Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:7 - ಕನ್ನಡ ಸಮಕಾಲಿಕ ಅನುವಾದ

7 ಸಿಂಹವು ತನ್ನ ಪೊದೆಯೊಳಗಿಂದ ಏರಿ ಬರುತ್ತದೆ. ಇತರ ಜನಾಂಗಗಳನ್ನು ನಾಶ ಮಾಡುವವನು ಹೊರಟಿದ್ದಾನೆ. ನಿನ್ನ ದೇಶವನ್ನು ಹಾಳು ಮಾಡುವುದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ. ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜನಾಂಗಘಾತುಕವಾದ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದಿದೆ; ಹೊರಟಿದೆ, ಸ್ಥಳದಿಂದ ತೆರಳಿದೆ; ನಿನ್ನ ದೇಶವನ್ನು ಹಾಳುಮಾಡುವದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ನಿವಾಸಿಗಳಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:7
33 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ಅಡವಿಯ ಸಿಂಹವು ಅವರನ್ನು ದಾಳಿಮಾಡುವುದು. ಕಾಡಿನ ತೋಳವು ಅವರನ್ನು ಸೂರೆಮಾಡುವುದು. ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವುದು. ಅಲ್ಲಿಂದ ಹೊರಗೆ ಬರುವವರೆಲ್ಲರೂ ಸೀಳಲಾಗುವರು. ಏಕೆಂದರೆ, ಅವರ ದ್ರೋಹಗಳು ಬಹಳವಾಗಿವೆ. ಅವರ ಹಿಂಜಾರುವಿಕೆಯು ಹೆಚ್ಚಾಗಿವೆ.


ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಗರ್ಜಿಸಿ, ಅಬ್ಬರಿಸುತ್ತವೆ. ಅವನ ದೇಶವನ್ನು ಹಾಳು ಮಾಡುತ್ತವೆ. ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.


ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,


ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ. ನಿಮ್ಮ ಹೊಲಗಳನ್ನು ಪರರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಇತರ ಜನರಿಂದ ಕೆಡವಿಬಿದ್ದು ಹಾಳಾಗಿದೆ.


“ಮೊದಲನೆಯದು ಸಿಂಹದ ಹಾಗಿತ್ತು, ಆದರೆ ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ನಾನು ಗಮನಿಸಲು, ಅದರ ರೆಕ್ಕೆಗಳನ್ನು ಕಿತ್ತುಹಾಕಲಾಗಿ, ಅದು ನೆಲದಿಂದ ಎತ್ತರಕ್ಕೆ ಮನುಷ್ಯನಂತೆ ಕಾಲೂರಿ ನಿಂತಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲಾಯಿತು.


“ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಸ್ಸೀರಿಯನ ಅರಸನು ಅವನನ್ನು ತಿಂದುಬಿಟ್ಟನು. ಕಡೆಯಲ್ಲಿ ಬಾಬಿಲೋನಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.”


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


“ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”


ಯೆಹೋವ ದೇವರು ಹೇಳುತ್ತಾರೆ, ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರುಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು ಮತ್ತು ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗಿ ಮಾಡುವೆನು.”


“ಯೆಹೋವ ದೇವರು ಹೇಳುವುದೇನೆಂದರೆ: ‘ “ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು,” ಎಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ


ಈ ದೇವಾಲಯಕ್ಕೆ ಶೀಲೋವಿನ ಹಾಗೆ ಆಗುವುದೆಂದೂ, ಈ ಪಟ್ಟಣವೂ ನಿವಾಸಿಗಳಿಲ್ಲದೆ ಹಾಳಾಗುವುದೆಂದೂ ಯೆಹೋವ ದೇವರ ಹೆಸರಿನಲ್ಲಿ ಏಕೆ ನೀನು ಪ್ರವಾದಿಸಿದ್ದೀ?” ಎಂದರು. ಆಗ ಜನರೆಲ್ಲರು ಯೆಹೋವ ದೇವರ ಆಲಯದಲ್ಲಿ ಯೆರೆಮೀಯನಿಗೆ ವಿರೋಧವಾಗಿ ಕೂಡಿಕೊಂಡರು.


ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, ಅವರ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.


ಸೇನಾಧೀಶ್ವರ ಯೆಹೋವ ದೇವರು ನನ್ನ ಕಿವಿಗಳಲ್ಲಿ ಹೇಳುವುದೇನೆಂದರೆ: “ನಿಜವಾಗಿಯೂ ದೊಡ್ಡ ಮನೆಗಳು ಬರಿದಾಗುವುವು ಸುಂದರ ಭವನಗಳು ನಿವಾಸಿಗಳಿಲ್ಲದೆ ಹಾಳಾಗುವುವು.


ಯೆಹೋಯಾಕೀಮನ ಆಳಿಕೆಯಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶವನ್ನು ದಾಳಿಮಾಡಿದನು. ಯೆಹೋಯಾಕೀಮನು ಮೂರು ವರ್ಷ ಅವನ ಸೇವಕನಾಗಿದ್ದು, ತರುವಾಯ ಅವನ ಮೇಲೆ ತಿರುಗಿಬಿದ್ದನು.


ಅವರು ಅವನಿಗೆ ಕೊಟ್ಟ ಮಹತ್ತಿನ ನಿಮಿತ್ತ ಸಕಲ ಪ್ರಜೆಗಳೂ, ಜನಾಂಗಗಳೂ, ಭಾಷೆಯವರೂ ಅವನ ಮುಂದೆ ಹೆದರಿ ನಡುಗಿದರು. ತನಗೆ ಬೇಕಾದವರನ್ನು ಬದುಕಿಸಿ ಬೇಡವಾದವರನ್ನು ಕೊಂದನು. ಇಷ್ಟವಿದ್ದವರನ್ನು ಸುಸ್ಥಿತಿಗೆ ಏರಿಸಿ, ಇಷ್ಟವಿಲ್ಲದವರನ್ನು ಕೆಳಕ್ಕಿಳಿಸಿದನು.


ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು; ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”


“ ‘ “ಆದರೆ ಯಾವುದೇ ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲು ಕೊಡಲು ಒಪ್ಪದೆ ಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೇ ಅದನ್ನು ನಿರ್ಮೂಲ ಮಾಡಿಸುವೆನು, ಇದು ಯೆಹೋವ ದೇವರಾದ ನನ್ನ ನುಡಿ.


ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.


ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು.


ರಾವುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವುದು. ಪೊದೆಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು. ಪಟ್ಟಣಗಳೆಲ್ಲಾ ನಾಶವಾಗುವುವು. ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.


ನಿನಗೆ ವಿರೋಧವಾಗಿ ತಮ್ಮ ತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡುತ್ತೇನೆ. ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.


“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿನ ಮೇಲೆಯೂ, ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ಕಂಡಿದ್ದೀರಿ.


ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವುವು. ದೇಶವು ನಿರ್ಜನವಾಗುವುದು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’ ”


ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರವಾದ ಬೆಂಕಿ ನಿನ್ನ ಮೇಲೆ ಊದಿ ನಾಶಪಡಿಸುವುದರಲ್ಲಿ ಗಟ್ಟಿಗರಾದ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು.


“ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನ ವಿಷಯವಾಗಿ ಪ್ರಲಾಪವನ್ನೆತ್ತಿ ಅವನಿಗೆ ಹೇಳಬೇಕಾದದ್ದೇನೆಂದರೆ: “ ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ, ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಮಾಡಿದೆ.


ನಿಮ್ಮ ಪಟ್ಟಣಗಳನ್ನು ನಾನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಸುವಾಸನೆಗಳನ್ನು ಮೂಸಿ ನೋಡದೆ ಇರುವೆನು.


ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.


ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು. ಅವನ ಬಲವಾದವುಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ. ಏಕೆಂದರೆ, ಅವರು ದೇಶವನ್ನೂ, ಅದರಲ್ಲಿರುವುದೆಲ್ಲವನ್ನೂ, ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ನುಂಗಲು ಬಂದಿದ್ದಾರೆ.


ಯೆಹೋವ ದೇವರು ಯೆಹೂದದ ಅರಸನ ಅರಮನೆಗೆ ಹೀಗೆ ಹೇಳುತ್ತಾರೆ: “ನೀನು ನನಗೆ ಗಿಲ್ಯಾದೂ, ಲೆಬನೋನಿನ ಗಿರಿಶೃಂಗ ಆಗಿದ್ದೀ. ಆದರೂ ನಿಶ್ಚಯವಾಗಿ ನಿನ್ನನ್ನು ಮರುಭೂಮಿಯಾಗಿಯೂ, ನಿವಾಸಿಗಳಿಲ್ಲದ ಪಟ್ಟಣಗಳನ್ನಾಗಿಯೂ ಮಾಡುವೆನು.


“ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ, ‘ನನ್ನ ಜೀವದಾಣೆ,’ ಬೆಟ್ಟಗಳಲ್ಲಿ ತಾಬೋರಿನಂತೆಯೂ, ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯವಾಗಿ ಬರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು