ಯೆರೆಮೀಯ 42:22 - ಕನ್ನಡ ಸಮಕಾಲಿಕ ಅನುವಾದ22 ಹೀಗಿರುವುದರಿಂದ ನೀವು ವಾಸಿಸುವುದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವಿರೆಂದು ಈಗ ನಿಶ್ಚಯವಾಗಿ ತಿಳಿದುಕೊಳ್ಳಿರಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನೀವು ಯಾವ ಸ್ಥಳದಲ್ಲಿ ವಾಸಮಾಡಲು ಅಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತವಾಗಿ ತಿಳಿಯಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನೀವು ಯಾವ ನಾಡಿನಲ್ಲಿ ವಾಸಮಾಡಲು ಬಯಸಿ ಹೋಗುತ್ತೀರೋ ಆ ನಾಡಿನಲ್ಲಿ ಖಡ್ಗ-ಕ್ಷಾಮ-ವ್ಯಾಧಿಗಳಿಂದ ಸಾಯುವಿರಿ. ಇದು ನಿಶ್ಚಯ ಎಂದು ತಿಳಿಯಿರಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನೀವು ಯಾವ ಸ್ಥಳದಲ್ಲಿ ವಾಸಮಾಡಲಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತ ತಿಳಿಯಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಈಗ ನೀವು ಇದನ್ನು ನಿಶ್ಚಿತವಾಗಿ ತಿಳಿದುಕೊಳ್ಳಿ. ನೀವು ಈಜಿಪ್ಟಿನಲ್ಲಿ ವಾಸಮಾಡಲು ಹೋಗಬೇಕೆನ್ನುವಿರಿ. ಆದರೆ ಈಜಿಪ್ಟಿನಲ್ಲಿ ನೀವು ಖಡ್ಗದಿಂದಾದರೂ ಸಾಯುವಿರಿ, ಹಸಿವಿನಿಂದಾದರೂ ಸಾಯುವಿರಿ, ಅಥವಾ ಭಯಂಕರವಾದ ವ್ಯಾಧಿಯಿಂದಾದರೂ ಸಾಯುವಿರಿ.” ಅಧ್ಯಾಯವನ್ನು ನೋಡಿ |