ಯೆರೆಮೀಯ 44:12 - ಕನ್ನಡ ಸಮಕಾಲಿಕ ಅನುವಾದ12 ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ಇಟ್ಟಿರುವ ಯೆಹೂದದಲ್ಲಿ ಉಳಿದಿರುವವರನ್ನು ತೆಗೆದುಕೊಳ್ಳುತ್ತೇನೆ. ಅವರೆಲ್ಲರು ಈಜಿಪ್ಟ್ ದೇಶದಲ್ಲಿ ನಾಶವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಅಳಿದುಹೋಗುವರು. ಚಿಕ್ಕವನು ಮೊದಲುಗೊಂಡು ದೊಡ್ಡವನವರೆಗೂ ಖಡ್ಗದಿಂದಲೂ ಕ್ಷಾಮದಿಂದಲೂ ಸಾಯುವರು. ಅಸಹ್ಯವೂ ಭಯವೂ ಶಾಪವೂ ನಿಂದೆಯೂ ಆಗುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದದ ಉಳಿದ ಜನರನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗ ಮತ್ತು ಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗ ಮತ್ತು ಕ್ಷಾಮಗಳಿಂದ ಸತ್ತು ಅಪವಾದ, ಶಾಪ, ನಿಂದೆಗೆ ಮತ್ತು ದೂಷಣೆಗಳಿಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಈಜಿಪ್ಟಿಗೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಆ ಜುದೇಯದ ಅಳಿದುಳಿದ ಜನರನ್ನು ನಾಶಮಾಡುವೆನು. ಈಜಿಪ್ಟಿನಲ್ಲೆ ಅವರು ಮಣ್ಣುಪಾಲಾಗುವರು. ಖಡ್ಗ-ಕ್ಷಾಮಗಳಿಂದ ಅಳಿದುಹೋಗುವರು. ಚಿಕ್ಕವರು-ದೊಡ್ಡವರು ಎನ್ನದೆ ಖಡ್ಗ-ಕ್ಷಾಮಗಳಿಗೆ ತುತ್ತಾಗಿ, ಅಪವಾದ, ಅಪಹಾಸ್ಯಗಳಿಗೂ ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದಜನಶೇಷವನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗಕ್ಷಾಮಗಳಿಂದ ಸತ್ತು ಅಪವಾದ ವಿಸ್ಮಯ ಶಾಪ ದೂಷಣೆಗಳಿಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೂದದಲ್ಲಿ ಅಳಿದುಳಿದ ಕೆಲವು ಜನರಿದ್ದರು. ಆ ಜನರು ಈಜಿಪ್ಟಿನಲ್ಲಿ ನೆಲೆಸಲು ಬಂದರು. ಆದರೆ ನಾನು ಯೆಹೂದಕುಲದ ಆ ಕೆಲವು ಅಳಿದುಳಿದವರನ್ನು ನಾಶಮಾಡುವೆನು. ಅವರು ಕತ್ತಿಗಳಿಂದ ಕೊಲ್ಲಲ್ಪಡುವರು; ಹಸಿವಿನಿಂದ ಸತ್ತುಹೋಗುವರು. ಬೇರೆ ಜನಾಂಗಗಳ ಜನರು ಅವರ ಬಗ್ಗೆ ನಿಂದಿಸುವಂತೆ ಅವರ ಸ್ಥಿತಿ ಆಗುವುದು. ಅವರಿಗೆ ಉಂಟಾದ ದುರ್ಗತಿಯನ್ನು ನೋಡಿ ಬೇರೆ ಜನಾಂಗದ ಜನರು ಭಯಪಡುವರು. ಆ ಜನರು ಶಾಪದ ಶಬ್ಧವಾಗುವರು. ಬೇರೆ ಜನಾಂಗದವರು ಯೆಹೂದದ ಆ ಜನರಿಗೆ ಅಪಮಾನ ಮಾಡುವರು. ಅಧ್ಯಾಯವನ್ನು ನೋಡಿ |