Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 43:7 - ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಅವರು ಯೆಹೋವ ದೇವರ ಮಾತಿಗೆ ಕಿವಿಗೊಡಲಿಲ್ಲ. ಹೀಗೆ ಅವರು ಈಜಿಪ್ಟಿಗೆ ಹೋಗಿ ತಹಪನೇಸಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ, ಸಕಲ ಸೇನಾಧಿಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇವರೆಲ್ಲರನ್ನು ಕಾರೇಹನ ಮಗ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಈಜಿಪ್ಟಿಗೆ ಹೋಗಿ ತಹಪನೇಸ್ ಎಂಬ ಊರಿಗೆ ಸೇರಿಸಿದರು. ಸರ್ವೇಶ್ವರನ ಮಾತನ್ನು ಅವರು ಕೇಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಜನರು ಯೆಹೋವನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಆ ಎಲ್ಲಾ ಜನರು ಈಜಿಪ್ಟಿಗೆ ಹೋದರು. ಅವರು ತಹಪನೇಸ್ ಎಂಬ ಊರಿಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 43:7
11 ತಿಳಿವುಗಳ ಹೋಲಿಕೆ  

ಈಜಿಪ್ಟ್ ದೇಶದ ಕೆಳಗಿನ ಪ್ರಾಂತದ ಮಿಗ್ದೋಲ್, ತಹಪನೇಸ್, ಮೆಂಫೀಸ್ ಪಟ್ಟಣಗಳಲ್ಲಿಯೂ ಹಾಗೂ ಈಜಿಪ್ಟನ ದಕ್ಷಿಣ ಭಾಗವಾದ ಪತ್ರೋಸ್ ಪ್ರಾಂತದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆಮೀಯನಿಗೆ ಬಂದ ವಾಕ್ಯವು:


ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.


“ಈಜಿಪ್ಟಿನಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿಸಿ, ನೋಫಿನಲ್ಲಿಯೂ, ತಹಪನೇಸಿನಲ್ಲಿಯೂ ಪ್ರಕಟಿಸಿ, ‘ನಿಮ್ಮ ಸ್ಥಾನಗಳನ್ನು ತೆಗೆದುಕೊಳ್ಳಿ ಮತ್ತು ಸಿದ್ಧರಾಗಿ, ಏಕೆಂದರೆ ಖಡ್ಗವು ನಿನ್ನ ಸುತ್ತಲೂ ಸಂಹರಿಸುವುದು,’ ಎಂದು ಹೇಳಿರಿ.


ಏಕೆಂದರೆ ಅವನ ಪ್ರಧಾನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿಗಳು ಹಾನೇಸಿಗೆ ಬಂದಿದ್ದಾರೆ.


ನಾನು ಈಜಿಪ್ಟಿನ ನೊಗಗಳನ್ನು ಮುರಿಯುವಾಗ ತಹಪನೇಸಿನಲ್ಲಿ ಹಗಲು ಕತ್ತಲಾಗುವುದು. ಅದರ ಶಕ್ತಿಯ ಮದವು ಅಡಗಿಹೋಗುವುದು. ಅದನ್ನು ಮೇಘವು ಮುಚ್ಚುವುದು. ಅದರ ಪುತ್ರಿಯರು ಸೆರೆಗೆ ಹೋಗುವರು.


ಪ್ರವಾದಿಯು ಅರಸನ ಸಂಗಡ ಮಾತನಾಡುತ್ತಿರುವಾಗಲೇ ಅರಸನು ಅವನಿಗೆ, “ಅರಸನ ಆಲೋಚನಾ ಮಂತ್ರಿಯನ್ನಾಗಿ ನಿನ್ನನ್ನು ನೇಮಿಸಿದವರು ಯಾರು? ಸುಮ್ಮನಿರು! ನೀನು ಏಕೆ ಮರಣಹೊಂದಬೇಕೆಂದಿರುವೆ?” ಎಂದನು. ಆಗ ಪ್ರವಾದಿಯು, “ನೀನು ನನ್ನ ಯೋಚನೆಯನ್ನು ಕೇಳದೆ ಇದನ್ನು ಮಾಡಿದ್ದರಿಂದ, ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾರೆಂದು ನಾನು ಬಲ್ಲೆನು,” ಎಂದನು.


ಫರೋಹನಲ್ಲಿ ತಾವು ಬಲಗೊಳ್ಳುವ ಆಶ್ರಯವನ್ನು ಈಜಿಪ್ಟಿನ ನೆರಳಿನಲ್ಲಿ ಭರವಸವಿಡಬೇಕೆಂದು ನನ್ನ ಮಾತನ್ನು ಕೇಳದೆ, ಈಜಿಪ್ಟಿಗೆ ಪ್ರಯಾಣವಾಗಿ ಹೊರಟಿದ್ದಾರೆ.


ಇದಲ್ಲದೆ, ಯೆರೆಮೀಯನು ಎಲ್ಲಾ ಜನರಿಗೂ, ಎಲ್ಲಾ ಹೆಂಗಸರಿಗೂ, “ಈಜಿಪ್ಟ್ ದೇಶದಲ್ಲಿರುವ ಯೆಹೂದ್ಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.


ಆಗ ಹಿರಿಕಿರಿಯರಾದ ಸಮಸ್ತ ಜನರೂ, ದಂಡುಗಳ ಅಧಿಪತಿಗಳೂ ಬಾಬಿಲೋನಿಯದವರಿಗೆ ಹೆದರಿ ಎದ್ದು ಈಜಿಪ್ಟಿಗೆ ಹೋದರು.


ಈಜಿಪ್ಟಿಗೆ ಹೋಗುವುದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.


ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಶಬ್ದವನ್ನಾದರೂ ಅವರು ಯಾವುದರ ವಿಷಯವಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೋ ಅದರಲ್ಲಿ ಯಾವುದನ್ನಾದರೂ ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು