Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 39:9 - ಕನ್ನಡ ಸಮಕಾಲಿಕ ಅನುವಾದ

9 ಆಗ ಪಟ್ಟಣದೊಳಗೆ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆ ಹೋದವರನ್ನೂ, ಇತರ ಸಮಸ್ತ ಜನರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ರಕ್ಷಾದಳದ ನಾಯಕನಾದ ನೆಬೂಜರದಾನನು ನಗರದಲ್ಲಿ ಉಳಿದಿದ್ದವರನ್ನು ಹಾಗು ಮೊದಲೇ ತನ್ನನ್ನು ಮರೆಹೊಕ್ಕಿದವರನ್ನು ಮತ್ತಿತರ ಕೆಲಸಗಾರರನ್ನೆಲ್ಲಾ ಬಾಬಿಲೋನಿಗೆ ಸೆರೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ತನ್ನನ್ನು ಮರೆಹೊಕ್ಕವರನ್ನೂ ಇತರ ಸಮಸ್ತ ಜನರನ್ನೂ ಬಾಬೆಲಿಗೆ ಸೆರೆಯೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 39:9
20 ತಿಳಿವುಗಳ ಹೋಲಿಕೆ  

ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಸಂಕೋಲೆಗಳಿಂದ ಕಟ್ಟಿಸಿ, ಬಾಬಿಲೋನಿಗೆ ಒಯ್ಯುವ ಯೆರೂಸಲೇಮಿನ ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತೆಗೆದುಕೊಂಡುಹೋಗಿ, ರಾಮದಿಂದ ಬಿಟ್ಟು ಕಳುಹಿಸಿದ ಮೇಲೆ, ಯೆರೆಮೀಯನಿಗೆ ಯೆಹೋವ ದೇವರಿಂದ ವಾಕ್ಯವು ಬಂದಿತು.


ಇದರೊಂದಿಗೆ, ಆ ಮಿದ್ಯಾನ್ಯರು ಯೋಸೇಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಪೋಟೀಫರನಿಗೆ ಮಾರಿದರು. ಇವನು ಫರೋಹನ ಉದ್ಯೋಗಸ್ಥನೂ ಮೈಗಾವಲಿನ ದಳಪತಿಯೂ ಆಗಿದ್ದನು.


ಇವರನ್ನೆಲ್ಲಾ ಕಾವಲಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋಗಿ, ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು.


ಏಕೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣೆಯಿಂದ ಎಸೆದುಬಿಡುತ್ತೇನೆ. ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.”


ಇವರನ್ನೆಲ್ಲಾ ಕಾವಲಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋಗಿ, ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು.


ಕಾವಲಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.


ಆದ್ದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ, ನಿಮಗೂ, ನಿಮ್ಮ ಪಿತೃಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು. ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆ ಮಾಡುವಿರಿ ಮತ್ತು ನಾನು ನಿಮಗೆ ಕನಿಕರ ತೋರಿಸುವುದಿಲ್ಲ.’


ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋದರು; ಅವರ ಘನವಂತರು ಹಸಿವಿನಿಂದ ಸಾಯುವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವುದು.


ಬಾಬಿಲೋನಿನವರು ನಿನ್ನಿಂದ ಹುಟ್ಟುವಂಥ, ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು, ಅವರು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚುಕಿಗಳಾಗಿರುವರು,” ಎಂದನು.


ಆಗ ಯೆಹೋವ ದೇವರು ನಿಮ್ಮನ್ನು ದೇಶಗಳಲ್ಲಿ ಚದರಿಸಿಬಿಡುವರು. ಯೆಹೋವ ದೇವರು ನಿಮ್ಮನ್ನು ಅಟ್ಟಿದ ದೇಶಗಳ ಮಧ್ಯದಲ್ಲಿ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ.


ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.


“ ‘ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ, ಈಜಿಪ್ಟ್ ದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನಾನು ಕಸ್ದೀಯರಿಗೆ ಒಳಗಾಗಿರುವ ಯೆಹೂದ್ಯರ ವಿಷಯ ಅಂಜುತ್ತೇನೆ. ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು. ಆಗ ಅವರು ನನ್ನನ್ನು ಹಿಂಸಿಸಬಹುದು,” ಎಂದನು.


ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.


ಬಾಬಿಲೋನಿನ ಅರಸನು ಅಹೀಕಾಮನ ಮಗ ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಮತ್ತು ಬಾಬಿಲೋನಿಗೆ ಸೆರೆಹೋಗದೆ ಇದ್ದ ದೇಶಿಯರಲ್ಲಿ ಬಡವರಾದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿಯನ್ನು ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ ಕೇಳಿದಾಗ,


ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಜ್ಞಾನದಿಂದಲೂ ಚಾತುರ್ಯದಿಂದಲೂ ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು