ಯೆರೆಮೀಯ 41:9 - ಕನ್ನಡ ಸಮಕಾಲಿಕ ಅನುವಾದ9 ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದುಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಬಾವಿಯು, ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ತೋಡಿಸಿದ್ದ ಬಾವಿಯೇ ಆಗಿತ್ತು. ಇದನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದು ಹಾಕಿದವರಿಂದ ತುಂಬಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇಷ್ಮಾಯೇಲನು ತಾನು ಗೆದಲ್ಯನ ಸಂಗಡ ಕೊಂದ ಇತರರ ಶವಗಳನ್ನು ಹಾಕಿದ ಬಾವಿಯು, ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ. ಆ ಬಾವಿಯನ್ನು ನೆತನ್ಯನ ಮಗನಾದ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಇಷ್ಮಾಯೇಲನು ತಾನು ಕೊಂದವರ ಶವಗಳನ್ನು ಗೆದಲ್ಯನ ಶವದ ಮೇಲೆ ಹಾಕಿಸಿದನು. ಹೀಗೆ ಹಾಕಿಸಿದ ಆ ಬಾವಿಯು ಇಸ್ರಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ ಆಗಿತ್ತು. ಆ ಬಾವಿಯನ್ನು ನೆತನ್ಯನ ಮಗ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇಷ್ಮಾಯೇಲನು ತಾನು ಕೊಂದವರ ಶವಗಳನ್ನು ಗೆದಲ್ಯನ ಶವದ ಮೇಲೆ ಹಾಕಿದ ಬಾವಿಯು, ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ. ಆ ಬಾವಿಯನ್ನು ನೆತನ್ಯನ ಮಗನಾದ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇಷ್ಮಾಯೇಲನು ಶವಗಳನ್ನು ಆ ಬಾವಿಯೊಳಗೆ ಹಾಕಿದನು. ಆ ಬಾವಿಯು ಬಹಳ ದೊಡ್ಡದಾಗಿತ್ತು. ಅದನ್ನು ಯೆಹೂದದ ರಾಜನಾದ ಆಸನು ತೋಡಿಸಿದ್ದನು. ಯುದ್ಧದ ಸಮಯದಲ್ಲಿ ನಗರದಲ್ಲಿ ನೀರು ಸಾಕಷ್ಟು ಇರಬೇಕೆಂಬ ಉದ್ದೇಶದಿಂದ ರಾಜನಾದ ಆಸನು ಈ ಬಾವಿಯನ್ನು ತೋಡಿಸಿದ್ದನು. ರಾಜನಾದ ಆಸನು ತನ್ನ ನಗರವನ್ನು ಇಸ್ರೇಲಿನ ರಾಜನಾದ ಬಾಷನಿಂದ ರಕ್ಷಿಸುವುದಕ್ಕಾಗಿ ಇದನ್ನು ಕಟ್ಟಿಸಿದ್ದನು. ಅಧ್ಯಾಯವನ್ನು ನೋಡಿ |