ಯೆರೆಮೀಯ 40:9 - ಕನ್ನಡ ಸಮಕಾಲಿಕ ಅನುವಾದ9 ಆಗ ಶಾಫಾನನ ಮಗ ಅಹೀಕಾಮನ ಮಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ ‘ಬಾಬಿಲೋನಿಯರಿಗೆ ಸೇವೆ ಮಾಡುವುದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,’ ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇವರಿಗೂ ಇವರ ಜನರಿಗೂ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, “ಬಾಬಿಲೋನಿಯರಿಗೆ ಅಧೀನರಾಗಿರಲು ಹೆದರಬೇಡಿ, ಬಾಬಿಲೋನಿನ ಅರಸನಿಗೆ ಅಧೀನರಾಗಿ ಅಲ್ಲಿಯೇ ವಾಸಮಾಡಿ. ಆಗ ನಿಮಗೆ ಒಳ್ಳೆಯದಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ - ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, ಆ ಸೈನಿಕರು ಮತ್ತು ಅವರ ಜನರು ಈಗ ಅಲ್ಲಿ ಹೆಚ್ಚು ಸುರಕ್ಷಿತರೆಂದು ನಂಬಿಕೆಹುಟ್ಟುವ ಹಾಗೆ ಆಣೆಮಾಡಿ ಹೇಳಿದನು. ಗೆದಲ್ಯನು ಹೀಗೆ ಹೇಳಿದನು. “ಸೈನಿಕರೇ, ಬಾಬಿಲೋನಿನ ಜನರ ಸೇವೆಮಾಡಲು ಭಯಪಡಬೇಡಿ. ಈ ಪ್ರದೇಶದಲ್ಲಿ ನೆಲೆಸಿ ಬಾಬಿಲೋನಿನ ರಾಜನ ಸೇವೆಮಾಡಿರಿ. ನೀವು ಹೀಗೆ ಮಾಡಿದರೆ ನಿಮಗೆಲ್ಲ ಒಳ್ಳೆಯದಾಗುವುದು. ಅಧ್ಯಾಯವನ್ನು ನೋಡಿ |