Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:12 - ಕನ್ನಡ ಸಮಕಾಲಿಕ ಅನುವಾದ

12 ಅದಕ್ಕಿಂತ ಬಿರುಸಾದ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವುದು. ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯತೀರ್ಪುಗಳನ್ನು ಕೊಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಂಥಾ ಕೆಲಸಗಳಿಗೆ ಅನುಕೂಲಿಸದಂತೆ ನನ್ನ ಅಪ್ಪಣೆಯ ಮೇರೆಗೆ ಬಿರುಸಾಗಿ ಹೊಡೆಯುತ್ತದೆ; ಈಗ ನನ್ನ ಜನರಿಗೆ ನ್ಯಾಯದಂಡನೆಗಳನ್ನು ವಿಧಿಸುವೆನು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರನ ಆಜ್ಞೆಯ ಮೇರೆಗೆ ಬರುವ ಆ ಗಾಳಿ ಬಿರುಸಾಗಿ ಬಡಿಯುವುದು. ತಮ್ಮ ಜನರಿಗೆ ನ್ಯಾಯ ದಂಡನೆಯನ್ನು ಸ್ವಾಮಿ ಸರ್ವೇಶ್ವರನೇ ವಿಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಂಥಾ ಕೆಲಸಗಳಿಗೆ ಅನುಕೂಲಿಸದಂತೆ ನನ್ನ ಅಪ್ಪಣೆಯ ಮೇರೆಗೆ ಬಿರುಸಾಗಿ ಹೊಡೆಯುತ್ತದೆ; ಈಗ ನನ್ನ ಜನರಿಗೆ ನ್ಯಾಯದಂಡನೆಗಳನ್ನು ವಿಧಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇದು ಅದಕ್ಕಿಂತಲೂ ಬಹು ಬಿರುಸಾಗಿ ಬೀಸುತ್ತದೆ. ಅದು ನನ್ನಿಂದ ಬರುತ್ತದೆ. ಈಗ ಯೆಹೂದದ ಜನರಿಗೆ ನ್ಯಾಯವಾದ ದಂಡನೆಗಳನ್ನು ವಿಧಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:12
10 ತಿಳಿವುಗಳ ಹೋಲಿಕೆ  

ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯುವೆನು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ, ನಿನಗೆ ವಿರೋಧವಾಗಿದ್ದೇನೆ. ಜನಾಂಗಗಳ ಕಣ್ಣುಗಳ ಮುಂದೆ ನಿಮ್ಮ ಜನರನ್ನು ದಂಡಿಸುವೆನು.


ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.


ಆ ಸಮಯದಲ್ಲಿ ಈ ಜನರಿಗೂ, ಯೆರೂಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು: “ಒಣ ಗಾಳಿಯು ಮರುಭೂಮಿಯ ಉನ್ನತ ಸ್ಥಳಗಳಿಂದ ನನ್ನ ಜನರ ಪುತ್ರಿಯರ ಕಡೆಗೆ ಬರುತ್ತದೆ. ಅದು ತೂರುವುದಕ್ಕೂ, ಶುದ್ಧಮಾಡುವುದಕ್ಕೂ ಆಗತಕ್ಕದ್ದಲ್ಲ.


ಇಗೋ, ಮೇಘಗಳ ಹಾಗೆ ಏರಿ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವುವು. ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮ್ಮ ಗತಿಯನ್ನು ಏನು ಹೇಳೋಣ, ಏಕೆಂದರೆ ಹಾಳಾದೆವು.


ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಗೋ, ನಾನು ಬಾಬಿಲೋನಿಗೆ ವಿರೋಧವಾಗಿಯೂ, ನನಗೆದುರಾಗಿ ಎದ್ದಿರುವ ಲೇಬ್ ಕಾಮೈ ಪ್ರಜೆಗಳ ವಿರೋಧವಾಗಿಯೂ ನಾಶಕಾರಿಯಾದ ಗಾಳಿಬೀಸುವಂತೆ ಮಾಡುವೆನು.


ಎಫ್ರಾಯೀಮು ತನ್ನ ಸಹೋದರರಲ್ಲಿ ಫಲ ಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವ ದೇವರು ಬೀಸಮಾಡುವ ಪೂರ್ವ ಗಾಳಿಯು ಬರಲು, ಅವನ ಬುಗ್ಗೆಯು ಬತ್ತುವುದು. ಅವನ ಒರತೆಯು ಒಣಗುವುದು. ಅವನ ಬೊಕ್ಕಸಗಳ ನಿಧಿಯನ್ನು ಶತ್ರುಗಳು ಸೂರೆಮಾಡುವರು.


ಬಿರುಗಾಳಿಯಂತೆ ಕೊಚ್ಚಿಕೊಳ್ಳುತ್ತಾ ಮುಂದೆ ಸಾಗುವರು. ಅಪರಾಧಿ ಜನರವರು. ಅವರ ಸ್ವಂತ ಬಲ, ಅವರ ದೇವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು