Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:10 - ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ಇದು ಸೇನಾಧೀಶ್ವರ ಯೆಹೋವನಾದ ದೇವರ ದಿವಸವೇ. ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು, ಖಡ್ಗವು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವುದು. ಏಕೆಂದರೆ ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೇನಾಧೀಶ್ವರ ಯೆಹೋವರಾದ ದೇವರಿಗೆ ಬಲಿ ಆಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಆ ಯುದ್ಧ ದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿನ; ಆಗ ಖಡ್ಗವು ನುಂಗಿ ತಣಿಯುವುದು, ಅವರ ರಕ್ತವನ್ನು ತುಂಬಾ ಹೀರುವುದು. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ ಈ ದಿನ, ಯುದ್ಧದ ದಿನ ಸೇನಾಧೀಶ್ವರನೆಂಬ ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಮುಯ್ಯಿ ತೀರಿಸುವ ದಿನ ಇದು ದಂಡನೆಯ ದಿನ. ಇಂದು ಖಡ್ಗವು ಕಬಳಿಸುವುದು ತೃಪ್ತಿಯಾಗಿ ರಕ್ತವನ್ನು ಹೀರುವುದು ಸಂತೃಪ್ತಿಯಾಗಿ ಉತ್ತರದ ಯೂಪ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿರುವನು ಸರ್ವಶಕ್ತನೆಂಬ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ಆ ಯುದ್ಧದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿವಸ; ಆಗ ಖಡ್ಗವು ನುಂಗಿ ನುಂಗಿ ತಣಿಯುವದು, ಅವರ ರಕ್ತವನ್ನು ತುಂಬಾ ಹೀರುವದು; ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಬಡಗಲಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:10
25 ತಿಳಿವುಗಳ ಹೋಲಿಕೆ  

ಸತ್ತವರ ಮತ್ತು ಸೆರೆಯಾದವರ ರಕ್ತದಿಂದಲೂ, ಶತ್ರುವಿಗೆ ಮಾಡಿದ ಪ್ರತೀಕಾರದಿಂದಲೂ ನನ್ನ ಬಾಣಗಳು ಅಮಲೇರುವುದು. ನನ್ನ ಖಡ್ಗವು ಮಾಂಸವನ್ನು ಭಕ್ಷಿಸುವುದು. ಹೀಗೆ ಶತ್ರುಗಳ ನಾಯಕರ ತಲೆ ಬೀಳುವುದು.”


ಆ ದಿನ ಭಯಂಕರವಾದದ್ದು! ಏಕೆಂದರೆ ಯೆಹೋವ ದೇವರ ದಿವಸವು ಸಮೀಪವಾಗಿದೆ. ಸರ್ವಶಕ್ತರ ಕಡೆಯಿಂದ ಇದು ನಾಶವಾದಂತೆ ಬರುವುದು.


ಈಜಿಪ್ಟನ್ನು ಕುರಿತದ್ದು: ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿಯಿರುವ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಆ ಸೈನ್ಯದ ಮೇಲೆ ದಾಳಿಮಾಡಿದ್ದರ ವಿಷಯ:


“ವೇಗಶಾಲಿಗಳು ಓಡಿ ಹೋಗದಿರಲಿ; ಪರಾಕ್ರಮಶಾಲಿಯು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿಬೀಳುವರು.


ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವವುಗಳೆಲ್ಲವೂ ನೆರವೇರಲು, ಇವು ದಂಡನೆಯ ದಿವಸಗಳಾಗಿವೆ.


ನೀವು ಚೀಯೋನಿನಲ್ಲಿ ಕೊಂಬು ಊದಿರಿ. ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ. ದೇಶದ ನಿವಾಸಿಗಳೆಲ್ಲರು ನಡುಗಲಿ. ಏಕೆಂದರೆ ಯೆಹೋವ ದೇವರ ದಿವಸವು ಬರುತ್ತದೆ. ಅದು ಸಮೀಪವಾಗಿದೆ.


“ಬಾಬಿಲೋನಿನೊಳಗಿಂದ ಓಡಿಹೋಗಿರಿ; ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಪಾಪದಲ್ಲಿ ನಾಶವಾಗಬೇಡಿರಿ; ಏಕೆಂದರೆ ಇದು ಯೆಹೋವ ದೇವರ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ.


ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಅದರ ಬುರುಜುಗಳು ಬಿದ್ದು ಹೋದವು; ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಅದು ಯೆಹೋವ ದೇವರ ಪ್ರತಿದಂಡನೆ; ಆದ್ದರಿಂದ ನೀವೂ ಅದಕ್ಕೆ ಮುಯ್ಯಿತೀರಿಸಿರಿ. ಅದು ಇತರರಿಗೆ ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.


ಏಕೆಂದರೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು ನನ್ನ ಹೃದಯದಲ್ಲಿದೆ. ನಾನು ವಿಮೋಚಿಸಿದವರ ವರುಷವು ಬಂತು.


ನೀವು ಗೋಳಾಡಿರಿ. ಏಕೆಂದರೆ, ಯೆಹೋವ ದೇವರ ದಿನವು ಸಮೀಪವಾಯಿತು. ಅದು ಸರ್ವಶಕ್ತರಿಂದ ನಾಶರೂಪವಾಗಿ ಬರುವುದು.


ಆದರೆ ಈಜಿಪ್ಟಿನ ಅರಸನು ತನ್ನ ದೇಶದಿಂದ ತಿರುಗಿ ಬರಲಿಲ್ಲ. ಏಕೆಂದರೆ ಈಜಿಪ್ಟ್ ನದಿ ಮೊದಲುಗೊಂಡು ಯೂಫ್ರೇಟೀಸ್ ನದಿಯವರೆಗೂ ಈಜಿಪ್ಟಿನ ಅರಸನಿಗೆ ಇದ್ದದ್ದನ್ನೆಲ್ಲಾ ಬಾಬಿಲೋನಿನ ಅರಸನು ಸ್ವಾಧೀನಮಾಡಿಕೊಂಡಿದ್ದನು.


ಯೆಹೋವ ದೇವರ ಮೆಚ್ಚುಗೆಯ ವರ್ಷವನ್ನು ಸಾರಿ ಹೇಳುವುದಕ್ಕೂ, ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧ ಮಾಡುವುದಕ್ಕೂ, ದುಃಖವುಳ್ಳವರೆಲ್ಲರನ್ನು ಆದರಿಸುವುದಕ್ಕೂ,


“ಸರ್ವಶಕ್ತರು ತೀರ್ಪಿನ ಕಾಲವನ್ನು ನಿಗದಿಪಡಿಸದೆ ಇರುವುದೇಕೆ? ದೇವರನ್ನು ತಿಳಿದವರು ದೇವರ ದಿನಗಳಿಗೋಸ್ಕರ ವ್ಯರ್ಥವಾಗಿ ನೋಡುತ್ತಿರುವುದು ಏಕೆ?


ಆಗ ಅಸ್ಸೀರಿಯದವರು ಖಡ್ಗದಿಂದ ಬೀಳುವರು. ಅದು ಮನುಷ್ಯರ ಖಡ್ಗವಲ್ಲ, ಖಡ್ಗವು ಅವರನ್ನು ನುಂಗುವುದು. ಅದು ಮಾನವ ಖಡ್ಗವಲ್ಲ. ಅವರು ಖಡ್ಗದಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಜೀತದಾಳುಗಳಾಗುವರು.


ಮರುಭೂಮಿಯಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ನಾಶಮಾಡುವವರು ಬಂದಿದ್ದಾರೆ. ಏಕೆಂದರೆ, ಯೆಹೋವ ದೇವರ ಖಡ್ಗವು ದೇಶದ ಒಂದು ಕಡೆಯಿಂದ ದೇಶದ ಇನ್ನೊಂದು ಕಡೆಯವರೆಗೂ ನುಂಗಿಬಿಡುತ್ತದೆ. ಯಾವ ಮನುಷ್ಯನೂ ಸುರಕ್ಷಿತವಾಗಿ ಉಳಿಯುವುದಿಲ್ಲ.


“ಈಜಿಪ್ಟಿನಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿಸಿ, ನೋಫಿನಲ್ಲಿಯೂ, ತಹಪನೇಸಿನಲ್ಲಿಯೂ ಪ್ರಕಟಿಸಿ, ‘ನಿಮ್ಮ ಸ್ಥಾನಗಳನ್ನು ತೆಗೆದುಕೊಳ್ಳಿ ಮತ್ತು ಸಿದ್ಧರಾಗಿ, ಏಕೆಂದರೆ ಖಡ್ಗವು ನಿನ್ನ ಸುತ್ತಲೂ ಸಂಹರಿಸುವುದು,’ ಎಂದು ಹೇಳಿರಿ.


ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅಸ್ಸೀರಿನ ಅರಸನನ್ನು ಶಿಕ್ಷಿಸಿದ ಹಾಗೆ ಬಾಬಿಲೋನಿನ ಅರಸನನ್ನೂ, ಅವನ ದೇಶವನ್ನೂ ಶಿಕ್ಷಿಸುತ್ತೇನೆ.


“ಮನುಷ್ಯಪುತ್ರನೇ, ನೀನು ಪ್ರವಾದಿಸಿ, ಸಾರ್ವಭೌಮ ಯೆಹೋವ ದೇವರು ಅಮ್ಮೋನಿಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾರೆ, ‘ಹೌದು, ನೀನು ಹೀಗೆ ಹೇಳು: “ ‘ಒಂದು ಖಡ್ಗವು, ಒಂದು ಖಡ್ಗವು ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಬಹಳವಾಗಿ ಮಸೆಯಲಾಗಿದೆ. ಥಳಥಳಿಸುತ್ತಾ ನುಂಗುವಹಾಗಿದೆ.


ಕಪ್ಪು ಕುದುರೆಗಳ ರಥ, ಉತ್ತರ ದೇಶಕ್ಕೆ ಹೊರಟಿತು. ಬಿಳಿ ಕುದುರೆಗಳು ಪಶ್ಚಿಮಕ್ಕೆ ಹಿಂದೆ ಹೋಯಿತು. ಮಚ್ಚೆ ಮಚ್ಚೆಯ ಕುದುರೆಯ ರಥ ದಕ್ಷಿಣಕ್ಕೆ ಹೊರಟಿತು.”


ಸೇನಾಧೀಶ್ವರ ಯೆಹೋವ ದೇವರ ದಿನವು ಗರ್ವ ಹಾಗೂ ಅಹಂಭಾವದಿಂದ ತುಂಬಿರುವವರ ಮೇಲೆಯೂ, ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವುದು, ದೇವರು ಅವರನ್ನು ತಗ್ಗಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು