ಯೆರೆಮೀಯ 43:4 - ಕನ್ನಡ ಸಮಕಾಲಿಕ ಅನುವಾದ4 ಈ ಪ್ರಕಾರ ಕಾರೇಹನ ಮಗ ಯೋಹಾನಾನನೂ, ಸೈನ್ಯಾಧಿಪತಿಗಳೆಲ್ಲರೂ, ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ, ಯೆಹೋವ ದೇವರ ಮಾತಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ, ಸಮಸ್ತ ಸೇನಾಧಿಪತಿಗಳೂ ಮತ್ತು ಸಕಲಜನರೂ ಕೇಳದೆಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಹೀಗೆ ಜುದೇಯ ನಾಡಿನಲ್ಲೇ ವಾಸಮಾಡಿರೆಂಬ ಸರ್ವೇಶ್ವರನ ಮಾತನ್ನು ಕಾರೇಹನ ಮಗ ಯೋಹಾನಾನನು, ಸಮಸ್ತ ಸೇನಾಪತಿಗಳು, ಹಾಗು ಸಕಲ ಜನರು ಕೇಳದೆಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ ಸಮಸ್ತ ಸೇನಾಪತಿಗಳೂ ಸಕಲಜನರೂ ಕೇಳದೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೋಹಾನಾನನು, ಸೇನಾಧಿಪತಿಗಳು ಮತ್ತು ಎಲ್ಲಾ ಜನರು ಯೆಹೋವನ ಆಜ್ಞೆಯನ್ನು ಮೀರಿದರು. ಯೆಹೂದದಲ್ಲಿ ಇರಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |
ಆಗ ಕಾರೇಹನ ಮಗನಾದ ಯೋಹಾನಾನನೂ, ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗ ಗೆದಲ್ಯನನ್ನು ಕೊಂದುಹಾಕಿದ ತರುವಾಯ, ತಪ್ಪಿಸಿಬಿಟ್ಟಿದ್ದ ಉಳಿದ ಜನರೆಲ್ಲರನ್ನು ಎಂದರೆ, ಗಿಬ್ಯೋನನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಕಂಚುಕಿಯರನ್ನೂ ಮಿಚ್ಪದಿಂದ ಕರೆದುಕೊಂಡು ಹೊರಟು,