Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:14 - ಕನ್ನಡ ಸಮಕಾಲಿಕ ಅನುವಾದ

14 ಈಜಿಪ್ಟ್ ದೇಶಕ್ಕೆ ಅಲ್ಲಿ ವಾಸಿಸುವುದಕ್ಕೆ ಹೋಗಿರುವ ಯೆಹೂದದ ಉಳಿದಿರುವವರು ತಾವು ತಿರುಗಿಕೊಂಡು, ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿದರೂ, ಒಬ್ಬನಾದರೂ ಯೆಹೂದ ದೇಶಕ್ಕೆ ಹಿಂದಿರುಗುವುದಿಲ್ಲ. ಓಡಿಹೋಗುವ ಸ್ವಲ್ಪ ಜನರೇ ಅಲ್ಲದೆ ಇನ್ಯಾರೂ ಹಿಂತಿರುಗುವುದಿಲ್ಲ,” ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಐಗುಪ್ತಕ್ಕೆ ಹೋಗಿ ಪ್ರವಾಸ ಮಾಡುತ್ತಿರುವ ಯೆಹೂದದ ಉಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವುದಿಲ್ಲ; ಓಡಿಬರುವ ಸ್ವಲ್ಪ ಜನರೇ ಹೊರತು ಯಾರೂ ಹಿಂದಿರುಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಆ ಜುದೇಯದ ಅಳಿದುಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಅಲ್ಲಿಂದ ತಪ್ಪಿಸಿಕೊಂಡು ಜುದೇಯಕ್ಕೆ ಹಿಂದಿರುಗಿದರು. ಕೆಲವು ನಿರಾಶ್ರಿತರನ್ನು ಬಿಟ್ಟರೆ ಯಾವನೂ ಹಿಂತಿರುಗುವುದಿಲ್ಲ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದಜನಶೇಷದವರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವದಿಲ್ಲ; ಓಡಿಬರುವ ಕೊಂಚ ಜನವೇ ಹೊರತು ಯಾವನೂ ಹಿಂದಿರುಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈಜಿಪ್ಟಿಗೆ ವಲಸೆ ಹೋದ ಕೆಲವೇ ಯೆಹೂದದ ಜನರು ಅಳಿದುಳಿದವರಾಗಿದ್ದಾರೆ. ಒಬ್ಬನೂ ಕೂಡ ನನ್ನ ಶಿಕ್ಷೆಯಿಂದ ತಪ್ಪಿಸಿಕೊಳ್ಳಲಾರನು. ಅವರಲ್ಲಿ ಒಬ್ಬನೂ ಜೀವಂತವಾಗಿ ಯೆಹೂದಕ್ಕೆ ಹಿಂತಿರುಗಿ ಬರಲಾರನು. ಆ ಜನರು ಯೆಹೂದಕ್ಕೆ ಹಿಂತಿರುಗಿ ಬಂದು ಅಲ್ಲಿ ವಾಸಮಾಡಬಯಸುವರು, ಆದರೆ ತಪ್ಪಿಸಿಕೊಂಡ ಸ್ವಲ್ಪ ಜನರನ್ನು ಬಿಟ್ಟು ಮಿಕ್ಕವರಾರೂ ಯೆಹೂದಕ್ಕೆ ಹಿಂತಿರುಗುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:14
16 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಶಾಯನು ಇಸ್ರಾಯೇಲರನ್ನು ಕುರಿತು ಕೂಗಿ ಹೇಳುವುದೇನೆಂದರೆ, “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಣೆಹೊಂದುವರು.


ಈಜಿಪ್ಟಿಗೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನಿಡುವ ಮನುಷ್ಯರಿಗೆಲ್ಲಾ ಹೀಗಾಗುವುದು. ಅವರು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವರು. ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವುದಿಲ್ಲ.’


ಆ ದಿನದಲ್ಲಿ ಇಸ್ರಾಯೇಲರಲ್ಲಿ ಉಳಿದವರೂ, ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು, ಇಸ್ರಾಯೇಲಿನ ಪರಿಶುದ್ಧರಾದ ಯೆಹೋವ ದೇವರ ಸತ್ಯವಾಗಿ ಆಧಾರಮಾಡಿಕೊಳ್ಳುವರು.


ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು.


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


ಮನುಷ್ಯನೇ, ಅಂಥವುಗಳನ್ನು ನಡೆಸುವವರ ಮೇಲೆ ತೀರ್ಪುಮಾಡುತ್ತಿರುವ ನೀನು ದೇವರ ತೀರ್ಪಿನಿಂದ ತಪ್ಪಿಸಿಕೊಂಡೇನೆಂದು ನೆನಸುತ್ತೀಯೋ?


“ಹಾವುಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆಯಿಂದ ಹೇಗೆ ತಪ್ಪಿಸಿಕೊಂಡೀರಿ?


ಹೀಗಿರುವುದರಿಂದ ನೀವು ವಾಸಿಸುವುದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವಿರೆಂದು ಈಗ ನಿಶ್ಚಯವಾಗಿ ತಿಳಿದುಕೊಳ್ಳಿರಿ,” ಎಂದನು.


ಮರಣ ಹೊಂದಿದ ಅರಸನಿಗಾಗಿ ಅಳಬೇಡಿರಿ. ಅವನಿಗಾಗಿ ಗೋಳಾಡಬೇಡಿರಿ. ಹೊರಟು ಹೋದವನಿಗಾಗಿ ಬಹಳವಾಗಿ ಅಳಿರಿ. ಏಕೆಂದರೆ ಅವನು ತಿರುಗಿ ಬರುವುದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವುದೇ ಇಲ್ಲ.


“ ‘ಆದರೆ ನಾನು ಕೆಲವರನ್ನು ಉಳಿಸುತ್ತೇನೆ; ಹೇಗೆಂದರೆ, ನೀವು ದೇಶಗಳ ಮತ್ತು ಜನಾಂಗಗಳ ನಡುವೆ ಚದರಿಹೋದಾಗ ನಿಮ್ಮಲ್ಲಿ ಕೆಲವರು ಖಡ್ಗದಿಂದ ತಪ್ಪಿಸಿಕೊಳ್ಳುವಿರಿ.


ಆದರೆ, ಈಜಿಪ್ಟ್ ದೇಶದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವ ದೇವರ ವಾಕ್ಯವನ್ನು ಕೇಳಿರಿ: ‘ಇಗೋ, ನಾನು ನನ್ನ ಸ್ವಂತ ಹೆಸರಿನಿಂದ ಪ್ರಮಾಣ ಮಾಡಿದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ, ‘ಈಜಿಪ್ಟ್‌ನಲ್ಲಿರುವ ಯಾವುದೇ ಯೆಹೂದದ ವ್ಯಕ್ತಿಯು ಪ್ರಮಾಣ ಮಾಡಲು ನನ್ನ ಶ್ರೇಷ್ಠ ಹೆಸರನ್ನು ಬಳಸಲು ಸಾಧ್ಯವಾಗುವುದಿಲ್ಲ. “ಸಾರ್ವಭೌಮ ಯೆಹೋವ ದೇವರ ಜೀವದಾಣೆ,” ಎಂದು ಮತ್ತೆಂದೂ ಅವರು ಹೇಳುವುದಿಲ್ಲ.


ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧ ಮಾಡಿದವರನ್ನೂ ನಿಮ್ಮೊಂದಿಗೆ ಶುದ್ಧಮಾಡುತ್ತೇನೆ. ಅವರು ಪ್ರವಾಸಿಗಳಾಗಿದ್ದ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಆದರೆ ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ, ನಾನೇ ಯೆಹೋವ ದೇವರೆಂಬುದನ್ನು ಅವರಿಗೆ ತಿಳಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು