Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:14 - ಕನ್ನಡ ಸಮಕಾಲಿಕ ಅನುವಾದ

14 ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:14
22 ತಿಳಿವುಗಳ ಹೋಲಿಕೆ  

ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.


ಈ ದುಷ್ಟತನಕ್ಕಾಗಿ ಪಶ್ಚಾತ್ತಾಪಪಟ್ಟು ಕರ್ತ ಯೇಸುವನ್ನು ಬೇಡಿಕೋ, ಒಂದು ವೇಳೆ ಅವರು ನಿನ್ನ ಹೃದಯದಲ್ಲಿದ್ದ ಈ ವಿಚಾರವನ್ನು ಕ್ಷಮಿಸಬಹುದು.


ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


“ಜ್ಞಾನಿಗಳ ಯೋಚನೆಗಳು ವ್ಯರ್ಥವಾದವುಗಳೆಂದು ಕರ್ತದೇವರು ತಿಳಿದುಕೊಳ್ಳುತ್ತಾರೆ,” ಎಂದೂ ಬರೆದಿದೆಯಲ್ಲಾ.


ಏಕೆಂದರೆ ದೇವರನ್ನು ಅವರು ತಿಳಿದಿದ್ದರೂ ದೇವರೆಂದು ಮಹಿಮೆ ಪಡಿಸಲಿಲ್ಲ, ದೇವರ ಉಪಕಾರ ಸ್ಮರಿಸಲಿಲ್ಲ. ಆದರೆ ಅವರು ತಮ್ಮ ವಿಚಾರಗಳಲ್ಲಿ ವ್ಯರ್ಥರಾದರು. ವಿವೇಕವಿಲ್ಲದ ಅವರ ಹೃದಯವು ಕತ್ತಲಾಯಿತು.


ಆಗ ಕರ್ತದೇವರು ಅವನಿಗೆ, “ಫರಿಸಾಯರಾದ ನೀವು, ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ, ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ನಿನ್ನ ಕೀಳಾದ ವೇಶ್ಯತನವನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯ ಕಾರ್ಯಗಳನ್ನು ಕಂಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ಇನ್ನೆಷ್ಟು ಕಾಲ ನೀನು ಅಶುದ್ಧಳಾಗಿರುವೆ?”


“ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ?


ಪಾಪವನ್ನು ನಾನು ನನ್ನ ಹೃದಯದಲ್ಲಿ ಬೆಳೆಸಿಕೊಂಡಿದ್ದರೆ, ಯೆಹೋವ ದೇವರು ನನ್ನ ಪ್ರಾರ್ಥನೆಯನ್ನು ಕೇಳುತ್ತಿರಲಿಲ್ಲ.


“ಮರವು ಒಳ್ಳೆಯದಾಗಿದ್ದರೆ, ಅದರ ಫಲವು ಒಳ್ಳೆಯದಾಗಿರುವುದು; ಮರವು ಕೆಟ್ಟದ್ದಾಗಿದ್ದರೆ, ಅದರ ಫಲವು ಕೆಟ್ಟದ್ದಾಗಿರುವುದು. ಏಕೆಂದರೆ ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು.


ನೀವು ಮಾಡುವ ದುಷ್ಕೃತ್ಯಗಳನ್ನೆಲ್ಲಾ ನಿಮ್ಮಿಂದ ಎಸೆದುಬಿಡಿರಿ. ಹೊಸ ಹೃದಯವನ್ನೂ, ಹೊಸ ಆತ್ಮವನ್ನೂ ನೀವು ಪಡೆದುಕೊಳ್ಳಿರಿ. ಇಸ್ರಾಯೇಲಿನ ಮನೆತನದವರೇ, ನೀವು ಸಾಯುವುದೇಕೆ?


ಎರಡು ಮನಸ್ಸುಳ್ಳವರನ್ನು ನಾನು ದ್ವೇಷಿಸುತ್ತೇನೆ, ಆದರೂ ನಿಮ್ಮ ನಿಯಮವನ್ನು ನಾನು ಪ್ರೀತಿಸುತ್ತೇನೆ.


ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ತೊಳೆದುಬಿಡಿರಿ; ನನ್ನ ಪಾಪದಿಂದ ನನ್ನನ್ನು ಶುದ್ಧಮಾಡಿರಿ.


ನೀನು ಸಾಬೂನಿನಿಂದ ತೊಳೆದುಕೊಂಡರೂ, ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಈ ಭೂಮಿಯೇ, ಕೇಳು. ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಏಕೆಂದರೆ, ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು; ನನ್ನ ನಿಯಮವನ್ನು ತಿರಸ್ಕರಿಸಿದರು.


“ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ, ವಜ್ರದ ಮೊನೆಯಿಂದಲೂ ಬರೆಯಲಾಗಿದೆ. ಅದು ಅವರ ಹೃದಯದ ಹಲಗೆಯ ಮೇಲೆಯೂ ಅವರ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲಾಗಿದೆ.


ನಿಮ್ಮ ಹೃದಯಗಳಲ್ಲಿ ನೆರೆಯವನ ವಿರುದ್ಧವಾಗಿ ಕೇಡನ್ನು ಕಲ್ಪಿಸದಿರಿ. ಸುಳ್ಳು ಪ್ರಮಾಣವನ್ನು ಪ್ರೀತಿಸಬೇಡಿರಿ. ಏಕೆಂದರೆ ಇವುಗಳನ್ನೆಲ್ಲಾ ನಾನು ಹಗೆಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


“ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ.


ಅದಕ್ಕೆ ಸೀಮೋನ ಪೇತ್ರನು ಯೇಸುವಿಗೆ, “ಸ್ವಾಮೀ, ನನ್ನ ಪಾದಗಳನ್ನು ಮಾತ್ರವಲ್ಲದೆ, ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು