ಯೆರೆಮೀಯ 4:5 - ಕನ್ನಡ ಸಮಕಾಲಿಕ ಅನುವಾದ5 “ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸಲೇಮಿನಲ್ಲಿ ಪ್ರಕಟಿಸಿರಿ, ‘ಇಡೀ ದೇಶದಲ್ಲಿ ತುತೂರಿ ಊದಿರಿ!’ ಎಂದು ಹೇಳಿರಿ. ಗಟ್ಟಿಯಾಗಿ ಹೀಗೆ ಕೂಗಿರಿ, ‘ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ!’ ಎಂದು ಹೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಜುದೇಯದಲ್ಲಿ ಸಾರಿರಿ; ಜೆರುಸಲೇಮಿನಲ್ಲಿ ಪ್ರಕಟಿಸಿರಿ. ನಾಡಿನಲ್ಲೆಲ್ಲ ಕೊಂಬೂದುತ್ತಾ ಆಜ್ಞಾಪಿಸಿರಿ. ‘ಕೂಡಿಬನ್ನಿ, ಕೋಟೆಕೊತ್ತಲಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ’ ಎಂದು ಕೂಗಿ ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೂದದಲ್ಲಿ ಸಾರಿರಿ, ಯೆರೂಸಲೇವಿುನೊಳಗೆ ಪ್ರಕಟಿಸಿರಿ; ದೇಶದಲ್ಲೆಲ್ಲಾ ಕೊಂಬೂದುವಂತೆ ಅಪ್ಪಣೆಕೊಡಿರಿ; ಕೂಡಿಕೊಂಡು ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಈ ಸಂದೇಶವನ್ನು ಯೆಹೂದ ಜನರಲ್ಲಿ ಸಾರಿರಿ: ಜೆರುಸಲೇಮ್ ನಗರದ ಪ್ರತಿಯೊಬ್ಬನಿಗೂ ದೇಶದಲ್ಲೆಲ್ಲಾ ತುತ್ತೂರಿಗಳನ್ನು ಊದಿರಿ ಎಂದು ಹೇಳಿರಿ. ದೊಡ್ಡ ಧ್ವನಿಯಲ್ಲಿ ‘ಒಂದು ಕಡೆ ಸೇರೋಣ ಬನ್ನಿ, ರಕ್ಷಣೆಗಾಗಿ ಭದ್ರವಾದ ನಗರಗಳಿಗೆ ಓಡಿಹೋಗೋಣ ಬನ್ನಿ’ ಎಂದು ಕೂಗಿ ಹೇಳಿರಿ. ಅಧ್ಯಾಯವನ್ನು ನೋಡಿ |