ಯೆರೆಮೀಯ 42:5 - ಕನ್ನಡ ಸಮಕಾಲಿಕ ಅನುವಾದ5 ಆಗ ಅವರು ಯೆರೆಮೀಯನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾರೋ, ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ, ಯೆಹೋವ ದೇವರು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳುವಾಗ, ನಮಗೆ ಒಳ್ಳೆಯದಾಗುವ ಹಾಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ಯೆರೆಮೀಯನಿಗೆ, “ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅದಕ್ಕೆ ಅವರು ಯೆರೆಮೀಯನಿಗೆ, “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮೂಲಕ ನಮಗೆ ಕಳಿಸುವ ಮಾತಿನಂತೆ ನಾವು ನಡೆಯದಿದ್ದರೆ, ಆ ಸರ್ವೇಶ್ವರನೇ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು, ನಮ್ಮನ್ನು ಖಂಡಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವರು ಯೆರೆಮೀಯನಿಗೆ - ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಅವರು, “ನಿನ್ನ ದೇವರಾದ ಯೆಹೋವನು ಹೇಳಿದ ಎಲ್ಲವನ್ನು ನಾವು ಮಾಡದಿದ್ದಲ್ಲಿ ಯೆಹೋವನು ಸ್ವತಃ ನಮ್ಮ ವಿರುದ್ಧ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಲ್ಲಲಿ. ನಾವು ಏನು ಮಾಡಬೇಕೆಂಬುದನ್ನು ತಿಳಿಸಲು ನಿನ್ನ ದೇವರಾದ ಯೆಹೋವನು ನಿನ್ನನ್ನು ಕಳುಹಿಸುತ್ತಾನೆಂದು ನಾವು ಬಲ್ಲೆವು. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.