ಯೆರೆಮೀಯ 40:7 - ಕನ್ನಡ ಸಮಕಾಲಿಕ ಅನುವಾದ7 ಬಾಬಿಲೋನಿನ ಅರಸನು ಅಹೀಕಾಮನ ಮಗ ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಮತ್ತು ಬಾಬಿಲೋನಿಗೆ ಸೆರೆಹೋಗದೆ ಇದ್ದ ದೇಶಿಯರಲ್ಲಿ ಬಡವರಾದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿಯನ್ನು ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ ಕೇಳಿದಾಗ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇಮಿಸಿ, ಬಾಬಿಲೋನಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ಬಡ, ದಿಕ್ಕಿಲ್ಲದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಮತ್ತು ಸೇನಾಪತಿಗಳು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬಾಬಿಲೋನಿಯದ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ನಾಡಿನ ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆಂಬ ಸುದ್ದಿ ಹಾಗು ಬಾಬಿಲೋನಿಗೆ ಸೆರೆಹೋಗದ ನಾಡಿಗರಲ್ಲಿ ಬಡವರಾದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿ ಹರಡಿತು. ಕಾಡುಮೇಡುಗಳಲ್ಲಿದ್ದ ಎಲ್ಲ ಯಹೂದ್ಯ ಸೈನಿಕರೂ ಸೇನಾಪತಿಗಳೂ ಇದನ್ನು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇವಿುಸಿ ಬಾಬೆಲಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ದರಿದ್ರರಾದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಸೇನಾಪತಿಗಳೂ ಕೇಳಿ ವಿುಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಜೆರುಸಲೇಮ್ ನಗರವನ್ನು ನಾಶಮಾಡಿದಾಗ ಯೆಹೂದದ ಕೆಲವು ಜನ ಸೈನ್ಯಾಧಿಕಾರಿಗಳು ಮತ್ತು ಅವನ ಸೈನಿಕರು ಇನ್ನೂ ಕಾಡುಮೇಡುಗಳಲ್ಲಿದ್ದರು. ಬಾಬಿಲೋನಿನ ರಾಜನು ಅಹೀಕಾಮನ ಮಗನಾದ ಗೆದಲ್ಯನನ್ನು ಅಳಿದುಳಿದ ಜನರ ಮೇಲ್ವಿಚಾರಕನನ್ನಾಗಿ ನೇಮಿಸಿದ್ದಾನೆಂಬ ಸಮಾಚಾರ ಕಿವಿಗೆ ಬಿತ್ತು. ಇಲ್ಲಿ ಅಳಿದುಳಿದವರು ಬಹಳ ಬಡವರಾದ ಗಂಡಸರು, ಹೆಂಗಸರು ಮತ್ತು ಮಕ್ಕಳು. ಅವರನ್ನು ಬಂಧಿಗಳನ್ನಾಗಿ ಮಾಡಿಕೊಂಡು ಬಾಬಿಲೋನಿಗೆ ತೆಗೆದುಕೊಂಡು ಹೋಗಿರಲಿಲ್ಲ. ಅಧ್ಯಾಯವನ್ನು ನೋಡಿ |