Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:23 - ಕನ್ನಡ ಸಮಕಾಲಿಕ ಅನುವಾದ

23 ನೀವು ಧೂಪ ಸುಟ್ಟು, ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಯೆಹೋವ ದೇವರ ಮಾತನ್ನು ಕೇಳದೆ, ದೈವನಿಯಮವನ್ನೂ, ದೈವತೀರ್ಪುಗಳನ್ನೂ, ದೈವಷರತ್ತುಗಳನ್ನೂ ಅನುಸರಿಸದೆ, ದೇವರಿಗೆ ವಿಧೇಯರಾಗದೆ ಇದ್ದುದರಿಂದಲೇ, ಈ ಕೇಡು ಈ ದಿನ ನಿಮಗೆ ಸಂಭವಿಸಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ, ನಿಬಂಧನೆಗಳನ್ನೂ, ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪ ಮಾಡಿ ಅನ್ಯದೇವತೆಗಳಿಗೆ ಧೂಪಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನೀವು ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳದೆ, ಅವರ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸದೆ, ಪಾಪಮಾಡಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದರಿಂದಲೇ ಇಂಥಾ ವಿಪತ್ತು ನಿಮಗೆ ಸಂಭವಿಸಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪಮಾಡಿ [ಅನ್ಯದೇವತೆಗಳಿಗೆ] ಧೂಪ ಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀವು ಬೇರೆ ದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿದ್ದಕ್ಕಾಗಿ ಆ ಕೇಡುಗಳೆಲ್ಲಾ ಸಂಭವಿಸಿದವು. ನೀವು ಯೆಹೋವನ ವಿರುದ್ಧ ಪಾಪಮಾಡಿದಿರಿ. ನೀವು ಯೆಹೋವನ ಆಜ್ಞಾಪಾಲನೆ ಮಾಡಲಿಲ್ಲ. ನೀವು ಆತನ ಉಪದೇಶಗಳನ್ನಾಗಲಿ ಅಥವಾ ಆತನು ಬೋಧಿಸಿದ ಧರ್ಮೋಪದೇಶಗಳನ್ನಾಗಲಿ ಅನುಸರಿಸಲಿಲ್ಲ. ನೀವು ಮಾಡಿಕೊಂಡ ಒಡಂಬಡಿಕೆಯಂತೆ ನಡೆಯಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:23
24 ತಿಳಿವುಗಳ ಹೋಲಿಕೆ  

ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಯೆಹೋವ ದೇವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’ ” ಎಂದರು.


ದುಷ್ಟತನಕ್ಕೆ ಒಳಸಂಚು ಮಾಡುವವರು ನನಗೆ ಸಮೀಪವಾಗಿದ್ದಾರೆ; ಆದರೆ ಅವರು ನಿಮ್ಮ ನಿಯಮಕ್ಕೆ ಅವರು ದೂರವಾಗಿದ್ದಾರೆ.


ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ, ನಮ್ಮ ದೇವರು ನಮ್ಮ ಮೇಲೆಯೂ, ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲಿಲ್ಲವೋ? ಆದರೆ ನೀವು ಸಬ್ಬತ್ ದಿನವನ್ನು ಅಪವಿತ್ರ ಮಾಡುವುದರಿಂದ ಇಸ್ರಾಯೇಲಿನ ಮೇಲೆ ಇನ್ನೂ ದೇವರ ಕೋಪವನ್ನು ಬರಮಾಡುವಿರಿ.”


ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”


ಆದರೆ ಯೆಹೂದ್ಯರಲ್ಲದವರು ಅರ್ಪಿಸುವ ಯಜ್ಞ ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುವಂತದ್ದಾಗಿದೆ. ನೀವು ದೆವ್ವಗಳೊಂದಿಗೆ ಭಾಗಿಗಳಾಗಿರಬೇಕೆಂಬುದು ನನ್ನ ಇಷ್ಟವಲ್ಲ.


ಯೆರೂಸಲೇಮು ಘೋರ ಪಾಪಮಾಡಿದೆ. ಆದ್ದರಿಂದ ಅವಳು ಅಶುದ್ಧಳಾಗಿದ್ದಾಳೆ. ಅವಳನ್ನು ಸನ್ಮಾನಿಸಿದವರೆಲ್ಲರೂ, ಅವಳನ್ನು ಹೀನೈಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ. ಹೌದು, ಅವಳು ನರಳುತ್ತಾ ಹಿಂದಕ್ಕೆ ತಿರುಗುತ್ತಾಳೆ.


“ನೀವೂ, ನಿಮ್ಮ ಪಿತೃಗಳೂ, ನಿಮ್ಮ ಅರಸರೂ, ನಿಮ್ಮ ಪ್ರಧಾನರೂ, ದೇಶದ ಜನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟ ಧೂಪವನ್ನೇ, ಯೆಹೋವ ದೇವರು ಜ್ಞಾಪಕ ಮಾಡಿಕೊಂಡಿದ್ದು ಅಲ್ಲವೋ?


ಆದರೆ ನಾವು ಗಗನದ ಒಡತಿಗೆ ಧೂಪ ಸುಡುವುದನ್ನೂ, ಪಾನಾರ್ಪಣೆಗಳನ್ನೂ ಅವಳಿಗೆ ಹೊಯ್ಯುವುದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು. ಖಡ್ಗದಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.”


ಏಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ, ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ, ನಿಂದೆಯೂ ಆಗುವ ಹಾಗೆಯೂ, ನೀವು ತಂಗುವುದಕ್ಕೆ ಹೋಗಿರುವ ಈಜಿಪ್ಟ್ ದೇಶದಲ್ಲಿ ಬೇರೆ ದೇವರುಗಳಿಗೆ ಧೂಪ ಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?


ನೀವು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಆತನ ಮಾತುಗಳನ್ನು ಕೇಳದೆ ಹೋದದ್ದರಿಂದಲೇ ಈ ಕಾರ್ಯವು ನಿಮಗೆ ಸಂಭವಿಸಿದೆ.


ದುಷ್ಟರಿಗೆ ರಕ್ಷಣೆಯು ದೂರವಾಗಿದೆ; ಏಕೆಂದರೆ ಅವರು ನಿಮ್ಮ ತೀರ್ಪುಗಳನ್ನು ಹುಡುಕುವುದಿಲ್ಲ.


ಆದರೆ ಜನರು ಮಹೋನ್ನತರಾದ ದೇವರನ್ನು ಪರೀಕ್ಷಿಸಿ ವಿರೋಧಿಸಿದರು; ದೇವರ ಶಾಸನಗಳನ್ನು ಅವರು ಕೈಗೊಳ್ಳಲಿಲ್ಲ.


ಆದರೆ ಯೆಹೋವ ದೇವರ ಕೋಪವು ತಮ್ಮ ಜನರಿಗೆ ವಿರೋಧವಾಗಿ ಏಳುವವರೆಗೂ, ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ, ದೇವರ ವಾಕ್ಯಗಳನ್ನು ತಿರಸ್ಕರಿಸಿ, ದೇವರ ಪ್ರವಾದಿಗಳಿಗೆ ಅಪಹಾಸ್ಯ ಮಾಡಿದರು.


ಅವರು ದೇವರ ಒಡಂಬಡಿಕೆಯನ್ನು ಕೈಗೊಳ್ಳಲಿಲ್ಲ. ದೇವರ ನಿಯಮದಲ್ಲಿ ನಡೆಯಲೊಲ್ಲದೆ ಇದ್ದರು.


ನಿಮ್ಮ ನಿಯಮವನ್ನು ಕೈಗೊಳ್ಳದೇ ಇರುವಾಗ ನನ್ನ ಕಣ್ಣಿನಿಂದ ಕಣ್ಣೀರು ಧಾರೆಯಾಗಿ ಹರಿಯುತ್ತಿವೆ.


ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾನೆ, ನೀವು ನನಗೆ ಕಿವಿಗೊಡದೆ, ನಾನು ನಿಮ್ಮ ಮುಂದೆ ಇಟ್ಟ ನನ್ನ ನಿಯಮದಲ್ಲಿ ನಡೆದುಕೊಳ್ಳದೆ,


“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿನ ಮೇಲೆಯೂ, ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ಕಂಡಿದ್ದೀರಿ.


ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ನೀವೂ ನಿಮ್ಮ ಪೂರ್ವಜರೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ, ಧೂಪ ಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ. ಅವುಗಳಲ್ಲಿ ವಾಸಮಾಡುವವನು ಯಾರೂ ಇಲ್ಲ.


ಈ ದಿನದವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ. ನಾನು ನಿಮ್ಮ ಮುಂದೆಯೂ, ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನಿಯಮದಲ್ಲಿ ನಡೆಯಲಿಲ್ಲ.


ದೇವರ ಕಟ್ಟಳೆಗಳನ್ನೂ, ದೇವರು ತಮ್ಮ ಪಿತೃಗಳ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಅವರಿಗೆ ಹೇಳಿದ ಎಚ್ಚರಿಕೆಯನ್ನೂ ತಿರಸ್ಕರಿಸಿದರು. ಅವರು ವ್ಯರ್ಥವಾದ ವಿಗ್ರಹಗಳನ್ನು ಹಿಂಬಾಲಿಸಿ, ನಿಷ್ಪ್ರಯೋಜಕರಾದರು. “ನೀವು ಅವರ ಹಾಗೆ ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ್ದರೂ, ಅವರು ತಮ್ಮ ಸುತ್ತಲಿನ ಜನರನ್ನೇ ಅನುಸರಿಸಿದರು.


ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಈ ಎಲ್ಲಾ ವಿನಾಶ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿಮ್ಮ ಸತ್ಯವನ್ನು ತಿಳಿದುಕೊಳ್ಳುವಂತೆ, ನಮ್ಮ ದೇವರಾದ ಯೆಹೋವ ದೇವರ ದಯೆಯನ್ನು ಬೇಡಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು