ಯೆರೆಮೀಯ 4:6 - ಕನ್ನಡ ಸಮಕಾಲಿಕ ಅನುವಾದ6 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ವಿಳಂಬವಿಲ್ಲದೆ ಸುರಕ್ಷತೆಗಾಗಿ ಓಡಿಹೋಗಿರಿ. ಏಕೆಂದರೆ ನಾನು ಉತ್ತರದಿಂದ ಕೇಡನ್ನೂ, ದೊಡ್ಡ ನಾಶವನ್ನೂ ತರುತ್ತೇನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಉತ್ತರ ದಿಕ್ಕಿನಿಂದ ವಿಪತ್ತನ್ನು ಮತ್ತು ಘೋರನಾಶವನ್ನು ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸಿಯೋನಿನ ಕಡೆಗೆ ಧ್ವಜವನ್ನೆತ್ತಿರಿ. ತಡಮಾಡದೆ ವಲಸೆಹೋಗಿರಿ. ಸರ್ವೇಶ್ವರ ಉತ್ತರದಿಂದ ವಿಪತ್ತನ್ನೂ ಘೋರ ನಾಶವನ್ನೂ ಬರಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಬಡಗಲಿಂದ ವಿಪತ್ತನ್ನೂ ಘೋರನಾಶನವನ್ನೂ ಬರಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಚೀಯೋನಿನ ಕಡೆಗೆ ಧ್ವಜವನ್ನು ಎತ್ತಿ ಸಂಕೇತ ಕೊಡಿ. ನಿಲ್ಲಬೇಡಿ. ನಿಮ್ಮ ಜೀವ ರಕ್ಷಣೆಗಾಗಿ ಓಡಿರಿ. ನಾನು ಉತ್ತರದಿಂದ ವಿಪತ್ತನ್ನು ತರುತ್ತಿರುವುದರಿಂದ ನೀವು ಹೀಗೆ ಮಾಡಬೇಕು. ನಾನು ಭಯಂಕರವಾದ ವಿನಾಶವನ್ನು ಬರಮಾಡಲಿದ್ದೇನೆ.” ಅಧ್ಯಾಯವನ್ನು ನೋಡಿ |
ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’
“ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ.