ಯೆರೆಮೀಯ 39:6 - ಕನ್ನಡ ಸಮಕಾಲಿಕ ಅನುವಾದ6 ಆ ಬಾಬಿಲೋನಿಯದ ಅರಸನು ಅಲ್ಲೇ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಯೆಹೂದದ ಎಲ್ಲಾ ಶ್ರೇಷ್ಠರನ್ನೂ ರಿಬ್ಲದಲ್ಲಿ ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ರಿಬ್ಲದಲ್ಲಿ ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆ ಬಾಬಿಲೋನಿಯದ ಅರಸನು ಅಲ್ಲೆ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿದನು. ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಜುದೇಯದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನ ಮಕ್ಕಳನ್ನು ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ರಿಬ್ಲದಲ್ಲಿ ಬಾಬಿಲೋನಿನ ರಾಜನು ಚಿದ್ಕೀಯನ ಕಣ್ಣೆದುರಿನಲ್ಲಿಯೇ ಅವನ ಗಂಡುಮಕ್ಕಳನ್ನು ಕೊಲ್ಲಿಸಿದನು. ಚಿದ್ಕೀಯನು ನೋಡುತ್ತಿದ್ದಂತೆಯೇ ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ರಾಜಾಧಿಕಾರಿಗಳನ್ನು ಕೊಲ್ಲಿಸಿದನು. ಅಧ್ಯಾಯವನ್ನು ನೋಡಿ |
ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’