Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:16 - ಕನ್ನಡ ಸಮಕಾಲಿಕ ಅನುವಾದ

16 “ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ, ಹೇಳತಕ್ಕದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಒಳ್ಳೆಯದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ. ಅವು ಆ ದಿವಸಗಳಲ್ಲಿ ನಿನ್ನ ಮುಂದೆಯೇ ನೆರವೇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀನು ಹೋಗಿ ಸುಡಾನಿನ ಎಬೆದ್ಮೆಲೆಕನಿಗೆ ಹೀಗೆ ತಿಳಿಸು: “ಈ ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ನಾನು ನುಡಿದ ಮೇಲನ್ನು ಅಲ್ಲ, ಕೇಡನ್ನೇ ಈ ನಗರದ ಮೇಲೆ ಬರಮಾಡುವೆನು. ಅದು ನಿನ್ನ ಕಣ್ಣೆದುರಿಗೇ ಆ ದಿನದಂದು ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಯೆರೆಮೀಯನೇ, ಹೋಗಿ ಇಥಿಯೋಪಿಯದವನಾದ ಎಬೆದ್ಮೆಲೆಕನಿಗೆ ಈ ಸಂದೇಶವನ್ನು ಕೊಡು: ‘ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: ಜೆರುಸಲೇಮ್ ನಗರದ ಬಗ್ಗೆ ನಾನು ಕೊಟ್ಟ ಸಂದೇಶಗಳು ಬೇಗ ಕಾರ್ಯರೂಪಕ್ಕೆ ಬರುತ್ತವೆ. ನನ್ನ ಸಂದೇಶ ಕಾರ್ಯರೂಪಕ್ಕೆ ಬರುವುದು ಕೇಡುಗಳ ಮೂಲಕವೇ ಹೊರತು ಒಳ್ಳೆಯದರ ಮೂಲಕವಲ್ಲ. ಎಲ್ಲವೂ ನನ್ನ ಸಂದೇಶದಂತೆ ನಡೆಯುವುದನ್ನು ನೀನು ಕಣ್ಣಾರೆ ನೋಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:16
24 ತಿಳಿವುಗಳ ಹೋಲಿಕೆ  

ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ.


ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”


ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.


ಅವನನ್ನೂ, ಅವನ ಸಂತಾನವನ್ನೂ, ಅವನ ಸೇವಕರನ್ನೂ, ಅವರ ಅಕ್ರಮಕ್ಕಾಗಿ ದಂಡಿಸುವೆನು. ಅವರ ಮೇಲೆಯೂ, ಯೆರೂಸಲೇಮಿನ ನಿವಾಸಿಗಳ ಮೇಲೆಯೂ, ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡದಂಥ ಕೇಡನ್ನೆಲ್ಲಾ ಬರಮಾಡುವೆನು.’ ”


“ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರೂ, ಇಸ್ರಾಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ‘ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ, ಅವರು ಕೇಳಲಿಲ್ಲ; ಕೂಗಿದರೂ ಉತ್ತರ ಕೊಡಲಿಲ್ಲ.’ ”


ಯೆಹೋವ ದೇವರು ಹೇಳುತ್ತಾರೆ, ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರುಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು ಮತ್ತು ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗಿ ಮಾಡುವೆನು.”


ಕಿರ್ಯತ್ ಯಾರೀಮಿನವನಾದ ಶೆಮಾಯನ ಮಗ ಊರೀಯ ಎಂಬುವವನು ಸಹ ಯೆಹೋವ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆಮೀಯನ ಎಲ್ಲಾ ಮಾತುಗಳ ಪ್ರಕಾರ, ಈ ಪಟ್ಟಣಕ್ಕೂ, ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.


“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’


ಆದರೂ ನೀವು ನನ್ನನ್ನು ಕೊಂದುಹಾಕಿದರೆ, ನಿಮ್ಮ ಮೇಲೆಯೂ, ಈ ಪಟ್ಟಣದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ನಿರ್ದೋಷಿಯ ರಕ್ತವನ್ನು ಬರಮಾಡುತ್ತೀರೆಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ವಾಕ್ಯಗಳನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದನು.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಯೆರೆಮೀಯನಿಗೆ ಹೀಗೆನ್ನುತ್ತಾರೆ: “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು, ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು. ಆ ಬೆಂಕಿ ಅವರನ್ನು ಸುಟ್ಟುಹಾಕುವುದು.”


ನನ್ನ ಕಣ್ಣು ನನ್ನ ವಿರೋಧಿಗಳ ಸೋಲನ್ನು ದೃಷ್ಟಿಸುವುದು. ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳ ವಿಪತ್ತನ್ನು ಕುರಿತು ನಾನು ಕೇಳಿಸಿಕೊಳ್ಳುವೆ.


ಹೀಗೆ ಯೆರೆಮೀಯನ ಮುಖಾಂತರವಾಗಿ ಹೇಳಿಸಿದ ಯೆಹೋವ ದೇವರ ವಾಕ್ಯವು ನೆರವೇರಿತು. ದೇಶವು ಅದರ ಸಬ್ಬತ್ ದಿನಗಳನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು, ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಾ ಇತ್ತು.


ನಾನು ಒಳ್ಳೆಯದಕ್ಕಾಗಿ ಅಲ್ಲ; ಕೆಟ್ಟದ್ದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು. ಈಜಿಪ್ಟ್ ದೇಶದಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವವರೆಗೆ ಖಡ್ಗದಿಂದಲೂ ಬರದಿಂದಲೂ ನಾಶವಾಗುವರು.


ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋಗಿದ್ದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಕೊಲ್ಲುವುದು. “ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.”


ನೀವು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಆತನ ಮಾತುಗಳನ್ನು ಕೇಳದೆ ಹೋದದ್ದರಿಂದಲೇ ಈ ಕಾರ್ಯವು ನಿಮಗೆ ಸಂಭವಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು