Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:4 - ಕನ್ನಡ ಸಮಕಾಲಿಕ ಅನುವಾದ

4 ಆಗ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಾನು ಕೇಳಿದ್ದೇನೆ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಯೆಹೋವ ದೇವರಿಗೆ ಪ್ರಾರ್ಥನೆ ಮಾಡುತ್ತೇನೆ. ಯೆಹೋವ ದೇವರು ನಿಮಗೆ ಯಾವ ಉತ್ತರವನ್ನು ಕೊಡುವರೋ, ಅದನ್ನು ನಿಮಗೆ ತಿಳಿಸುವೆನು. ಒಂದು ಮಾತನ್ನಾದರೂ ನಿಮ್ಮಿಂದ ಹಿಂದೆಗೆಯುವುದಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಚ್ಚಿಡದೆ ನಿಮಗೆ ತಿಳಿಸುವೆನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದನ್ನು ಕೇಳಿ ಪ್ರವಾದಿ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದ್ದೇನೆ. ಇಗೋ, ನಿಮ್ಮ ಕೋರಿಕೆಯ ಪ್ರಕಾರ ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸುವೆನು. ಸರ್ವೇಶ್ವರ ಯಾವ ಉತ್ತರವನ್ನು ದಯಪಾಲಿಸುವರೋ ಅದರಲ್ಲಿ ಒಂದನ್ನೂ ಮುಚ್ಚುಮರೆಮಾಡದೆ ನಿಮಗೆ ತಿಳಿಸುವೆನು.” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ - ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಮುಚ್ಚದೆ ನಿಮಗೆ ತಿಳಿಸುವೆನು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಪ್ರವಾದಿಯಾದ ಯೆರೆಮೀಯನು, “ನಾನು ಏನು ಮಾಡಬೇಕೆಂದು ನೀವು ಬಯಸುವಿರೆಂಬುದು ನನಗೆ ಗೊತ್ತು. ನೀವು ಹೇಳಿದಂತೆಯೇ, ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು. ಯೆಹೋವನು ಹೇಳಿದ್ದನ್ನೆಲ್ಲವನ್ನು ನಾನು ನಿಮಗೆ ಹೇಳುತ್ತೇನೆ. ನಾನು ನಿಮ್ಮಿಂದ ಏನನ್ನೂ ಮುಚ್ಚಿಡುವದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:4
13 ತಿಳಿವುಗಳ ಹೋಲಿಕೆ  

ನಾನು ನಿಮ್ಮ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಿಟ್ಟುಕೊಳ್ಳಲಿಲ್ಲ. ನಿಮ್ಮ ನಂಬಿಗಸ್ತಿಕೆಯನ್ನೂ ನಿಮ್ಮ ರಕ್ಷಣೆಯನ್ನೂ ನಿಮ್ಮ ಪ್ರೀತಿಯನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡದೆ ಸಾರಿದೆನು.


ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ, ಯೆಹೋವ ದೇವರಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ. ಉತ್ತಮವಾದ, ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.


ಆಗ ಮೋಶೆಯು ಅವನಿಗೆ, “ನಾನು ನಿನ್ನನ್ನು ಬಿಟ್ಟು ಹೋಗಿ, ಯೆಹೋವ ದೇವರಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ, ಅವನ ಸೇವಕರನ್ನೂ, ಅವರ ಜನರನ್ನೂ ಬಿಟ್ಟು ಹೋಗುವುವು. ಆದರೆ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುವುದಕ್ಕೆ ಫರೋಹನಾದ ನೀನು ಜನರನ್ನು ಕಳುಹಿಸದೆ ಇನ್ನು ಮೇಲೆ ವಂಚಿಸಬಾರದು,” ಎಂದನು.


ನಿಮಗೆ ಹಿತಕರವಾದುದ್ದೆಲ್ಲವನ್ನೂ ಬೋಧಿಸಲು ನಾನು ಹಿಂಜರಿಯಲಿಲ್ಲ. ಬಹಿರಂಗದಲ್ಲಿಯೂ ಮನೆಮನೆಗಳಲ್ಲಿಯೂ ನಾನು ನಿಮಗೆ ಬೋಧಿಸಿದ್ದೇನೆ.


ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.


ಪ್ರಿಯರೇ, ನನ್ನ ಹೃದಯದ ಬಯಕೆಯು, ನಾನು ದೇವರಿಗೆ ಸಲ್ಲಿಸುವ ಪ್ರಾರ್ಥನೆಯು ಇಸ್ರಾಯೇಲರು ರಕ್ಷಣೆ ಹೊಂದಬೇಕೆಂಬುದೇ.


ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ.


ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು. ಅವರು ಕೇಳಿದರೂ ಸರಿ, ಕೇಳದಿದ್ದರೂ ಸರಿ, ಏಕೆಂದರೆ ಅವರು ತಿರುಗಿಬೀಳುವ ಜನರು.


‘ಯೆಹೋವ ದೇವರು ಕೊಟ್ಟ ಉತ್ತರವೇನು? ಯೆಹೋವ ದೇವರು ನುಡಿದದ್ದು ಏನು?’ ಎಂದು ನಿಮ್ಮ ನಿಮ್ಮ ನೆರೆಹೊರೆಯವರನ್ನು ಮತ್ತು ಅಣ್ಣತಮ್ಮಂದಿರನ್ನು ವಿಚಾರಿಸಬೇಕೇ ಹೊರತು,


“ಯೆಹೋವ ದೇವರು ಹೀಗೆ ಹೇಳುತ್ತಾನೆ: ಯೆಹೋವ ದೇವರು ಆಲಯದ ಅಂಗಳದಲ್ಲಿ ನಿಂತುಕೊಂಡು, ಯೆಹೋವ ದೇವರ ಆಲಯದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು. ಒಂದು ಮಾತಾದರೂ ಕಡಿಮೆ ಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು