Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:26 - ಕನ್ನಡ ಸಮಕಾಲಿಕ ಅನುವಾದ

26 ನೀನು ಅವರಿಗೆ, ‘ನನ್ನನ್ನು ತಿರುಗಿ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯುವ ಹಾಗೆ ತೆಗೆದುಕೊಂಡು ಹೋಗಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು,’ ಎಂದು ಹೇಳಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡೆನು’ ಎಂಬುದಾಗಿ ಹೇಳು” ಎಂದು ಅಪ್ಪಣೆಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ಮರಳಿ ಸೇರಿಸಬೇಡ. ಅಲ್ಲೇ ಸತ್ತೇನು ಎಂದು ಅರಸನಲ್ಲಿ ಬಿನ್ನಹ ಮಾಡಿಕೊಂಡೆ’ ಎಂಬುದಾಗಿ ಹೇಳು,” ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನೀನು ಅವರಿಗೆ - ಯೆಹೋನಾಥಾನನ ಮನೆಗೆ ನನ್ನನ್ನು ತಿರಿಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡೆನು ಎಂಬದಾಗಿ ಹೇಳು ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಯ ನೆಲಮಾಳಿಗೆಯ ಕತ್ತಲು ಕೋಣೆಗೆ ನನ್ನನ್ನು ಮತ್ತೆ ಕಳುಹಿಸಬೇಡಿ, ಅಲ್ಲಿಗೆ ಹೋದರೆ ನಾನು ಸತ್ತುಹೋಗುವೆನೆಂದು ರಾಜನಿಗೆ ಪ್ರಾರ್ಥಿಸುತ್ತಿದ್ದೆ’” ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:26
5 ತಿಳಿವುಗಳ ಹೋಲಿಕೆ  

ಆದ್ದರಿಂದ ಈಗ ಕಿವಿಗೊಡು. ನನ್ನ ಒಡೆಯನಾದ ಅರಸನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀಕಾರವಾಗಲಿ. ಲೇಖಕನಾದ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ,” ಎಂದನು.


ಆಗ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು, ಅವನನ್ನು ಹೊಡೆದು, ಲೇಖಕನಾದ ಯೋನಾತಾನನ ಮನೆಯಲ್ಲಿ ಬಂಧನದಲ್ಲಿ ಇಟ್ಟರು. ಏಕೆಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.


ಪ್ರವಾದಿಯಾದ ಯೆರೆಮೀಯನಿಗೆ, “ನಮ್ಮ ವಿಜ್ಞಾಪನೆ ನಿಮ್ಮ ಮುಂದೆ ಬರಲಿ. ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ, ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ? ನಮಗೋಸ್ಕರವೂ ಎಂದರೆ ಈ ಸಮಸ್ತ ಶೇಷಕ್ಕೋಸ್ಕರವೂ,


ಯೆಹೂದ್ಯರನ್ನು ನಾಶಮಾಡಲು ಶೂಷನಿನಲ್ಲಿ ಪ್ರಕಟಗೊಂಡ ರಾಜಾಜ್ಞೆಯ ಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರಳಿಗೆ ತೋರಿಸಿ ವಿವರಿಸುವಂತೆಯೂ, ಅವಳು ತನ್ನ ಜನರಿಗಾಗಿ ಅರಸನ ಮುಂದೆ ಹೋಗಿ ಬಿನ್ನಹ ಮಾಡುವಂತೆಯೂ ಆಕೆಗೆ ತಿಳಿಸಲು ಹೇಳಿದನು.


ಆಗ ಪ್ರಧಾನರೆಲ್ಲರೂ ಯೆರೆಮೀಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು. ಆಗ ಅವರು ಸುಮ್ಮನಾದರು. ಏಕೆಂದರೆ ಆ ಕಾರ್ಯದ ವಿಷಯವನ್ನು ಅವರು ಗ್ರಹಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು