Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:11 - ಕನ್ನಡ ಸಮಕಾಲಿಕ ಅನುವಾದ

11 ನೀವು ಭಯಪಡುವ ಬಾಬಿಲೋನಿನ ಅರಸನಿಗೆ ಭಯಪಡಬೇಡಿರಿ; ಅವನಿಗೆ ಭಯಪಡಬೇಡಿರೆಂದು ಯೆಹೋವ ದೇವರು ಹೇಳುತ್ತಾರೆ; ಏಕೆಂದರೆ ನಿಮ್ಮನ್ನು ರಕ್ಷಿಸುವುದಕ್ಕೂ, ಅವನ ಕೈಯಿಂದ ನಿಮ್ಮನ್ನು ತಪ್ಪಿಸುವುದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀವು ಹೆದರಿರುವ ಬಾಬೆಲಿನ ಅರಸನಿಗೆ ಹೆದರಬೇಡಿರಿ, ಅವನಿಗೆ ಅಂಜದಿರಿ; ನಾನು ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಿಮ್ಮೊಂದಿಗಿದ್ದೇನಲ್ಲಾ. ಇದು ಯೆಹೋವನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಾಬಿಲೋನಿಯದ ಅರಸನಿಗೆ ಹೆದರಬೇಡಿ, ಬೆದರಬೇಡಿ. ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಾನೇ ನಿಮ್ಮೊಂದಿಗೆ ಇರುವೆನು. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ಹೆದರಿರುವ ಬಾಬೆಲಿನ ಅರಸನಿಗೆ ಹೆದರಬೇಡಿರಿ; ಅವನಿಗೆ ಅಂಜದಿರಿ; ನಾನು ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಿಮ್ಮೊಂದಿಗಿದ್ದೇನಲ್ಲಾ. ಇದು ಯೆಹೋವನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈಗ ನೀವು ಬಾಬಿಲೋನಿನ ರಾಜನಿಗೆ ಹೆದರಿದ್ದೀರಿ. ಆದರೆ ಅವನಿಗೆ ಅಂಜಬೇಡಿರಿ.’ ಇದು ಯೆಹೋವನ ನುಡಿ. ‘ಏಕೆಂದರೆ ನಾನು ನಿಮ್ಮೊಂದಿಗಿದ್ದೇನೆ. ನಾನೇ ನಿಮ್ಮನ್ನು ರಕ್ಷಿಸುವೆನು. ನಾನು ನಿಮ್ಮನ್ನು ಕಷ್ಟದಿಂದ ಪಾರು ಮಾಡುವೆನು. ಅವನ ಕೈಗೆ ನೀವು ಸಿಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:11
25 ತಿಳಿವುಗಳ ಹೋಲಿಕೆ  

ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ಅವರು ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಗೆಲ್ಲುವುದಿಲ್ಲ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಇದು ಯೆಹೋವ ದೇವರ ನುಡಿ.


ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ.


ಭಯಪಡಬೇಡ, ಏಕೆಂದರೆ ನಾನೇ ನಿನ್ನೊಂದಿಗೆ ಇದ್ದೇನೆ. ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು. ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.


ನೀನು ಜಲರಾಶಿಯನ್ನು ದಾಟಿಹೋಗುವಾಗ, ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ, ಅವು ನಿನ್ನನ್ನು ಮುಳುಗಿಸುವುದಿಲ್ಲ; ಬೆಂಕಿಯಲ್ಲಿ ನಡೆಯುವಾಗ, ನೀನು ಸುಟ್ಟುಹೋಗುವುದಿಲ್ಲ; ಜ್ವಾಲೆಯು ನಿನ್ನನ್ನು ದಹಿಸದು.


ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದಲೇ, ಅವರಿಗೆ ಭಯಪಟ್ಟರು.


ಅವರಿಗೆ ನೀವು ಕಿವಿಗೊಡಲೇಬಾರದು. ಬಾಬಿಲೋನಿಯದ ಅರಸನಿಗೆ ಅಡಿಯಾಳಾಗಿರಿ. ಆಗ ಬದುಕುವಿರಿ. ಈ ನಗರವೇಕೆ ನಾಶವಾಗಬೇಕು?


ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ಕಂಚಿನ ಗೋಡೆಯಾಗಿ ಮಾಡುತ್ತೇನೆ. ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಜಯಿಸಲಾರರು. ಏಕೆಂದರೆ ನಾನೇ ನಿನ್ನನ್ನು ರಕ್ಷಿಸುವುದಕ್ಕೂ, ನಿನ್ನನ್ನು ತಪ್ಪಿಸುವುದಕ್ಕೂ ನಿನ್ನ ಸಂಗಡ ಇದ್ದೇನೆ, ಎಂದು ಯೆಹೋವ ದೇವರು ಹೇಳುತ್ತಾರೆ.


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು.


ನೀನು ಜೀವಿಸುವ ದಿವಸಗಳಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಮರೆಯುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ.


ಏಕೆಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ, ನಿಮ್ಮನ್ನು ರಕ್ಷಿಸುವುದಕ್ಕೆ ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಸಂಗಡ ಬರುತ್ತಾರೆ,” ಎಂದು ಹೇಳಬೇಕು.


ಆದ್ದರಿಂದ ನೀವಾದರೋ ಯೆಹೋವ ದೇವರಿಗೆ ತಿರುಗಿ ಬೀಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ನುಂಗಿಬಿಡುವೆವು. ಅವರ ಆಶ್ರಯವು ಅವರ ಬಳಿಯಿಂದ ಹೋಯಿತು. ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ, ಅವರಿಗೆ ಭಯಪಡಬೇಡಿರಿ,” ಎಂದರು.


ನಾನೇ ನಿನ್ನೊಂದಿಗಿದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ನಿನಗೆ ಕೇಡನ್ನುಂಟುಮಾಡುವುದಿಲ್ಲ. ಏಕೆಂದರೆ ನನಗಾಗಿ ಈ ಪಟ್ಟಣದಲ್ಲಿ ಅನೇಕ ಜನರಿದ್ದಾರೆ,” ಎಂದರು.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.


ಯೆಹೂದದ ಅರಸ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿನ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನಿಗೂ, ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ಆಗ ಹಿರಿಕಿರಿಯರಾದ ಸಮಸ್ತ ಜನರೂ, ದಂಡುಗಳ ಅಧಿಪತಿಗಳೂ ಬಾಬಿಲೋನಿಯದವರಿಗೆ ಹೆದರಿ ಎದ್ದು ಈಜಿಪ್ಟಿಗೆ ಹೋದರು.


ಯೆಹೋವ ದೇವರು ನನ್ನ ಪರವಾಗಿದ್ದಾರೆ, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?


ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನ ಅಡಿಯಾಳಾಗುವುದೋ; ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೇ ನೆಲೆಗೊಳಿಸುವೆನು. ಅವರು ಅಲ್ಲೇ ಉತ್ತು, ಬಿತ್ತು ವಾಸಮಾಡುವರು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.” ’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು