ಯೆರೆಮೀಯ 44:24 - ಕನ್ನಡ ಸಮಕಾಲಿಕ ಅನುವಾದ24 ಇದಲ್ಲದೆ, ಯೆರೆಮೀಯನು ಎಲ್ಲಾ ಜನರಿಗೂ, ಎಲ್ಲಾ ಹೆಂಗಸರಿಗೂ, “ಈಜಿಪ್ಟ್ ದೇಶದಲ್ಲಿರುವ ಯೆಹೂದ್ಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇದಲ್ಲದೆ ಯೆರೆಮೀಯನು ಹೆಂಗಸರಿಗೂ, ಎಲ್ಲಾ ಜನರಿಗೂ ಹೀಗೆ ಹೇಳಿದನು, “ಐಗುಪ್ತದಲ್ಲಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24-25 ಇದಲ್ಲದೆ ಯೆರೆಮೀಯನು ಆ ಎಲ್ಲ ಜನರಿಗೆ ಮುಖ್ಯವಾಗಿ ಮಹಿಳೆಯರಿಗೆ, ಹೀಗೆ ಹೇಳಿದನು: “ಈಜಿಪ್ಟಿನಲ್ಲಿರುವ ಯೆಹೂದ್ಯರೇ, ನಿಮ್ಮೆಲ್ಲರಿಗೆ ಸರ್ವೇಶ್ವರ ಹೀಗೆನ್ನುತ್ತಾರೆ - ‘ಗಗನದೊಡತಿಗೆ ಧೂಪಾರತಿ ಎತ್ತಿ ಪಾನನೈವೇದ್ಯವನ್ನು ಸುರಿಯುತ್ತೇವೆ. ಅದಕ್ಕಾಗಿ ಮಾಡಿಕೊಂಡ ಹರಕೆಯನ್ನು ಖಂಡಿತವಾಗಿ ತೀರಿಸುತ್ತೇವೆ ಎಂಬುದಾಗಿ ನೀವೂ ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿದ್ದೀರಿ, ಕೈಯಿಂದ ನೆರವೇರಿಸಿದ್ದೀರಿ! ಸರಿಸರಿ, ನಿಮ್ಮ ಹರಕೆಗಳನ್ನು ತೀರಿಸಿರಿ, ಅವುಗಳನ್ನು ಬಿಡದೆ ನೆರವೇರಿಸಿರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇದಲ್ಲದೆ ಯೆರೆಮೀಯನು ಹೆಂಗಸರಿಗೂ ಎಲ್ಲಾ ಜನರಿಗೂ ಹೀಗೆ ಹೇಳಿದನು - ಐಗುಪ್ತದಲ್ಲಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಮೇಲೆ ಯೆರೆಮೀಯನು ಆ ಎಲ್ಲಾ ಸ್ತ್ರೀಪುರುಷರೊಂದಿಗೆ ಮಾತನಾಡಿದನು. ಯೆರೆಮೀಯನು ಹೀಗೆ ಹೇಳಿದನು: “ಈಗ ಈಜಿಪ್ಟಿನಲ್ಲಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ: ಅಧ್ಯಾಯವನ್ನು ನೋಡಿ |
ಆದರೆ, ಈಜಿಪ್ಟ್ ದೇಶದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವ ದೇವರ ವಾಕ್ಯವನ್ನು ಕೇಳಿರಿ: ‘ಇಗೋ, ನಾನು ನನ್ನ ಸ್ವಂತ ಹೆಸರಿನಿಂದ ಪ್ರಮಾಣ ಮಾಡಿದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ, ‘ಈಜಿಪ್ಟ್‌ನಲ್ಲಿರುವ ಯಾವುದೇ ಯೆಹೂದದ ವ್ಯಕ್ತಿಯು ಪ್ರಮಾಣ ಮಾಡಲು ನನ್ನ ಶ್ರೇಷ್ಠ ಹೆಸರನ್ನು ಬಳಸಲು ಸಾಧ್ಯವಾಗುವುದಿಲ್ಲ. “ಸಾರ್ವಭೌಮ ಯೆಹೋವ ದೇವರ ಜೀವದಾಣೆ,” ಎಂದು ಮತ್ತೆಂದೂ ಅವರು ಹೇಳುವುದಿಲ್ಲ.