ಯೆರೆಮೀಯ 38:23 - ಕನ್ನಡ ಸಮಕಾಲಿಕ ಅನುವಾದ23 “ಹಾಗೆ ನಿನ್ನ ಹೆಂಡತಿಯರನ್ನೂ, ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ಹೊರಗೆ ತರುವರು. ನೀನು ಅವರ ಕೈಗೆ ತಪ್ಪಿಸಿಕೊಳ್ಳುವುದಿಲ್ಲ. ಬಾಬಿಲೋನಿನ ಅರಸನ ಕೈಯಿಂದ ಸೆರೆಯಾಗುವೆ. ಈ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ತಮ್ಮ ಎಲ್ಲ ಮಡದಿಯರನ್ನೂ ಮಕ್ಕಳನ್ನೂ ಬಾಬಿಲೋನಿಯರ ಬಳಿಗೆ ತರಲಾಗುವುದು. ತಾವು ತಪ್ಪಿಸಿಕೊಳ್ಳಲಾಗದೆ ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಕೊಳ್ಳುವಿರಿ. ಈ ನಗರವು ತಮ್ಮ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಿನ್ನ ಸಮಸ್ತ ಪತ್ನಿಯರೂ ಕುಮಾರಕುಮಾರ್ತೆಯರೂ ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿವಿುತ್ತ ಬೆಂಕಿಯಿಂದ ಸುಟ್ಟುಹೋಗುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ನಿನ್ನ ಎಲ್ಲಾ ಹೆಂಡತಿಯರನ್ನು ಮತ್ತು ಮಕ್ಕಳನ್ನು ಹೊರತರಲಾಗುವುದು. ಅವರನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ನೀನೂ ಬಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರೆ. ಬಾಬಿಲೋನಿನ ರಾಜನು ನಿನ್ನನ್ನು ವಶಪಡಿಸಿಕೊಳ್ಳುವನು ಮತ್ತು ಜೆರುಸಲೇಮ್ ನಗರವನ್ನು ಸುಟ್ಟುಹಾಕಲಾಗುವುದು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿ |