ಯೆರೆಮೀಯ 42:16 - ಕನ್ನಡ ಸಮಕಾಲಿಕ ಅನುವಾದ16 ನೀವು ಭಯಪಡುವ ಖಡ್ಗವು ಈಜಿಪ್ಟ್ ದೇಶದಲ್ಲಿ ನಿಮ್ಮನ್ನು ಹಿಡಿಯುವುದು. ನೀವು ಹೆದರಿಕೊಳ್ಳುವ ಕ್ಷಾಮವು ಈಜಿಪ್ಟ್ ದೇಶಕ್ಕೆ ನಿಮ್ಮನ್ನು ಹಿಂದಟ್ಟುವುದು, ನೀವು ಅಲ್ಲೇ ಸಾಯುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವುದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನ ಹತ್ತುವುದು; ಅಲ್ಲೇ ಸಾಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೀವು ಹೆದರುತ್ತಿರುವ ಖಡ್ಗ, ಈಜಿಪ್ಟಿನಲ್ಲೂ ನಿಮ್ಮನ್ನು ಹಿಂದಟ್ಟಿ ಬಂದು ಹಿಡಿಯುವುದು. ನೀವು ಅಂಜುತ್ತಿರುವ ಕ್ಷಾಮ ಅಲ್ಲಿಯೂ ನಿಮ್ಮ ಬೆನ್ನು ಹತ್ತುವುದು. ನೀವು ಅಲ್ಲೇ ಸಾಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನು ಹತ್ತುವದು; ಅಲ್ಲೇ ಸಾಯುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀವು ಯುದ್ಧದ ಖಡ್ಗಕ್ಕೆ ಹೆದರುವಿರಿ. ಆದರೆ ಅದು ನಿಮ್ಮನ್ನು ಅಲ್ಲಿ ಸೋಲಿಸುವುದು. ನಿಮಗೆ ಹಸಿವಿನ ಬಗ್ಗೆ ಯೋಚನೆಯಿದೆ. ಆದರೆ ಈಜಿಪ್ಟಿನಲ್ಲಿ ನೀವು ಹಸಿವಿನಿಂದ ಬಳಲುವಿರಿ. ನೀವು ಅಲ್ಲಿ ಸತ್ತುಹೋಗುವಿರಿ. ಅಧ್ಯಾಯವನ್ನು ನೋಡಿ |