Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:11 - ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಯೆರೆಮೀಯನ ವಿಷಯವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ರಕ್ಷಾದಳದ ನಾಯಕ ನೆಬೂಜರದಾನನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೆಬೂಕದ್ನೆಚ್ಚರನು ನೆಬೂಜರದಾನನಿಗೆ ಯೆರೆಮೀಯನ ಬಗ್ಗೆ ಕೆಲವು ಆಜ್ಞೆಗಳನ್ನು ಕೊಟ್ಟನು. ನೆಬೂಜರದಾನನು ನೆಬೂಕದ್ನೆಚ್ಚರನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಆ ಆಜ್ಞೆ ಹೀಗಿತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:11
12 ತಿಳಿವುಗಳ ಹೋಲಿಕೆ  

ಪೌಲನನ್ನು ಕಾವಲಿನಲ್ಲಿಡಬೇಕೆಂತಲೂ ಅವನ ಸ್ನೇಹಿತರು ಅವನನ್ನು ಸಂದರ್ಶಿಸಲು ಅಡ್ಡಿಮಾಡಬಾರದೆಂತಲೂ ಶತಾಧಿಪತಿಗೆ ಆಜ್ಞೆಕೊಟ್ಟನು.


“ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ದುಷ್ಟರ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.”


ಆದರೆ ಅವನೂ ಅವನ ಸೇವಕರೂ ದೇಶದ ಜನರೂ ಯೆಹೋವ ದೇವರ ಪ್ರವಾದಿಯಾದ ಯೆರೆಮೀಯನಿಂದ ಹೇಳಿಸಿದ ವಾಕ್ಯಗಳಿಗೆ ಕಿವಿಗೊಡಲಿಲ್ಲ.


ಇದಕ್ಕೆ ಯೆಹೋವ ದೇವರು, ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಶತ್ರುವನ್ನು ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ನಿನಗೆ ಶರಣಾಗತನನ್ನಾಗಿ ಮಾಡುವೆನು.


ದೇವರು ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವರು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.


ದೇವರು ದಿಕ್ಕಿಲ್ಲದವರನ್ನು ದಬ್ಬಾಳಿಕೆಮಾಡುವವರ ಬಾಯಿಯೆಂಬ ಖಡ್ಗದಿಂದಲೂ, ಬಲಿಷ್ಠರ ಕೈಯೊಳಗಿಂದಲೂ ರಕ್ಷಿಸುತ್ತಾರೆ.


ಆದ್ದರಿಂದ ಬಡವರಿಗೆ ನಿರೀಕ್ಷೆಯುಂಟಾಗುವುದು; ಅನ್ಯಾಯವು ತನ್ನ ಬಾಯಿ ಮುಚ್ಚಿಕೊಳ್ಳುವುದು.


ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ.


ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ಕಂಚಿನ ಗೋಡೆಯಾಗಿ ಮಾಡುತ್ತೇನೆ. ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಜಯಿಸಲಾರರು. ಏಕೆಂದರೆ ನಾನೇ ನಿನ್ನನ್ನು ರಕ್ಷಿಸುವುದಕ್ಕೂ, ನಿನ್ನನ್ನು ತಪ್ಪಿಸುವುದಕ್ಕೂ ನಿನ್ನ ಸಂಗಡ ಇದ್ದೇನೆ, ಎಂದು ಯೆಹೋವ ದೇವರು ಹೇಳುತ್ತಾರೆ.


ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಸಂಕೋಲೆಗಳಿಂದ ಕಟ್ಟಿಸಿ, ಬಾಬಿಲೋನಿಗೆ ಒಯ್ಯುವ ಯೆರೂಸಲೇಮಿನ ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತೆಗೆದುಕೊಂಡುಹೋಗಿ, ರಾಮದಿಂದ ಬಿಟ್ಟು ಕಳುಹಿಸಿದ ಮೇಲೆ, ಯೆರೆಮೀಯನಿಗೆ ಯೆಹೋವ ದೇವರಿಂದ ವಾಕ್ಯವು ಬಂದಿತು.


ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಒಳ್ಳೆಯದೆಂದು ತೋಚಿದರೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ, ದೇಶವೆಲ್ಲಾ ನಿನ್ನ ಮುಂದೆ ಇದೆ; ಎಲ್ಲಿ ಹೋಗುವುದಕ್ಕೆ ನಿನಗೆ ಒಳ್ಳೆಯದೆಂದೂ, ಸರಿಯೆಂದೂ ಕಾಣುತ್ತದೋ, ಅಲ್ಲಿಗೆ ಹೋಗು,” ಎಂಬುದು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು