Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:5 - ಕನ್ನಡ ಸಮಕಾಲಿಕ ಅನುವಾದ

5 ಯೆರೆಮೀಯನು ಇನ್ನು ಹಿಂದಿರುಗದೆ ಇರುವಾಗ, ನೆಬೂಜರದಾನನು ಹೇಳಿದ್ದೇನೆಂದರೆ: “ಬಾಬಿಲೋನಿನ ಅರಸನು ಯೆಹೂದದ ಪಟ್ಟಣಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನ ಬಳಿಗೆ ತಿರುಗಿಕೋ; ಅವನ ಸಂಗಡ ಜನರೊಳಗೆ ವಾಸಮಾಡು. ಇಲ್ಲವೆ ಎಲ್ಲಿ ಹೋಗುವುದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ, ಅಲ್ಲಿಗೆ ಹೋಗು,” ಎಂದು ಹೇಳಿ, ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ, ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, “ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯೆರೆಮೀಯನು ಉತ್ತರಕೊಡದೆ ಇರಲು ನೆಬೂಜರದಾನನು ಅವನಿಗೆ, “ಬಾಬಿಲೋನಿಯದ ಅರಸನು, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಜುದೇಯದ ನಗರಗಳಿಗೆ ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆ. ಅವನ ಬಳಿಗೆ ಹೋಗು, ಅವನ ಹತ್ತಿರ ಜನರ ನಡುವೆ ವಾಸಮಾಡುವ ಇಲ್ಲವೆ ಎಲ್ಲಿಗೆ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಬಹುಮಾನವನ್ನೂ ಕೊಡಿಸಿ ಅವನನ್ನು ಕಳಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ - ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇವಿುಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು ಎಂದು ಹೇಳಿ ಬುತ್ತಿಯನ್ನೂ ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಥವಾ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನಲ್ಲಿಗೆ ಹಿಂತಿರುಗಿಹೋಗು. ಬಾಬಿಲೋನಿನ ರಾಜನು ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯಾಗಿ ನೇಮಿಸಿದ್ದಾನೆ. ಗೆದಲ್ಯನಲ್ಲಿಗೆ ಹೋಗಿ ಜನರೊಂದಿಗೆ ವಾಸಿಸು; ಅಥವಾ ನಿನ್ನ ಮನಸ್ಸು ಬಂದಲ್ಲಿಗೆ ಹೋಗು.” ತರುವಾಯ ನೆಬೂಜರದಾನನು ಯೆರೆಮೀಯನಿಗೆ ಊಟವನ್ನೂ ಕಾಣಿಕೆಯನ್ನೂ ಕೊಟ್ಟು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:5
24 ತಿಳಿವುಗಳ ಹೋಲಿಕೆ  

ಅವರು ಕಳುಹಿಸಿ ಯೆರೆಮೀಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ, ಶಾಫಾನನ ಮೊಮ್ಮಗನೂ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮನೆಗೆ ಕರೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.


ನೆತನ್ಯನ ಮಗ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಜನರಸಹಿತವಾಗಿ ಎದ್ದು, ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮೊಮ್ಮಗ ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಹೊಡೆದು ಕೊಂದುಹಾಕಿದನು.


ಆದ್ದರಿಂದ, “ಕರ್ತದೇವರು ನನ್ನ ಸಹಾಯಕರು, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?” ಎಂದು ನಾವು ಧೈರ್ಯವಾಗಿ ಹೇಳುವೆವು.


ಅವರು ಅನೇಕ ವಿಧವಾಗಿ ನಮ್ಮನ್ನು ಗೌರವಿಸಿದರು. ನಾವು ಪ್ರಯಾಣಕ್ಕೆ ಸಿದ್ಧರಾದಾಗ ನಮಗೆ ಅಗತ್ಯವಿದ್ದವುಗಳನ್ನೆಲ್ಲಾ ತಂದು ಒದಗಿಸಿಕೊಟ್ಟರು.


ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಬಯಸಿ, ಸೈನಿಕರು ಹಾಗೆ ಮಾಡದಂತೆ ನೋಡಿಕೊಂಡು, ಈಜಲು ಬಲ್ಲವರು ಮೊದಲು ಸಮುದ್ರದಲ್ಲಿ ಜಿಗಿದು ಭೂಮಿಯನ್ನು ತಲುಪಬೇಕೆಂದು ಆಜ್ಞಾಪಿಸಿದನು.


ಮರುದಿನ ನಾವು ಸೀದೋನಿಗೆ ತಲುಪಿದೆವು. ಪೌಲನಿಗೆ ಯೂಲ್ಯನು ದಯೆತೋರಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗುವುದಕ್ಕೂ ಅವರಿಂದ ಉಪಚಾರವನ್ನು ಹೊಂದುವುದಕ್ಕೂ ಅನುಮತಿಸಿದನು.


ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಒಳ್ಳೆಯದೆಂದು ತೋಚಿದರೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ, ದೇಶವೆಲ್ಲಾ ನಿನ್ನ ಮುಂದೆ ಇದೆ; ಎಲ್ಲಿ ಹೋಗುವುದಕ್ಕೆ ನಿನಗೆ ಒಳ್ಳೆಯದೆಂದೂ, ಸರಿಯೆಂದೂ ಕಾಣುತ್ತದೋ, ಅಲ್ಲಿಗೆ ಹೋಗು,” ಎಂಬುದು.


ಇತ್ತ ಯಾಜಕರೂ, ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ, ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.


ಇದಕ್ಕೆ ಯೆಹೋವ ದೇವರು, ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಶತ್ರುವನ್ನು ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ನಿನಗೆ ಶರಣಾಗತನನ್ನಾಗಿ ಮಾಡುವೆನು.


ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.


ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.


ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ‘ಮೇಲಕ್ಕೆ ಎತ್ತು!’ ಎಂದು ನೀನು ದೇವರಿಗೆ ಮೊರೆಯಿಡಲು, ದೇವರು ಬಿದ್ದವರನ್ನು ರಕ್ಷಿಸುವರು.


ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.


ಆಗ ಎಜ್ರನು, “ನಮ್ಮ ತಂದೆಗಳ ದೇವರಾಗಿರುವ ಯೆಹೋವ ದೇವರು ಸ್ತುತಿಹೊಂದಲಿ! ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಮಹಿಮೆಯನ್ನು ತರುವಂತೆ, ಅರಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟಿದ್ದಾರೆ.


ಈ ಎಜ್ರನು ಬಾಬಿಲೋನಿನಿಂದ ಬಂದನು, ಅವನು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರು ಕೊಟ್ಟ ಮೋಶೆಯ ನಿಯಮದಲ್ಲಿ ಪಾಂಡಿತ್ಯ ಪಡೆದ ನಿಯಮಶಾಸ್ತ್ರಿ ಆಗಿದ್ದನು. ಅವನ ಮೇಲೆ ಅವನ ದೇವರಾಗಿರುವ ಯೆಹೋವ ದೇವರ ಕೈ ಇದ್ದುದರಿಂದ, ಅವನು ಕೇಳಿದ್ದನ್ನೆಲ್ಲಾ ಅರಸನು ಕೊಟ್ಟನು.


ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕನ ಮಗನಾದ ಅಬ್ದೋನನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,


ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಅಸಾಯ ಎಂಬವರು ಪ್ರವಾದಿನಿ ಹುಲ್ದಳ ಬಳಿಗೆ ವಿಚಾರಿಸಲು ಹೋದರು. ಆಕೆಯು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ. ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.


ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕಾಯನ ಮಗನಾದ ಅಕ್ಬೋರನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,


ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಮಿಚ್ಪದಲ್ಲಿದ್ದ ಅಹೀಕಾಮನ ಮಗ ಗೆದಲ್ಯನ ಬಳಿಗೆ ಬಂದರು. ಅವರು ಮಿಚ್ಪದಲ್ಲಿಯೇ ಊಟಮಾಡುತ್ತಿದ್ದಾಗ,


ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದಲೇ, ಅವರಿಗೆ ಭಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು