ನು ನಿರಾಕರಿಸಿದರೆ, ಯೆಹೋವ ದೇವರು ನನಗೆ ತೋರಿಸಿದ ಮಾತು ಇದೇ:


ಆದರೆ ನನ್ನ ಸಹೋದರರಾದರೋ, ಉಕ್ಕಿ ಹರಿಯುವ ತೊರೆಯಂತೆಯೂ, ಬತ್ತಿದ ಹಳ್ಳದಂತೆಯೂ ಅಪನಂಬಿಗಸ್ತರಾಗಿದ್ದಾರೆ.


‘ನೀವು ಬಾಬಿಲೋನಿಯದ ಅರಸನ ಅಡಿಯಾಳಾಗುವುದಿಲ್ಲ,’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.


ಅವರನ್ನು ನಾನು ಕಳುಹಿಸಲಿಲ್ಲ, ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಮತ್ತು ನಿಮಗೆ ಪ್ರವಾದಿಸುವ ಪ್ರವಾದಿಗಳನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಯೆಹೋವ ದೇವರೇ ನುಡಿದಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು