Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:7 - ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಕಂಚಿನ ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬಿಲೋನಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬೆಲಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅನಂತರ ನೆಬೂಕದ್ನೆಚ್ಚರನು ಚಿದ್ಕೀಯನ ಕಣ್ಣುಗಳನ್ನು ಕೀಳಿಸಿದನು. ಕಂಚಿನ ಸರಪಳಿಗಳಿಂದ ಬಿಗಿಸಿ ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:7
10 ತಿಳಿವುಗಳ ಹೋಲಿಕೆ  

ನನ್ನ ಬಲೆಯನ್ನೂ ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯರ ನಾಡಾದ ಬಾಬಿಲೋನಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.


ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ, ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಜೀವನಾವಧಿಯವರೆಗೆ ಅವನನ್ನು ಸೆರೆಯಲ್ಲಿಟ್ಟನು.


ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದರು. ತರುವಾಯ ಅವನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ ಅವನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಆದರೆ ಫಿಲಿಷ್ಟಿಯರು ಅವನನ್ನು ಹಿಡಿದು, ಅವನ ಕಣ್ಣುಗಳನ್ನು ಕಿತ್ತು, ಅವನನ್ನು ಗಾಜಕ್ಕೆ ಒಯ್ದು ಎರಡು ಕಂಚಿನ ಸಂಕೋಲೆಗಳನ್ನು ಹಾಕಿದರು. ಸೆರೆಮನೆಯಲ್ಲಿ ಅವನನ್ನು ಬೀಸುವುದಕ್ಕೆ ಹಚ್ಚಿದರು.


ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು; ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡಿರಿ.


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲು ಪಡುವಂತೆ ಮಾಡುತ್ತೇನೆ. ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು. ನಿನ್ನ ಕಣ್ಣುಗಳು ಅದನ್ನು ನೋಡುವುವು. ಯೆಹೂದ್ಯರನ್ನೆಲ್ಲಾ ನಾನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅವರನ್ನು ಬಾಬಿಲೋನಿಗೆ ಒಯ್ದು ಖಡ್ಗದಿಂದ ಕೊಲ್ಲುವನು.


ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಆದರೆ ನಿಶ್ಚಯವಾಗಿ ಹಿಡಿಯಲಾಗಿ, ಅವನ ಕೈವಶವಾಗುವೆ. ನೀವು ಬಾಬಿಲೋನಿನ ಅರಸನನ್ನು ಪ್ರತ್ಯಕ್ಷವಾಗಿ ಕಾಣುವಿರಿ. ಅವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಮಾತನಾಡುವನು. ನೀನು ಬಾಬಿಲೋನಿಗೆ ಹೋಗುವಿ.


ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರುವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ, ಹಾಗೆಯೇ ಈಜಿಪ್ಟಿನ ಅರಸನಾದ ಫರೋಹ ಹೋಫ್ರನನ್ನು ಅವನ ಪ್ರಾಣವನ್ನು ಹುಡುಕುವ ಅವನ ಶತ್ರುಗಳ ಕೈಯಲ್ಲಿ ಒಪ್ಪಿಸುತ್ತೇನೆ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು