ಯೆರೆಮೀಯ 41:8 - ಕನ್ನಡ ಸಮಕಾಲಿಕ ಅನುವಾದ8 ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಂದು ಹಾಕಬೇಡ. ಏಕೆಂದರೆ ನಮಗೆ ಹೊಲದಲ್ಲಿ ಗೋಧಿ, ಜವೆಗೋಧಿ, ಎಣ್ಣೆ, ಜೇನು ಇವುಗಳನ್ನು ಬಚ್ಚಿಟ್ಟಿದ್ದೇವೆ” ಎಂದು ಬಿನ್ನವಿಸಿದರು. ಆದ್ದರಿಂದ ಅವನು ಹಿಂದೆಗೆದು ಅವರನ್ನು, ಅವರ ಸಹೋದರರ ಮಧ್ಯದಲ್ಲಿ ಕೊಂದುಹಾಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ” ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡಿ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ ಇವುಗಳನ್ನು ಕಾಡಿನಲ್ಲಿ ರಾಶಿಯಾಗಿ ಬಚ್ಚಿಟ್ಟಿದ್ದೇವೆ,” ಎಂದು ಬಿನ್ನವಿಸಿದರು. ಈ ಕಾರಣ ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ - ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಉಳಿದ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ, ನಮ್ಮಲ್ಲಿ ಗೋಧಿ, ಜವೆಗೋಧಿ, ಎಣ್ಣೆ ಮತ್ತು ಜೇನುತುಪ್ಪ ಇವೆ. ನಾವು ಆ ವಸ್ತುಗಳನ್ನು ಒಂದು ಹೊಲದಲ್ಲಿ ಬಚ್ಚಿಟ್ಟಿದ್ದೇವೆ” ಎಂದು ಹೇಳಿದರು. ಆದ್ದರಿಂದ ಇಷ್ಮಾಯೇಲನು ಆ ಹತ್ತು ಮಂದಿಯನ್ನು ಬಿಟ್ಟುಬಿಟ್ಟನು. ಅವನು ಬೇರೆಯವರೊಂದಿಗೆ ಅವರನ್ನು ಕೊಲ್ಲಲಿಲ್ಲ. ಅಧ್ಯಾಯವನ್ನು ನೋಡಿ |