Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:9 - ಕನ್ನಡ ಸಮಕಾಲಿಕ ಅನುವಾದ

9 “ನನ್ನ ಒಡೆಯನಾದ ಅರಸನೇ, ಈ ಮನುಷ್ಯರು ಬಾವಿಯಲ್ಲಿ ಹಾಕಿದ ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ; ಏಕೆಂದರೆ ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನನ್ನೊಡೆಯಾ, ಅರಸರೇ, ಈ ಜನರು ಪ್ರವಾದಿ ಯೆರೆಮೀಯನಿಗೆ ಮಾಡಿರುವುದೆಲ್ಲ ದುಷ್ಟಕಾರ್ಯವೇ ಸರಿ. ಅವನನ್ನು ಬಾವಿಯಲ್ಲಿ ಹಾಕಿದ್ದಾರೆ. ಆಹಾರವಿಲ್ಲದೆ ಅವನು ಬಿದ್ದಲ್ಲೇ ಸಾಯುವುದು ಖಚಿತ. ಏಕೆಂದರೆ ನಗರದಲ್ಲಿ ರೊಟ್ಟಿಯೆಲ್ಲಾ ತೀರಿಹೋಗಿದೆ,” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:9
12 ತಿಳಿವುಗಳ ಹೋಲಿಕೆ  

ಆಗ ಅರಸನಾದ ಚಿದ್ಕೀಯನು ಯೆರೆಮೀಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ, ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವವರೆಗೆ, ಅವನಿಗೆ ರೊಟ್ಟಿಗಾರರ ಬೀದಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿ ಕೊಡಬೇಕೆಂದು ಆಜ್ಞಾಪಿಸಿದನು; ಹಾಗೆಯೇ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ನಿಂತನು.


ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣದಲ್ಲಿ ಕ್ಷಾಮವು ಬಲವಾದದ್ದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.


ನಾನು ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಅವಹೇಳನಕ್ಕೆ ಕಳವಳಗೊಂಡರೂ, ಬಾಗಿಲಿನಿಂದ ಹೊರಗೆ ಹೋಗದೆ ಮೌನವಾಗಿದ್ದೆನೋ?


ಎಬೆದ್ಮೆಲೆಕನು ಅರಸನ ಅರಮನೆಯನ್ನು ಬಿಟ್ಟು, ಹೊರಟು ಅರಸನ ಸಂಗಡ ಮಾತನಾಡಿ,


ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡು ಹೋಗಿ, ಪ್ರವಾದಿಯಾದ ಯೆರೆಮೀಯನನ್ನು ಅವನು ಸಾಯುವುದಕ್ಕಿಂತ ಮುಂಚೆ ಬಾವಿಯೊಳಗಿಂದ ಮೇಲಕ್ಕೆತ್ತು,” ಎಂದು ಆಜ್ಞಾಪಿಸಿದನು.


ಅವಳ ಜನರೆಲ್ಲರು ನರಳಾಡುತ್ತಾರೆ. ಅವರು ರೊಟ್ಟಿ ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು, ಅವರು ಆಹಾರಕ್ಕಾಗಿ ತಮ್ಮ ಬೊಕ್ಕಸಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ “ಯೆಹೋವ ದೇವರೇ, ನೋಡು, ಲಕ್ಷಿಸಿ; ಏಕೆಂದರೆ ನಾನು ಭ್ರಷ್ಠಳಾದೆನು.”


ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ, ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ.


ಅವರು ತಮ್ಮ ಪುತ್ರಪುತ್ರಿಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಮುತ್ತಿಗೆಯಲ್ಲಿಯೂ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.’


ಆದರೆ ಆ ದಿವಸದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು