Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:10 - ಕನ್ನಡ ಸಮಕಾಲಿಕ ಅನುವಾದ

10 ‘ನೀವು ಇನ್ನು ಈ ದೇಶದಲ್ಲಿ ವಾಸಮಾಡಿದರೆ, ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತು ಹಾಕದೆ ನೆಡುವೆನು. ಏಕೆಂದರೆ ನಾನು ನಿಮಗೆ ಮಾಡಿರುವ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ‘ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವುದಿಲ್ಲ; ನೆಡುವೆನು, ಕೀಳುವುದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ‘ನೀವು ಈ ನಾಡಿನಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡುವುದಿಲ್ಲ, ನೆಡುವೆನು, ಕೀಳುವುದಿಲ್ಲ, ನಾನು ನಿಮಗೆ ಮಾಡಿದ ಕೇಡಿಗಾಗಿ ವಿಷಾದಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ‘ನೀವು ಯೆಹೂದದಲ್ಲಿ ವಾಸಮಾಡಿದರೆ ನಾನು ನಿಮ್ಮನ್ನು ನಾಶಮಾಡದೆ ಬಲಶಾಲಿಗಳನ್ನಾಗಿ ಮಾಡುತ್ತೇನೆ. ನಾನು ನಿಮ್ಮನ್ನು ನೆಡುತ್ತೇನೆ, ನಿಮ್ಮನ್ನು ಕೀಳುವುದಿಲ್ಲ. ನಾನು ನಿಮಗೆ ಬರಮಾಡಿದ ಭಯಂಕರವಾದ ಕೇಡಿಗಾಗಿ ದುಃಖಿತನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:10
25 ತಿಳಿವುಗಳ ಹೋಲಿಕೆ  

ಯೆಹೋವ ದೇವರಾದ ನಾನೇ ಬಿದ್ದುಹೋದದ್ದನ್ನು ಕಟ್ಟಿ, ಹಾಳಾದದ್ದನ್ನು ಬೆಳೆಯಿಸಿದ್ದೇನೆ ಎಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ ಮತ್ತು ನಾನೇ ಇದನ್ನು ಮಾಡುತ್ತೇನೆ.’


ನಾನು ಅವರನ್ನು ಕೀಳಲು, ಕೆಡವಲು, ಅಳಿಸಲು ಹಾಳುಮಾಡಲು, ಎಚ್ಚರವಹಿಸಿದ ಹಾಗೆಯೇ ಇನ್ನು ಮುಂದೆ ಅವರನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಅವರ ವಿಷಯವಾಗಿ ಎಚ್ಚರವಹಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ನಾನು ಅವರ ಒಳ್ಳೆಯದರ ಮೇಲೆ ನನ್ನ ದೃಷ್ಟಿಯನ್ನು ಇಟ್ಟುಕೊಳ್ಳುತ್ತೇನೆ. ಈ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು. ಕೆಡವಿಹಾಕದೆ ಅವರನ್ನು ಕಟ್ಟುವೆನು. ಕೀಳದೆ ಅವರನ್ನು ನೆಡುವೆನು.


ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ. ಅವರು ದಯೆಯೂ ಕರುಣೆಯೂ, ದೀರ್ಘಶಾಂತಿಯೂ ಮಹಾ ಪ್ರೀತಿಯೂ ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.


ಆಗ ಸಾರ್ವಭೌಮ ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.


ಯೆಹೂದದ ಸೆರೆಯನ್ನೂ, ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ, ಅವರನ್ನು ಮುಂಚಿನ ಹಾಗೆ ಕಟ್ಟುವೆನು.


ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.


ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು.


ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.


“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.


ಆಗ ಯೆಹೋವ ದೇವರು ತಮ್ಮ ಜನರಿಗೆ ಮಾಡುವೆನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಮಾರ್ಪಡಿಸಿಕೊಂಡರು.


“ ‘ಇದಾದನಂತರ ನಾನು ಮರಳಿ ಬರುವೆನು. ಬಿದ್ದುಹೋದ ದಾವೀದನ ಗುಡಾರವನ್ನು ಕಟ್ಟುವೆನು. ಪಾಳುಬಿದ್ದದ್ದನ್ನು ಜೀರ್ಣೋದ್ಧಾರ ಮಾಡಿ, ಅದನ್ನು ಪುನರುಜ್ಜೀವನಗೊಳಿಸುವೆನು.


ಯೆಹೂದದ ಅರಸನಾದ ಹಿಜ್ಕೀಯನೂ, ಎಲ್ಲಾ ಯೆಹೂದ್ಯರೂ ಅವನನ್ನು ಕೊಂದು ಹಾಕಿದರೋ? ಇಲ್ಲವೇ ಇಲ್ಲ. ಅವನು ಯೆಹೋವ ದೇವರಿಗೆ ಭಯಪಟ್ಟು, ಯೆಹೋವ ದೇವರ ಸಮ್ಮುಖದಲ್ಲಿ ಮೊರೆಯಿಟ್ಟನಲ್ಲವೋ? ಆಮೇಲೆ ಯೆಹೋವ ದೇವರು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು!” ಎಂದರು.


ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,


ಏಕೆಂದರೆ ಯೆಹೋವ ದೇವರು ಚೀಯೋನನ್ನು ಮರಳಿ ಕಟ್ಟುವರು; ಅವರು ತಮ್ಮ ಮಹಿಮೆಯಲ್ಲಿ ಕಾಣಿಸಿಕೊಳ್ಳುವರು.


ದೇವರು ಚೀಯೋನನ್ನು ರಕ್ಷಿಸುವರು. ದೇವರು ಯೆಹೂದದ ಪಟ್ಟಣಗಳನ್ನು ಕಟ್ಟುವರು. ಜನರು ಅಲ್ಲಿ ವಾಸಮಾಡಿ, ಅದನ್ನು ಸ್ವಾಧೀನಮಾಡಿಕೊಳ್ಳುವರು.


ಯೆಹೋವ ದೇವರಲ್ಲಿ ಭರವಸೆ ಇಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ಹಸಿರುಗಾವಲನ್ನು ಅನುಭವಿಸುವಿ.


ದೂತನು ಯೆರೂಸಲೇಮನ್ನು ನಾಶಮಾಡಲು, ಅದರ ಮೇಲೆ ತನ್ನ ಕೈಚಾಚಿದಾಗ, ಯೆಹೋವ ದೇವರು ಆ ದಂಡನೆಗಾಗಿ ನೊಂದುಕೊಂಡು, ಜನರನ್ನು ಸಂಹರಿಸುತ್ತಿದ್ದ ದೇವದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಅರೌನನ ಕಣದ ಬಳಿಯಲ್ಲಿ ಇದ್ದನು.


ಯೆಹೋವ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿದಾಗ, ಯೆಹೋವ ದೇವರು ನ್ಯಾಯಾಧಿಪತಿಯ ಸಂಗಡ ಇದ್ದು, ಆ ನ್ಯಾಯಾಧಿಪತಿಯ ದಿವಸಗಳಲ್ಲೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ತಪ್ಪಿಸಿ ರಕ್ಷಿಸುತ್ತಿದ್ದರು. ಏಕೆಂದರೆ ಅವರು ತಮ್ಮನ್ನು ಬಾಧಿಸಿ, ಶ್ರಮೆಪಡಿಸುವವರ ನಿಮಿತ್ತ ಗೋಳಾಡಿದ್ದರಿಂದ ಯೆಹೋವ ದೇವರು ಕನಿಕರಪಟ್ಟರು.


ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.


ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನ ಅಡಿಯಾಳಾಗುವುದೋ; ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೇ ನೆಲೆಗೊಳಿಸುವೆನು. ಅವರು ಅಲ್ಲೇ ಉತ್ತು, ಬಿತ್ತು ವಾಸಮಾಡುವರು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.” ’ ”


ಈ ಪ್ರಕಾರ ಕಾರೇಹನ ಮಗ ಯೋಹಾನಾನನೂ, ಸೈನ್ಯಾಧಿಪತಿಗಳೆಲ್ಲರೂ, ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ, ಯೆಹೋವ ದೇವರ ಮಾತಿಗೆ ಕಿವಿಗೊಡಲಿಲ್ಲ.


ಆಗ ಯೋನನು ಒಂದು ದಿವಸದ ಪ್ರಯಾಣಮಾಡಿ, ಪಟ್ಟಣದಲ್ಲಿ ಪ್ರವೇಶಿಸಿ, “ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ನಾಶವಾಗುವುದು,” ಎಂದು ಕೂಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು