Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:1 - ಕನ್ನಡ ಸಮಕಾಲಿಕ ಅನುವಾದ

1 ಈಜಿಪ್ಟ್ ದೇಶದ ಕೆಳಗಿನ ಪ್ರಾಂತದ ಮಿಗ್ದೋಲ್, ತಹಪನೇಸ್, ಮೆಂಫೀಸ್ ಪಟ್ಟಣಗಳಲ್ಲಿಯೂ ಹಾಗೂ ಈಜಿಪ್ಟನ ದಕ್ಷಿಣ ಭಾಗವಾದ ಪತ್ರೋಸ್ ಪ್ರಾಂತದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆಮೀಯನಿಗೆ ಬಂದ ವಾಕ್ಯವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಐಗುಪ್ತ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ರೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಈಜಿಪ್ಟ್ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ನಗರಗಳಲ್ಲೂ ಮತ್ತು ಪತ್ರೋಸ್ ಪ್ರಾಂತ್ಯದಲ್ಲೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಿಳಿಯಪಡಿಸಿದ ವಾಣಿ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಐಗುಪ್ತದೇಶದ ವಿುಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ ಪತ್ರೋಸ್ ಪ್ರಾಂತದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಈ ಸಂದೇಶವನ್ನು ಈಜಿಪ್ಟಿನಲ್ಲಿ ವಾಸಿಸಿದ ಎಲ್ಲಾ ಯೆಹೂದ್ಯರಿಗಾಗಿ ಕೊಡಲಾಗಿತ್ತು. ಈ ಸಂದೇಶವು ಮಿಗ್ದೋಲ್, ತಹಪನೇಸ್, ನೋಫ್ ಪಟ್ಟಣಗಳಲ್ಲಿ ಮತ್ತು ಈಜಿಪ್ಟಿನ ದಕ್ಷಿಣ ಭಾಗದಲ್ಲಿ ವಾಸಮಾಡುತ್ತಿದ್ದ ಯೆಹೂದ್ಯರಿಗಾಗಿ ಇತ್ತು. ಆ ಸಂದೇಶವೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:1
19 ತಿಳಿವುಗಳ ಹೋಲಿಕೆ  

“ಈಜಿಪ್ಟಿನಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿಸಿ, ನೋಫಿನಲ್ಲಿಯೂ, ತಹಪನೇಸಿನಲ್ಲಿಯೂ ಪ್ರಕಟಿಸಿ, ‘ನಿಮ್ಮ ಸ್ಥಾನಗಳನ್ನು ತೆಗೆದುಕೊಳ್ಳಿ ಮತ್ತು ಸಿದ್ಧರಾಗಿ, ಏಕೆಂದರೆ ಖಡ್ಗವು ನಿನ್ನ ಸುತ್ತಲೂ ಸಂಹರಿಸುವುದು,’ ಎಂದು ಹೇಳಿರಿ.


ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.


“ಇಸ್ರಾಯೇಲರು ಹಿಂತಿರುಗಿ ಹೋಗಿ ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಲ್ಜೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಅವರಿಗೆ ಹೇಳು. ಅದರ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳಿದುಕೊಳ್ಳಬೇಕು.


ಚೋವನಿನ ಶ್ರೇಷ್ಠರು ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಈಜಿಪ್ಟಿನ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ. ಅದನ್ನು ತಪ್ಪು ದಾರಿಗೆಳೆದಿದ್ದಾರೆ.


ನಾನು ಈಜಿಪ್ಟಿನ ನೊಗಗಳನ್ನು ಮುರಿಯುವಾಗ ತಹಪನೇಸಿನಲ್ಲಿ ಹಗಲು ಕತ್ತಲಾಗುವುದು. ಅದರ ಶಕ್ತಿಯ ಮದವು ಅಡಗಿಹೋಗುವುದು. ಅದನ್ನು ಮೇಘವು ಮುಚ್ಚುವುದು. ಅದರ ಪುತ್ರಿಯರು ಸೆರೆಗೆ ಹೋಗುವರು.


ನಾನು ಈಜಿಪ್ಟಿಗೆ ಕಿಚ್ಚನ್ನು ಹಚ್ಚಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು. ತೆಬೆಸವು ಬಿರುಗಾಳಿಯಿಂದ ತೆಗೆದುಕೊಳ್ಳಲಾಗುವುದು, ನೋಫಿನ ಮೇಲೆ ನಿರಂತರವಾಗಿ ಇಕ್ಕಟ್ಟು ಇರುವುದು.


ನಾನು ಪತ್ರೋಸನ್ನು ನಾಶಮಾಡಿ, ಚೋವನ್ ಪಟ್ಟಣಕ್ಕೆ ಬೆಂಕಿಯಿಡುವೆನು. ತೆಬೆಸ್ ಪಟ್ಟಣವನ್ನು ದಂಡಿಸುವೆನು.


ನಾನು ಈಜಿಪ್ಟಿನವರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸ್ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡುವೆನು. ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.


ಈಜಿಪ್ಟಿನ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜುಗೊಳಿಸಿಕೋ; ಏಕೆಂದರೆ ನೋಫ್ ಪಟ್ಟಣವು ಹಾಳಾಗುವುದು; ನಿವಾಸಿಗಳಿಲ್ಲದ ಬೀಡಾಗುವುದು.


ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.


ಆದ್ದರಿಂದ ಇಗೋ, ನಾನು ನಿನಗೂ ನಿನ್ನ ನದಿಗಳಿಗೂ ವಿರುದ್ಧವಾಗಿದ್ದೇನೆ. ಈಜಿಪ್ಟ್ ದೇಶವನ್ನು ಮಿಗ್ದೋಲಿನಿಂದ ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.


ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದವರು,


“ ‘ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ, ಈಜಿಪ್ಟ್ ದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ ಈಜಿಪ್ಟಿನ ದೇಶದಲ್ಲಿರುವ ಸೂರ್ಯ ದೇವಾಲಯವನ್ನು ಒಡೆದುಹಾಕಿ, ಈಜಿಪ್ಟ್ ದೇವರುಗಳ ಆಲಯಗಳನ್ನು ಬೆಂಕಿಯಿಂದ ಸುಡುವನು.’ ”


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾನು ಮೂರ್ತಿಗಳನ್ನು ನಾಶಮಾಡುವೆನು. ಮತ್ತು ನೋಫಿನ ವಿಗ್ರಹಗಳನ್ನು ಕೊನೆಗೊಳಿಸುವೆನು. ಈಜಿಪ್ಟ್ ದೇಶದ ರಾಜಕುಮಾರ ಇನ್ನು ಮುಂದೆ ಇರುವುದಿಲ್ಲ, ನಾನು ಈಜಿಪ್ಟ್ ದೇಶದಲ್ಲಿ ಭಯವನ್ನು ಉಂಟುಮಾಡುವೆನು.


ಇಗೋ, ನಾಶನದಿಂದ ಅವರು ತಪ್ಪಿಸಿಕೊಂಡರೂ ಈಜಿಪ್ಟ್ ಅವರನ್ನು ಕೂಡಿಸುವುದು. ಮೋಫ್ ಪಟ್ಟಣವು ಅವರನ್ನು ಹೂಳುವುದು. ಅವರ ಬೆಳ್ಳಿಯ ಬೊಕ್ಕಸಗಳು ಮುಳ್ಳು ಪೊದೆಗಳ ಪಾಲಾಗುವುವು. ಮುಳ್ಳುಗಿಡಗಳು ಅವರ ಗುಡಾರಗಳನ್ನು ಆವರಿಸಿಕೊಂಡಿರುವುದು.


ಆಗ ತಮ್ಮ ಹೆಂಡತಿಯರು ಅನ್ಯ ದೇವತೆಗಳಿಗೆ ಧೂಪ ಹಾಕುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು, ಅಂತು ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ ಹೀಗೆ ಹೇಳಿದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು