Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:28 - ಕನ್ನಡ ಸಮಕಾಲಿಕ ಅನುವಾದ

28 ಈ ಪ್ರಕಾರ ಯೆರೂಸಲೇಮು ಸೆರೆಯಾಗುವ ದಿವಸದವರೆಗೆ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ವಾಸವಾಗಿದ್ದನು. ಯೆರೂಸಲೇಮು ಹಿಡಿಯಲಾಗುವಾಗ ಅಲ್ಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೆರೂಸಲೇಮು ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಜೆರುಸಲೇಮ್ ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೆರೂಸಲೇಮು ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಜೆರುಸಲೇಮ್ ನಗರವು ಶತ್ರುಗಳ ವಶವಾಗುವವರೆಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ವಾಸಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:28
12 ತಿಳಿವುಗಳ ಹೋಲಿಕೆ  

ಅವರು ಕಳುಹಿಸಿ ಯೆರೆಮೀಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ, ಶಾಫಾನನ ಮೊಮ್ಮಗನೂ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮನೆಗೆ ಕರೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.


ಆಗ ಅರಸನಾದ ಚಿದ್ಕೀಯನು ಯೆರೆಮೀಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ, ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವವರೆಗೆ, ಅವನಿಗೆ ರೊಟ್ಟಿಗಾರರ ಬೀದಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿ ಕೊಡಬೇಕೆಂದು ಆಜ್ಞಾಪಿಸಿದನು; ಹಾಗೆಯೇ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ನಿಂತನು.


ಹೀಗೆ ಹಗ್ಗಗಳಿಂದ ಯೆರೆಮೀಯನನ್ನು ಎಳೆದು, ಅವನನ್ನು ಬಾವಿಯೊಳಗಿಂದ ಎತ್ತಿದನು. ಆಮೇಲೆ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ಉಳಿದನು.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀವು ನನ್ನೊಂದಿಗಿರುವುದರಿಂದ ನಾನು ಕೇಡಿಗೆ ಹೆದರೆನು; ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ ನನ್ನನ್ನು ಸಂತೈಸುತ್ತವೆ.


ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು.


ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಅವನು ಇನ್ನು ಸೆರೆಮನೆಯ ಅಂಗಳದಲ್ಲಿ ಸೆರೆಯಾಗಿದ್ದಾಗ ಎರಡನೆಯ ಸಾರಿ ಉಂಟಾಯಿತು.


ಆದ್ದರಿಂದ ಈಗ ಕಿವಿಗೊಡು. ನನ್ನ ಒಡೆಯನಾದ ಅರಸನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀಕಾರವಾಗಲಿ. ಲೇಖಕನಾದ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ,” ಎಂದನು.


ಆಗ ಪ್ರಧಾನರೆಲ್ಲರೂ ಯೆರೆಮೀಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು. ಆಗ ಅವರು ಸುಮ್ಮನಾದರು. ಏಕೆಂದರೆ ಆ ಕಾರ್ಯದ ವಿಷಯವನ್ನು ಅವರು ಗ್ರಹಿಸಲಿಲ್ಲ.


ಹೀಗೆ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನನ್ನೂ, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳನ್ನೂ ಕಳುಹಿಸಿದನು.


ಯೆರೆಮೀಯನು ಸೆರೆಮನೆಯ ಅಂಗಳದಲ್ಲಿರುವಾಗ ಯೆಹೋವ ದೇವರ ವಾಕ್ಯವು ಅವನಿಗೆ ಹೇಳಿದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು