ಯೆರೆಮೀಯ 42:20 - ಕನ್ನಡ ಸಮಕಾಲಿಕ ಅನುವಾದ20 ನೀವೇ ನನ್ನ ಬಳಿಗೆ ಬಂದು ನಮ್ಮ ದೇವರಾದ ಯೆಹೋವ ದೇವರನ್ನು ನಮಗಾಗಿ ಪ್ರಾರ್ಥಿಸು, ‘ನಮ್ಮ ದೇವರಾದ ಯೆಹೋವ ದೇವರು ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು,’ ಎಂದು ಹೇಳಿ ಮಾರಣಾಂತಿಕ ತಪ್ಪನ್ನು ಮಾಡಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಿಮ್ಮನ್ನು ನೀವೇ ಮೋಸಮಾಡಿಕೊಳ್ಳುತ್ತಿದ್ದೀರಿ. ನೀವೇ ನನ್ನ ಬಳಿಗೆ ಬಂದು ‘ನಮ್ಮ ದೇವರಾದ ಸರ್ವೇಶ್ವರನನ್ನು ನಮಗಾಗಿ ಪ್ರಾರ್ಥಿಸು. ನಮ್ಮ ದೇವರಾದ ಸರ್ವೇಶ್ವರ ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು. ಅದರಂತೆ ನಾವು ನಡೆಯುತ್ತೇವೆ,’ ಎಂಬುದಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ನೀವೇ ಕಳುಹಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು - ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು ಎಂಬದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೀವು ನಿಮಗೆ ಮರಣವನ್ನು ಬರಮಾಡುವ ತಪ್ಪನ್ನು ಮಾಡುತ್ತಿದ್ದೀರಿ. ನೀವು ನನ್ನನ್ನು ನಿಮ್ಮ ದೇವರಾದ ಯೆಹೋವನಲ್ಲಿಗೆ ಕಳುಹಿಸಿದಿರಿ. ‘ನಮಗಾಗಿ ಯೆಹೋವನಾದ ನಮ್ಮ ದೇವರನ್ನು ಪ್ರಾರ್ಥಿಸು. ದೇವರು ಮಾಡಬೇಕೆಂದು ಹೇಳಿದ್ದೆಲ್ಲವನ್ನು ನಮಗೆ ಹೇಳು, ನಾವು ಯೆಹೋವನ ಆಜ್ಞೆಯನ್ನು ಪಾಲಿಸುತ್ತೇವೆ’ ಎಂದು ನೀವು ಹೇಳಿದ್ದಿರಿ. ಅಧ್ಯಾಯವನ್ನು ನೋಡಿ |