Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೂದದ ಅರಸನಾದ ಚಿದ್ಕೀಯನ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯದೊಂದಿಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದನ್ನು ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಲ್ಲಿ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ಸಕಲ ಸೈನ್ಯಸಮೇತ ಬಂದು ಜೆರುಸಲೇಮನ್ನು ಮುತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜೆರುಸಲೇಮನ್ನು ಹೀಗೆ ವಶಪಡಿಸಿಕೊಳ್ಳಲಾಯಿತು: ಚಿದ್ಕೀಯನು ಯೆಹೂದದ ರಾಜನಾಗಿ ಆಳುತ್ತಿದ್ದ ಒಂಭತ್ತನೇ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಇಡೀ ಸೈನ್ಯದೊಂದಿಗೆ ಜೆರುಸಲೇಮಿನ ಮೇಲೆ ಧಾಳಿ ಮಾಡಿದನು. ಅದನ್ನು ವಶಪಡಿಸಿಕೊಳ್ಳುವದಕ್ಕಾಗಿ ಅವನು ಆ ನಗರವನ್ನು ಮುತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:1
16 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾಲ್ಕನೆಯ, ಐದನೆಯ, ಏಳನೆಯ, ಹತ್ತನೆಯ ತಿಂಗಳಿನ ಉಪವಾಸವು ಯೆಹೂದದ ಮನೆತನದವರಿಗೆ ಸಂತೋಷಕರ, ಸಂಭ್ರಮ ಕಾಲವೂ, ಆನಂದಕರವಾದ ಹಬ್ಬಗಳೂ ಆಗುವುವು. ಆದರೆ ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.”


ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ.


ನೆಬೂಕದ್ನೆಚ್ಚರನ ಹದಿನೆಂಟನೆಯ ವರ್ಷವಾಗಿದ್ದ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಯೆಹೋವ ದೇವರಿಂದ ಯೆರೆಮೀಯನಿಗೆ ಬಂದ ವಾಕ್ಯವೇನೆಂದರೆ:


ಯೆಹೋವ ದೇವರು ಹೇಳುತ್ತಾರೆ, ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರುಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು ಮತ್ತು ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗಿ ಮಾಡುವೆನು.”


ಇಸ್ರಾಯೇಲಿನ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಯೆರೂಸಲೇಮಿನ ಮೇಲೆ ಹೇಗೆ ಸುರಿಯಿತೋ, ಹಾಗೆಯೇ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೇ, ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ಸ್ಥಳವನ್ನು ನೀವು ಮತ್ತೆ ನೋಡಲಾರಿರಿ.’


ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು, ಅದನ್ನು ನಿನಗೂ, ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ, ಆ ಪಟ್ಟಣದ ಮೇಲೆ ದೃಷ್ಟಿಯಿಡು, ಅದು ಮುತ್ತಲಾಗುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಾಯೇಲಿನ ಜನರಿಗೆ ಒಂದು ಸಂಕೇತ.


ಅದರ ಮೂರನೆಯ ಒಂದು ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು. ಮೂರನೆಯ ಒಂದು ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು. ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಖಡ್ಗವನ್ನು ಬೀಸುವೆನು.


ನಮ್ಮ ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ನಾಶವಾಗಿದೆ,” ಎಂದು ಹೇಳಿದನು.


ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೆಯ ದಿನದಲ್ಲಿ, ಪಟ್ಟಣವು ನಾಶವಾದ ಮೇಲೆ, ಹದಿನಾಲ್ಕನೆಯ ವರ್ಷದ ಅದೇ ದಿನದಲ್ಲಿ, ಯೆಹೋವ ದೇವರ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.


ಆದ್ದರಿಂದ ದೇವರು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದರು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಖಡ್ಗದಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ, ಕನ್ಯಾಸ್ತ್ರೀಯ ಮೇಲಾದರೂ, ಅತಿವೃದ್ಧನ ಮೇಲಾದರೂ ಕನಿಕರಪಡಲಿಲ್ಲ. ದೇವರು ಸಮಸ್ತ ಜನರನ್ನು ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿದರು.


ಏಕೆಂದರೆ, ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಚೀಯೋನ್ ಸುತ್ತಲಿರುವ ಮರಗಳನ್ನು ಕಡಿಯಿರಿ. ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣವು. ಅವಳಲ್ಲಿ ಬರೀ ದಬ್ಬಾಳಿಕೆಯೇ ತುಂಬಿದೆ.


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು