ಯೆರೆಮೀಯ 40:12 - ಕನ್ನಡ ಸಮಕಾಲಿಕ ಅನುವಾದ12 ಯೆಹೂದ್ಯರೆಲ್ಲರೂ, ಅವರು ಓಡಿಸಲಾಗಿದ್ದ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು, ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು, ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ, ಬೇಸಿಗೆ ಕಾಲದ ಹಣ್ಣುಗಳನ್ನೂ ಕೂಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ವರ್ತಮಾನವನ್ನು ಕೇಳಿ ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತಾವು ಹೊರದೂಡಲ್ಪಟ್ಟು ವಾಸಮಾಡುತ್ತಿದ್ದ ಎಲ್ಲಾ ಊರುಗಳಿಂದ ಜುದೇಯಕ್ಕೆ ಹಿಂದಿರುಗಿದರು. ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ಸೇರಿಕೊಂಡರು. ದ್ರಾಕ್ಷಾರಸವನ್ನೂ ಹಣ್ಣುಹಂಪಲುಗಳನ್ನೂ ಹೇರಳವಾಗಿ ಕೂಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ವಿುಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೂದದ ಆ ಜನರು ಈ ಸಮಾಚಾರವನ್ನು ಕೇಳಿದ ಕೂಡಲೆ ತಾವು ಚದುರಿಹೋಗಿದ್ದ ಎಲ್ಲಾ ದೇಶಗಳಿಂದ ಯೆಹೂದ ಪ್ರದೇಶಕ್ಕೆ ಹಿಂತಿರುಗಿ ಮಿಚ್ಫದಲ್ಲಿ ಗೆದಲ್ಯನ ಬಳಿಗೆ ಬಂದರು. ಅವರು ದ್ರಾಕ್ಷಾರಸವನ್ನು ಮತ್ತು ಹಣ್ಣುಗಳನ್ನು ಸಮೃದ್ಧಿಯಾಗಿ ಸಂಗ್ರಹಿಸಿದರು. ಅಧ್ಯಾಯವನ್ನು ನೋಡಿ |