Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:8 - ಕನ್ನಡ ಸಮಕಾಲಿಕ ಅನುವಾದ

8 ನೆತನ್ಯನ ಮಗ ಇಷ್ಮಾಯೇಲನೂ; ಕಾರೇಹನ ಮಗ ಯೋಹಾನಾನ್, ಯೋನಾತಾನ್; ತನ್ಹುಮೆತನ ಮಗ ಸೆರಾಯ್; ನೆಟೋಫದವನಾದ ಏಫಯನ ಪುತ್ರರೂ; ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ; ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಸೇನಾಪತಿಗಳು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹೀಗೆ ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ ನೆಟೋಫದವನಾದ ಏಫಯನ ಮಕ್ಕಳು ಗೆದಲ್ಯನ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ಸೇನಾಪತಿಗಳು ಯಾರಂದರೆ - ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು, ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಸೈನಿಕರು ಮಿಚ್ಫದಲ್ಲಿ ವಾಸವಾಗಿದ್ದ ಗೆದಲ್ಯನಲ್ಲಿಗೆ ಬಂದರು. ಆ ಸೈನಿಕರು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಮತ್ತು ಅವನ ಸೋದರ ಯೋನಾಥಾನ, ತನ್ಹಮೆತನ ಮಗನಾದ ಸೆರಾಯ, ನೆಟೋಫದವನಾದ ಏಫಯನ ಮಕ್ಕಳು, ಮಾಕಾ ಊರಿನ ಯೆಜನ್ಯ ಮತ್ತು ಅವರ ಸಂಗಡ ಇದ್ದ ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:8
29 ತಿಳಿವುಗಳ ಹೋಲಿಕೆ  

ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ, ಹೋಷಾಯನ ಮಗನಾದ ಎಜನೀಯನೂ, ಕಿರಿಯರು ಮೊದಲುಗೊಂಡು ಹಿರಿಯರವರೆಗೆ ಜನರೆಲ್ಲರು ಹತ್ತಿರ ಬಂದು,


ಮನಸ್ಸೆಯ ಮಗ ಯಾಯೀರನು ಅರ್ಗೋಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯವರೆಗೆ ಸ್ವಾಧೀನಮಾಡಿಕೊಂಡು, ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನವರೆಗೆ ಹವ್ವೋತ್ ಯಾಯೀರೆಂದು ಹೆಸರಿಟ್ಟನು.


ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಗರ್ವಿಷ್ಠ ಮನುಷ್ಯರೆಲ್ಲರೂ ಮಾತನಾಡಿ ಯೆರೆಮೀಯನಿಗೆ, “ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾಗಿರುವುದಕ್ಕೆ ಈಜಿಪ್ಟಿಗೆ ಹೋಗಬಾರದೆಂದು ಹೇಳುವುದಕ್ಕೆ ನಮ್ಮ ದೇವರಾದ ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ.


ಆಗ ಕಾರೇಹನ ಮಗ ಯೋಹಾನಾನನನ್ನೂ, ಅವನ ಸಂಗಡ ಇದ್ದ ಸೇನಾಪತಿಗಳೆಲ್ಲರನ್ನೂ, ಕಿರಿಯರು ಮೊದಲುಗೊಂಡು ಹಿರಿಯರೆಲ್ಲರವರೆಗೆ ಜನರೆಲ್ಲರನ್ನೂ ಕರೆದು,


ಯೆರೆಮೀಯನು ಅಹೀಕಾಮನ ಮಗ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ, ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.


ಬೇತ್ಲೆಹೇಮಿನವರೂ ನೆಟೋಫದವರೂ 188 ಮಂದಿ ಇದ್ದರು.


ಆಗ ಅಮ್ಮೋನಿಯರು ಹೊರಟು ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬಿನಿಂದಲೂ ಟೋಬಿನಿಂದಲೂ ಮಾಕಾನಿಂದಲೂ ಬಂದ ಅರಾಮ್ಯರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.


ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್‌ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.


ಅವನು ಹೆರ್ಮೋನ್ ಬೆಟ್ಟವನ್ನೂ ಸಲ್ಕಾ ನಗರವನ್ನೂ ಗೆಷೂರಿಯರ ಮತ್ತು ಮಾಕಾತೀಯರ ಮೇರೆಯವರೆಗೂ ಇದ್ದ ಇಡೀ ಬಾಷಾನ್ ನಾಡನ್ನು ಆಳುತ್ತಿದ್ದನು. ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದವರೆಗೂ ಅವನು ಆಳಿಕೊಂಡಿದ್ದನು.


ಆದರೆ ಕಾರೇಹನ ಮಗ ಯೋಹಾನಾನನೂ, ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವುದಕ್ಕೆ ತಿರುಗಿ ಬಂದ ಯೆಹೂದದಲ್ಲಿ ಉಳಿದವರನ್ನು,


ಹಾಗೆಯೇ ಮೋವಾಬಿನಲ್ಲಿಯೂ, ಅಮ್ಮೋನನ ಮಕ್ಕಳಲ್ಲಿಯೂ, ಎದೋಮಿನಲ್ಲಿಯೂ, ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆಲ್ಲರೂ ಬಾಬಿಲೋನಿನ ಅರಸನು ಯೆಹೂದದ ಒಂದು ಶೇಷವನ್ನು ಬಿಟ್ಟಿದ್ದನೆಂದೂ, ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂದು ಕೇಳಿದಾಗ


ನೀನು ಅವರಿಗೆ, ‘ನನ್ನನ್ನು ತಿರುಗಿ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯುವ ಹಾಗೆ ತೆಗೆದುಕೊಂಡು ಹೋಗಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು,’ ಎಂದು ಹೇಳಿದನು.”


ಆದ್ದರಿಂದ ಈಗ ಕಿವಿಗೊಡು. ನನ್ನ ಒಡೆಯನಾದ ಅರಸನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀಕಾರವಾಗಲಿ. ಲೇಖಕನಾದ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ,” ಎಂದನು.


ಆಗ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು, ಅವನನ್ನು ಹೊಡೆದು, ಲೇಖಕನಾದ ಯೋನಾತಾನನ ಮನೆಯಲ್ಲಿ ಬಂಧನದಲ್ಲಿ ಇಟ್ಟರು. ಏಕೆಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.


ಜೆರುಬ್ಬಾಬೆಲನ ಸಂಗಡ ಹಿಂದಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಹಾಗೂ ಬಾಣ. ಇಸ್ರಾಯೇಲ್ ಜನಾಂಗದ ಪುರುಷರ ಸಂಖ್ಯೆ:


ನೆಟೋಫದವನಾದ ಮಹರೈ; ನೆಟೋಫದವನಾದ ಬಾಣನ ಮಗ ಹೆಲೇದ್;


ಸಲ್ಮನ ವಂಶಜರು: ಬೇತ್ಲೆಹೇಮ್, ನೆಟೋಫಾ, ಅಟರೋತ್ ಬೇತ್ಯೋವಾಬ್ ಊರುಗಳವರೂ, ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಉತ್ಪತ್ತಿಯಾದರು.


ಕಾಲೇಬನ ಇನ್ನೊಬ್ಬ ಉಪಪತ್ನಿಯಾದ ಮಾಕಳು ಶೇಬರ್, ತಿರ್ಹನ ಎಂಬುವರನ್ನು ಹೆತ್ತಳು.


ಆದರೆ ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಬಾಬಿಲೋನಿಯರನ್ನೂ ಕೊಂದುಹಾಕಿದರು.


ಆದರೆ ಬಾಬಿಲೋನಿನ ಅರಸನು ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಕೇಳಿದ ಮೇಲೆ, ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ, ನೆತನ್ಯನ ಮಗ ಇಷ್ಮಾಯೇಲನೂ, ಕಾರೇಹನ ಮಗ ಯೋಹಾನಾನ್, ನೆಟೋಫದವನಾದ ತನ್ಹುಮೆತನ ಮಗ ಸೆರಾಯ್, ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ, ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.


ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟನು; ಗಿಲೋವಿನ ಅಹೀತೋಫೆಲ್ ಎಂಬವನ ಮಗ ಎಲೀಯಾಮ್;


ಇದಲ್ಲದೆ ಕಾರೇಹನ ಮಗ ಯೋಹಾನಾನನೂ, ಸೀಮೆಯಲ್ಲಿದ್ದ ಎಲ್ಲಾ ಸೇನಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು,


“ಅಮ್ಮೋನನ ಮಕ್ಕಳ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದಿದೆಯೋ?” ಎಂದನು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.


ಆಗ ಕಾರೇಹನ ಮಗ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡ ಮಾತನಾಡಿ, “ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದು ಹಾಕುತ್ತೇನೆ. ಅವನು ನಿನ್ನನ್ನು ಕೊಂದರೆ, ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರು ಚದರಿಹೋಗಿ, ಯೆಹೂದದಲ್ಲಿ ಉಳಿದವರು ನಾಶವಾಗುತ್ತಾರಲ್ಲಾ. ಏಕೆ ಹೀಗೆ ಆಗಬೇಕು?” ಎಂದು ವಿಜ್ಞಾಪಿಸಿದನು.


ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಮಿಚ್ಪದಲ್ಲಿದ್ದ ಅಹೀಕಾಮನ ಮಗ ಗೆದಲ್ಯನ ಬಳಿಗೆ ಬಂದರು. ಅವರು ಮಿಚ್ಪದಲ್ಲಿಯೇ ಊಟಮಾಡುತ್ತಿದ್ದಾಗ,


ನೆತನ್ಯನ ಮಗ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಜನರಸಹಿತವಾಗಿ ಎದ್ದು, ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮೊಮ್ಮಗ ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಹೊಡೆದು ಕೊಂದುಹಾಕಿದನು.


ಆದರೆ ಕಾರೇಹನ ಮಗ ಯೋಹಾನಾನನೂ, ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು