Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:15 - ಕನ್ನಡ ಸಮಕಾಲಿಕ ಅನುವಾದ

15 ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಜನರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು, ಅಮ್ಮೋನ್ಯರ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೆತನ್ಯನ ಮಗನಾದ ಇಷ್ಮಾಯೇಲನೋ ಎಂಟು ಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮೊರೆಹೊಕ್ಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೆತನ್ಯನ ಮಗ ಇಷ್ಮಾಯೇಲನಾದರೋ ಎಂಟುಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮರೆಹೊಕ್ಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೆತನ್ಯನ ಮಗನಾದ ಇಷ್ಮಾಯೇಲನೋ ಎಂಟು ಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮರೆಹೊಕ್ಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೆತನ್ಯನ ಮಗನಾದ ಇಷ್ಮಾಯೇಲನು ಮತ್ತು ಅವನ ಎಂಟು ಜನ ಸಂಗಡಿಗರು ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರ ಮೊರೆಹೊಕ್ಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:15
9 ತಿಳಿವುಗಳ ಹೋಲಿಕೆ  

ನರಹತ್ಯದ ಅಪರಾಧ ಭಾವನೆಯಿಂದ ಇರುವವನು, ಮರಣದೆಡೆಗೆ ಓಡುತ್ತಿರುವನು, ಅವನನ್ನು ಯಾರೂ ತಡೆಯದಿರಲಿ.


ಹೀಗೆ ಆಪತ್ತಿನ ದಿನ ದುಷ್ಟರು ತಪ್ಪಿಸಿಕೊಳ್ಳುತ್ತಾರೆ; ದೇವರ ದಂಡನೆಯ ದಿನದಲ್ಲಿ ಅವರು ಬಿಡುಗಡೆಯಾಗುತ್ತಾರೆ.


ಪ್ರತಿ ಸೈನಿಕನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದರು. ಆಗ ಅರಾಮ್ಯರು ಓಡಿಹೋದರು. ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.


ಆಗ ದಾವೀದನು ಅವರ ಮೇಲೆ ಬೆಳಗಿನಜಾವದಿಂದ ಮಾರನೆಯ ದಿವಸದ ಸಾಯಂಕಾಲದವರೆಗೂ ದಾಳಿಮಾಡುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿ ಹೋದ ನಾನೂರು ಮಂದಿ ಯುವಜನರ ಹೊರತು ಒಬ್ಬನಾದರೂ ತಪ್ಪಿಸಿಕೊಳ್ಳಲಿಲ್ಲ.


ಸರ್ಪವು ಪೌಲನ ಕೈಗೆ ಸುತ್ತಿಕೊಂಡಿರುವುದನ್ನು ದ್ವೀಪ ನಿವಾಸಿಗಳು ಕಂಡಾಗ, “ನಿಶ್ವಯವಾಗಿ ಈ ಮನುಷ್ಯನು ಕೊಲೆಗಾರನಾಗಿರಬೇಕು. ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಅವನನ್ನು ಜೀವಿಸಲಿಕ್ಕೆ ಬಿಡಲಿಲ್ಲ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ನೆತನ್ಯನ ಮಗ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಜನರಸಹಿತವಾಗಿ ಎದ್ದು, ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮೊಮ್ಮಗ ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಹೊಡೆದು ಕೊಂದುಹಾಕಿದನು.


ಆದರೆ ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಬಾಬಿಲೋನಿಯರನ್ನೂ ಕೊಂದುಹಾಕಿದರು.


ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರು ಸುತ್ತಿಕೊಂಡು ತಿರುಗಿಕೊಂಡು, ಕಾರೇಹನ ಮಗನಾದ ಯೋಹಾನಾನನ ಬಳಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು