Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:28 - ಕನ್ನಡ ಸಮಕಾಲಿಕ ಅನುವಾದ

28 ಇದರ ನಿಮಿತ್ತ ಭೂಮಿಯು ದುಃಖಿಸುವುದು. ಮೇಲಿರುವ ಆಕಾಶವು ಕಪ್ಪಾಗುವುದು. ಏಕೆಂದರೆ ನಾನು ಅದನ್ನು ಹೇಳಿದ್ದರಿಂದ ನಿಶ್ಚಯಿಸಿದ್ದೇನೆ. ಮಾನಸಾಂತರ ಪಡುವುದಿಲ್ಲ. ಇಲ್ಲವೆ ಅದರಿಂದ ಹಿಂದಿರುಗುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಲೋಕ ದುಃಖಿಸುವುದು ಆಕಾಶ ಕಪ್ಪಗಾಗುವುದು ಇದು ಸರ್ವೇಶ್ವರ ಆಡಿದ ಮಾತು. ಇದನ್ನು ಬದಲಾಯಿಸುವಂತಿಲ್ಲ. ಇದು ಅವರ ತೀರ್ಮಾನ; ಇದನ್ನು ರದ್ದುಗೊಳಿಸುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಕ್ಕಾಗಿ ಭೂಲೋಕವು ಪ್ರಲಾಪಿಸುವದು, ಮೇಲೆ ಆಕಾಶವು ಕಪ್ಪಾಗುವದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಉದ್ದೇಶಿಸಿದ್ದೇನೆ, ಹಿಂದೆಗೆಯೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಈ ಪ್ರದೇಶದ ಜನರು ಸತ್ತವರಿಗಾಗಿ ಅಳುವರು. ಆಕಾಶವು ಕಪ್ಪಾಗುವುದು. ನಾನು ಹೇಳಿದ್ದೇನೆ, ಅದು ಬದಲಾಗುವುದಿಲ್ಲ. ನಾನು ಒಂದು ನಿರ್ಣಯ ತೆಗೆದುಕೊಂಡಿದ್ದೇನೆ, ನಾನು ನನ್ನ ಮನಸ್ಸನ್ನು ಬದಲಾಯಿಸುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:28
34 ತಿಳಿವುಗಳ ಹೋಲಿಕೆ  

ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


ಆದ್ದರಿಂದ ದೇಶವು ದುಃಖಪಡುತ್ತಿದೆ. ಅದರಲ್ಲಿ ವಾಸಿಸುವ ಪ್ರತಿಯೊಬ್ಬನು ಕುಗ್ಗಿಹೋಗಿದ್ದಾನೆ. ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ, ಸಮುದ್ರ ಮೀನುಗಳು ನಶಿಸಿ ಹೋಗುತ್ತಿವೆ.


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು, ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯ ಗತಿಯನ್ನು ನೋಡುವುದೇ ಇಲ್ಲ, ಎಂದು ಹೇಳಿದ್ದಾರಷ್ಟೆ.


ನಾನು ಆಕಾಶಗಳಿಗೆ ಅಂಧಕಾರವನ್ನು ಹೊದಿಸಿ, ಗೋಣಿತಟ್ಟನ್ನು ಅದರ ಹೊದಿಕೆಯನ್ನಾಗಿ ಮಾಡುವೆನು.”


ಆ ದಿನದಲ್ಲಿ ಅವರು ಸಮುದ್ರವು ಭೋರ್ಗರೆಯುವಂತೆ ಅದರ ಮೇಲೆ ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವನ್ನೂ, ದುಃಖವನ್ನೂ ನೋಡುವೆ. ಸೂರ್ಯ ಕೂಡ ಮೋಡಗಳಿಂದ ಕಪ್ಪಾಗುವುದು.


ಕುರಿಮರಿ ಆಗಿರುವವರು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾ ಭೂಕಂಪವಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.


ಆದರೆ ಯೇಸು ದೇವರ ಆಣೆಯಿಂದಲೇ ಯಾಜಕರಾದರು. ಹೀಗೆ ದೇವರು ಹೇಳಿದ್ದೇನೆಂದರೆ: “ ಕರ್ತ ಆಗಿರುವ ನಾನು ಆಣೆಯಿಟ್ಟು ಹೇಳಿದ್ದೇನೆ. ನಾನು ಎಂದಿಗೂ ಮನಸ್ಸನ್ನು ಬದಲಾಯಿಸುವುದಿಲ್ಲ. ‘ನೀನು ಸದಾಕಾಲವೂ ಯಾಜಕನಾಗಿದ್ದೀ.’ ”


ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.


ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು,


ಆಗ ಸುಮಾರು ಮಧ್ಯಾಹ್ನವಾಗಿತ್ತು, ಆ ಹೊತ್ತಿನಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.


ಮಧ್ಯಾಹ್ನದಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.


ಆಗ ಮಧ್ಯಾಹ್ನದಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.


ಹೊಲವು ಹಾಳಾಗಿದೆ; ಭೂಮಿಯು ಒಣಗಿದೆ, ಧಾನ್ಯವು ನಾಶವಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ತೀರಿಹೋಗಿದೆ.


“ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. ಮರಣದಿಂದ ಅವರನ್ನು ಬಿಡಿಸುವೆನು. ಮರಣವೇ ನಿನ್ನ ಉಪದ್ರವ ಎಲ್ಲಿ? ಪಾತಾಳವೇ ನಿನ್ನ ವಿನಾಶವೆಲ್ಲಿ? “ಅನುಕಂಪವು ನನ್ನಿಂದ ದೂರವಾಗಿದೆ.


“ ‘ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ. ನಾನು ಕೆಲಸ ಮಾಡುವ ಸಮಯ ಬಂದಿದೆ. ನಾನು ಅದನ್ನು ಮಾಡದೆ ಬಿಡುವುದಿಲ್ಲ. ಕಟಾಕ್ಷ ತೋರಿಸುವುದಿಲ್ಲ. ಹಿಂದೆಗೆಯೆನು. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯತೀರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಯೆಹೋವ ದೇವರು ತಮ್ಮ ಹೃದಯಾಲೋಚನೆಯನ್ನು ನಡಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.


ಆತನು ತನ್ನ ಹೃದಯದ ಆಲೋಚನೆಗಳನ್ನು ನಡೆಸಿ ತೀರಿಸುವವರೆಗೂ ಯೆಹೋವ ದೇವರ ಕೋಪವು ತಿರುಗುವುದಿಲ್ಲ. ಅಂತ್ಯ ದಿವಸಗಳಲ್ಲಿ ನೀವು ಅದನ್ನು ಸಂಪೂರ್ಣವಾಗಿ ಗ್ರಹಿಸುವಿರಿ.


ಏಕೆಂದರೆ ದೇಶವು ವ್ಯಭಿಚಾರಗಳಿಂದ ತುಂಬಿದೆ. ದೇಶವು ಶಾಪದಿಂದ ದುಃಖಿಸುತ್ತದೆ. ಮರುಭೂಮಿಯ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ. ಪ್ರವಾದಿಗಳು ಕೆಟ್ಟ ಮಾರ್ಗವನ್ನು ಅನುಸರಿಸುತ್ತಾರೆ ಮತ್ತು ತಮ್ಮ ಶಕ್ತಿಯನ್ನು ಅನ್ಯಾಯವಾಗಿ ಬಳಸುತ್ತಾರೆ.


“ಯೆಹೂದವು ದುಃಖಪಡುತ್ತದೆ. ಅವಳ ನಗರಗಳು ಸೊರಗುತ್ತವೆ; ಅವರು ಭೂಮಿಗಾಗಿ ಗೋಳಾಡುತ್ತಾರೆ, ಯೆರೂಸಲೇಮಿನ ಕೂಗು ಏರಿ ಬಂತು.


ಅದನ್ನು ಹಾಳು ಮಾಡಿದ್ದಾರೆ. ಅದು ಒಣಗಿ ಬರಿದಾಗಿ ಹೋಗಿದೆ. ದೇಶವೆಲ್ಲಾ ಹಾಳಾಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವುದಿಲ್ಲ.


“ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ. ಏಕೆಂದರೆ ನಾನು ಅದನ್ನು ಕೇಳಿಸಿಕೊಳ್ಳುವುದಿಲ್ಲ.


ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವುದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿ ಎಲೆ ಒಣಗಿ, ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಸುಕ್ಕುಗಟ್ಟಿದ ಅಂಜೂರ ಹಣ್ಣುಗಳು ಉದುರುವಂತೆ ತಾರಾಮಂಡಲವೆಲ್ಲಾ ಬಾಡಿ ಬೀಳುವದು.


ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವುದು. ಲೋಕವು ಸೊರಗಿ ಬಾಡಿಹೋಗುವುದು. ಆಕಾಶವು ಭೂಮಿಯೊಂದಿಗೆ ಕುಗ್ಗಿಹೋಗುವುದು.


ಇಸ್ರಾಯೇಲಿನ ಪ್ರತಾಪರು ಸುಳ್ಳು ಹೇಳುವವರಲ್ಲ, ಮಾತನ್ನು ಹಿಂತೆಗೆದುಕೊಳ್ಳುವವರಲ್ಲ. ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದನು.


ಬಾಬಿಲೋನಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ; ಪಹರೆಯನ್ನು ಬಲಪಡಿಸಿರಿ; ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿಕೊಳ್ಳುವವರನ್ನು ಸಿದ್ಧಮಾಡಿರಿ; ಏಕೆಂದರೆ ಯೆಹೋವ ದೇವರು ಬಾಬಿಲೋನಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿದ್ದನ್ನು ಮಾಡಿದ್ದಾರೆ.


ಯೆಹೋವ ದೇವರು ತಾವು ಸಂಕಲ್ಪಿಸಿದ್ದನ್ನು ಮಾಡಿದ್ದಾರೆ. ಅವರು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತಮ್ಮ ವಾಕ್ಯವನ್ನು ಪೂರೈಸಿದ್ದಾರೆ. ಅವರು ಕೆಡವಿ ಕನಿಕರಿಸಲಿಲ್ಲ. ಅವರು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿದ್ದಾರೆ. ಆತನು ನಿನ್ನ ವೈರಿಗಳ ಕೊಂಬನ್ನು ಎತ್ತಿದ್ದಾರೆ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಕರುಣಿಸದೆ, ವಿನಾಶವನ್ನು ಬರಮಾಡಲು ಯೋಚಿಸಿದೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು