ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿ ಓಡಿಸಿದೆನೋ, ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ಮುಗಿಸಿಬಿಡುತ್ತೇನೆ; ಆದರೆ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದರೂ ನಿನ್ನನ್ನು ಶಿಕ್ಷಿಸದೆ ಬಿಡುವುದಿಲ್ಲ.”
ಏಕೆಂದರೆ ನಿನ್ನನ್ನು ರಕ್ಷಿಸುವುದಕ್ಕೆ ನಾನು ನಿನ್ನ ಸಂಗಡ ಇದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಿನ್ನನ್ನು ಎಲ್ಲಿ ಚದರಿಸಿದೆನೋ, ಆ ಎಲ್ಲಾ ಜನಾಂಗಗಳನ್ನು ನಾನು ಸಂಪೂರ್ಣವಾಗಿ ಮುಗಿಸಿಬಿಟ್ಟಾಗ್ಯೂ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ. ಮಿತಿಯಲ್ಲಿ ನಿನ್ನನ್ನು ಸರಿಪಡಿಸುವೆನು. ನಾನು ಶಿಕ್ಷಿಸದೆ ಬಿಡುವುದಿಲ್ಲ.’
ನಾನು ಪ್ರವಾದಿಸುತ್ತಿರುವಾಗ, ಬೆನಾಯನ ಮಗನಾದ ಪೆಲಟೀಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು, ಗಟ್ಟಿಯಾಗಿ ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನೀವು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀರೋ?” ಎಂದು ಹೇಳಿದನು.
ಆದರೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ಧಿಕ್ಕರಿಸದೆ, ಅವರನ್ನು ಅಸಹ್ಯಪಡದೆ, ಅವರನ್ನು ಸಂಪೂರ್ಣವಾಗಿ ನಾಶಮಾಡದೆಯೂ, ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು. ಏಕೆಂದರೆ ಅವರ ದೇವರಾಗಿರುವ ಯೆಹೋವ ದೇವರು ನಾನೇ.
ಆಗ ನಾನು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸದ ಶಬ್ದವನ್ನೂ, ಸಂತೋಷ ಶಬ್ದವನ್ನೂ, ಮದುಮಗನ ಶಬ್ದವನ್ನೂ, ಮದುಮಗಳ ಶಬ್ದವನ್ನೂ ನಿಲ್ಲಿಸುವೆನು. ಏಕೆಂದರೆ, ದೇಶವು ಹಾಳಾಗುವುದು.
ಸಿಂಹವು ತನ್ನ ಪೊದೆಯೊಳಗಿಂದ ಏರಿ ಬರುತ್ತದೆ. ಇತರ ಜನಾಂಗಗಳನ್ನು ನಾಶ ಮಾಡುವವನು ಹೊರಟಿದ್ದಾನೆ. ನಿನ್ನ ದೇಶವನ್ನು ಹಾಳು ಮಾಡುವುದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ. ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವುದು.
ಹೀಗೆ ಯೆರೆಮೀಯನ ಮುಖಾಂತರವಾಗಿ ಹೇಳಿಸಿದ ಯೆಹೋವ ದೇವರ ವಾಕ್ಯವು ನೆರವೇರಿತು. ದೇಶವು ಅದರ ಸಬ್ಬತ್ ದಿನಗಳನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು, ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಾ ಇತ್ತು.
ಆದರೂ ಎಣ್ಣೆಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ ಎರಡು ಮೂರು ಕಾಯಿಗಳಿರುವುವು. ಅದರ ಫಲವತ್ತಾದ ಆ ಮರದ ರೆಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿದಿರುವುವು. ಅದೇ ರೀತಿಯಾಗಿ, ಇಸ್ರಾಯೇಲರಲ್ಲಿ ಕೆಲವರು ಮಾತ್ರ ಉಳಿದಿರುವರು, ಎಂದು ಇಸ್ರಾಯೇಲಿನ ಯೆಹೋವ ದೇವರು ಹೇಳುತ್ತಾರೆ.
ಕರ್ತದೇವರು ತನ್ನ ಬಲಿಪೀಠವನ್ನು ತಳ್ಳಿಬಿಟ್ಟಿದ್ದಾರೆ. ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯ ಪಡಿಸಿದ್ದಾನೆ. ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ, ಅವರು ಯೆಹೋವ ದೇವರು ಆಲಯದಲ್ಲಿ ಶಬ್ದ ಮಾಡಿದ್ದಾರೆ.
ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.