Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:27 - ಕನ್ನಡ ಸಮಕಾಲಿಕ ಅನುವಾದ

27 ನಾನು ಒಳ್ಳೆಯದಕ್ಕಾಗಿ ಅಲ್ಲ; ಕೆಟ್ಟದ್ದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು. ಈಜಿಪ್ಟ್ ದೇಶದಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವವರೆಗೆ ಖಡ್ಗದಿಂದಲೂ ಬರದಿಂದಲೂ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗ, ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇಗೋ, ನಿಮಗೆ ಒಳಿತನ್ನು ಅಲ್ಲ, ಕೇಡನ್ನು ಬರಮಾಡಬೇಕೆಂದು ನಿಮ್ಮ ವಿಷಯದಲ್ಲಿ ಎಚ್ಚರಗೊಂಡಿದ್ದೇನೆ. ಈಜಿಪ್ಟಿನ ಎಲ್ಲ ಯೆಹೂದ್ಯರು ಖಡ್ಗ-ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಯೆಹೂದದ ಜನರನ್ನು ಗಮನಿಸುತ್ತಿರುವುದು ಅವರನ್ನು ಕಾಪಾಡುವುದಕ್ಕಲ್ಲ. ನಾನು ಅವರನ್ನು ಗಮನಿಸುತ್ತಿರುವುದು ಅವರಿಗೆ ಕೇಡುಮಾಡುವುದಕ್ಕಾಗಿ. ಈಜಿಪ್ಟಿನಲ್ಲಿ ವಾಸಿಸುವ ಯೆಹೂದಿಯರು ಹಸಿವಿನಿಂದ ಸತ್ತುಹೋಗುವರು ಮತ್ತು ಖಡ್ಗಕ್ಕೆ ಬಲಿಯಾಗುವರು. ಅವರು ನಿರ್ನಾಮವಾಗುವವರೆಗೆ ಸಾಯುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:27
16 ತಿಳಿವುಗಳ ಹೋಲಿಕೆ  

ನಾನು ಅವರನ್ನು ಕೀಳಲು, ಕೆಡವಲು, ಅಳಿಸಲು ಹಾಳುಮಾಡಲು, ಎಚ್ಚರವಹಿಸಿದ ಹಾಗೆಯೇ ಇನ್ನು ಮುಂದೆ ಅವರನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಅವರ ವಿಷಯವಾಗಿ ಎಚ್ಚರವಹಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನೋಡು, ಈ ಹೊತ್ತು ನೀನು ಕೀಳುವುದಕ್ಕೂ, ಕೆಳಗೆ ಹಾಕಿಬಿಡುವುದಕ್ಕೂ, ನಾಶಮಾಡುವುದಕ್ಕೂ, ಕೆಡವಿ ಹಾಕುವುದಕ್ಕೂ, ಕಟ್ಟುವುದಕ್ಕೂ, ನೆಡುವುದಕ್ಕೂ ನಾನು ನಿನ್ನನ್ನು ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ನಿನ್ನನ್ನು ನೇಮಿಸಿದ್ದೇನೆ,” ಎಂದರು.


ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವುದನ್ನು ಬಿಟ್ಟುಬಿಟ್ಟು, ಅವರನ್ನು ಅವರ ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ, ಸೂರೆಯೂ ಆಗಿ ಹೋಗುವರು.


ಅಂತ್ಯವು ಬಂದಿತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ ಬಂದೇ ಬಂತು.


ಆದರೆ ನಾವು ಗಗನದ ಒಡತಿಗೆ ಧೂಪ ಸುಡುವುದನ್ನೂ, ಪಾನಾರ್ಪಣೆಗಳನ್ನೂ ಅವಳಿಗೆ ಹೊಯ್ಯುವುದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು. ಖಡ್ಗದಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.”


ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ಇಟ್ಟಿರುವ ಯೆಹೂದದಲ್ಲಿ ಉಳಿದಿರುವವರನ್ನು ತೆಗೆದುಕೊಳ್ಳುತ್ತೇನೆ. ಅವರೆಲ್ಲರು ಈಜಿಪ್ಟ್ ದೇಶದಲ್ಲಿ ನಾಶವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಅಳಿದುಹೋಗುವರು. ಚಿಕ್ಕವನು ಮೊದಲುಗೊಂಡು ದೊಡ್ಡವನವರೆಗೂ ಖಡ್ಗದಿಂದಲೂ ಕ್ಷಾಮದಿಂದಲೂ ಸಾಯುವರು. ಅಸಹ್ಯವೂ ಭಯವೂ ಶಾಪವೂ ನಿಂದೆಯೂ ಆಗುವುವು.


ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವುದು. ಏಕೆಂದರೆ ನಾನು ಒಳ್ಳೆಯದಕ್ಕಲ್ಲ, ಕೆಟ್ಟದ್ದಕ್ಕೆ ಈ ಪಟ್ಟಣಕ್ಕೆ ವಿರೋಧವಾಗಿ ನನ್ನ ಮುಖವನ್ನಿಟ್ಟಿದ್ದೇನೆಂದು ಯೆಹೋವ ದೇವರು ಅನ್ನುತ್ತಾರೆ. ಅದು ಬಾಬಿಲೋನಿನ ಅರಸನ ಕೈಯಲ್ಲಿ ಒಪ್ಪಿಸಲಾಗುವುದು. ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.’


ಅವರಿಗೂ, ಅವರ ತಂದೆಗಳಿಗೂ ತಿಳಿಯದ ಇತರ ಜನಾಂಗಗಳಲ್ಲಿ ಅವರನ್ನು ಚದರಿಸುವೆನು. ಅವರನ್ನು ತೀರಿಸುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.”


“ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ, ಹೇಳತಕ್ಕದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಒಳ್ಳೆಯದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ. ಅವು ಆ ದಿವಸಗಳಲ್ಲಿ ನಿನ್ನ ಮುಂದೆಯೇ ನೆರವೇರುವುವು.


ನೀವು ಭಯಪಡುವ ಖಡ್ಗವು ಈಜಿಪ್ಟ್ ದೇಶದಲ್ಲಿ ನಿಮ್ಮನ್ನು ಹಿಡಿಯುವುದು. ನೀವು ಹೆದರಿಕೊಳ್ಳುವ ಕ್ಷಾಮವು ಈಜಿಪ್ಟ್ ದೇಶಕ್ಕೆ ನಿಮ್ಮನ್ನು ಹಿಂದಟ್ಟುವುದು, ನೀವು ಅಲ್ಲೇ ಸಾಯುವಿರಿ.


ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಈಜಿಪ್ಟ್ ದೇಶದಲ್ಲಿ ವಾಸಮಾಡುವವರನ್ನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಶಿಕ್ಷಿಸುವೆನು.


ಈಜಿಪ್ಟ್ ದೇಶಕ್ಕೆ ಅಲ್ಲಿ ವಾಸಿಸುವುದಕ್ಕೆ ಹೋಗಿರುವ ಯೆಹೂದದ ಉಳಿದಿರುವವರು ತಾವು ತಿರುಗಿಕೊಂಡು, ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿದರೂ, ಒಬ್ಬನಾದರೂ ಯೆಹೂದ ದೇಶಕ್ಕೆ ಹಿಂದಿರುಗುವುದಿಲ್ಲ. ಓಡಿಹೋಗುವ ಸ್ವಲ್ಪ ಜನರೇ ಅಲ್ಲದೆ ಇನ್ಯಾರೂ ಹಿಂತಿರುಗುವುದಿಲ್ಲ,” ಎಂಬುದು.


ನಿನ್ನಲ್ಲಿಯ ಮೂರನೆಯ ಒಂದು ಪಾಲು ಜನರು ವ್ಯಾಧಿಗಳಿಂದ ಸಾಯುವರು, ಕ್ಷಾಮದಿಂದ ನಿಮ್ಮಲ್ಲಿ ಅವರು ನಾಶವಾಗುವರು. ಮೂರನೆಯ ಒಂದು ಪಾಲು ನಿಮ್ಮ ಸುತ್ತಲೂ ಖಡ್ಗ ಹಿಡಿದು ಬೀಳುವರು. ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ ಗಾಳಿಗೆ ತೂರಿ ಚದರಿಸಿ, ಅವರ ಮೇಲೆ ಖಡ್ಗವನ್ನು ಬೀಸುವೆನು.


ನಮ್ಮ ದೇವರಾದ ಯೆಹೋವ ದೇವರು ತಾವು ಮಾಡುವ ಎಲ್ಲದರಲ್ಲಿಯೂ ನೀತಿವಂತರಾಗಿದ್ದುದರಿಂದ, ವಿನಾಶವನ್ನು ನಮ್ಮ ಮೇಲೆ ಬರಮಾಡಲು ಯೆಹೋವ ದೇವರು ಹಿಂಜರಿಯಲಿಲ್ಲ. ಆದರೂ ನಾವು ಅವರಿಗೆ ವಿಧೇಯರಾಗಲೇ ಇಲ್ಲ.


“ಸಾರ್ವಭೌಮ ಯೆಹೋವ ದೇವರ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲೆ ಇವೆ. ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋಬಿನ ಮನೆತನದವರನ್ನು ನಾನು ನಿಜವಾಗಿ ನಾಶಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರಿಗೆ ಹೌದು, ಈ ಜನರಿಗೆ ಮಾಚಿಪತ್ರೆಯನ್ನು ತಿನ್ನುವುದಕ್ಕೆ ಕೊಡುತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು