Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:14 - ಕನ್ನಡ ಸಮಕಾಲಿಕ ಅನುವಾದ

14 “ಈಜಿಪ್ಟಿನಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿಸಿ, ನೋಫಿನಲ್ಲಿಯೂ, ತಹಪನೇಸಿನಲ್ಲಿಯೂ ಪ್ರಕಟಿಸಿ, ‘ನಿಮ್ಮ ಸ್ಥಾನಗಳನ್ನು ತೆಗೆದುಕೊಳ್ಳಿ ಮತ್ತು ಸಿದ್ಧರಾಗಿ, ಏಕೆಂದರೆ ಖಡ್ಗವು ನಿನ್ನ ಸುತ್ತಲೂ ಸಂಹರಿಸುವುದು,’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ, ‘ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ’ ಎಂದು ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಪ್ರಕಟಿಸಿರಿ ಈಜಿಪ್ಟಿನಲ್ಲಿ, ಪ್ರಚುರಪಡಿಸಿರಿ ಮಿಗ್ದೋಲ್, ತಹಪನೇಸ್, ಹಾಗು ಸೋಫ್ ಎಂಬೀ ನಗರಗಳಲ್ಲಿ. ಸಾರಿರಿ ಇಂತೆಂದು: ‘ಈಜಿಪ್ಟೇ, ಸ್ಥಿರವಾಗಿ ನಿಲ್ಲು, ಯುದ್ಧ ಸನ್ನದ್ಧವಾಗು, ಖಡ್ಗ ಆವರಿಸುತ್ತಿದೆ ನಿನ್ನ ಸುತ್ತಮುತ್ತಲು’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಐಗುಪ್ತದಲ್ಲಿ ಪ್ರಕಟಿಸಿರಿ, ವಿುಗ್ದೋಲ್, ತಹಪನೇಸ್, ನೋಫ್ ಎಂಬೀ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ - [ಐಗುಪ್ತವೇ,] ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ ಎಂದು ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಈಜಿಪ್ಟಿನಲ್ಲಿ ಈ ಸಂದೇಶವನ್ನು ಪ್ರಕಟಿಸು, ಮಿಗ್ದೋಲ್ ನಗರದಲ್ಲಿ ಇದನ್ನು ಪ್ರಚುರಪಡಿಸು. ನೋಫ್ ಮತ್ತು ತಹಪನೇಸ್‌ಗಳಲ್ಲಿ ಪ್ರಚುರಪಡಿಸಿರಿ, ‘ಯುದ್ಧಕ್ಕೆ ಸಿದ್ಧರಾಗಿರಿ, ಏಕೆಂದರೆ ನಿಮ್ಮ ಸುತ್ತಲೂ ಜನರು ಖಡ್ಗಕ್ಕೆ ಆಹುತಿಯಾಗಿದ್ದಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:14
23 ತಿಳಿವುಗಳ ಹೋಲಿಕೆ  

ಏಕೆಂದರೆ ಇದು ಸೇನಾಧೀಶ್ವರ ಯೆಹೋವನಾದ ದೇವರ ದಿವಸವೇ. ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು, ಖಡ್ಗವು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವುದು. ಏಕೆಂದರೆ ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೇನಾಧೀಶ್ವರ ಯೆಹೋವರಾದ ದೇವರಿಗೆ ಬಲಿ ಆಗುತ್ತದೆ.


ಈಜಿಪ್ಟ್ ದೇಶದ ಕೆಳಗಿನ ಪ್ರಾಂತದ ಮಿಗ್ದೋಲ್, ತಹಪನೇಸ್, ಮೆಂಫೀಸ್ ಪಟ್ಟಣಗಳಲ್ಲಿಯೂ ಹಾಗೂ ಈಜಿಪ್ಟನ ದಕ್ಷಿಣ ಭಾಗವಾದ ಪತ್ರೋಸ್ ಪ್ರಾಂತದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆಮೀಯನಿಗೆ ಬಂದ ವಾಕ್ಯವು:


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಹೊಗೆಯಾಗಲು ಸುಡುತ್ತೇನೆ. ಖಡ್ಗವು ನಿನ್ನ ಎಳೆಯ ಸಿಂಹಗಳನ್ನು ನುಂಗಿಬಿಡುವುದು. ನಿನಗೆ ಸಿಕ್ಕಿದ ಬೇಟೆಯನ್ನು ಭೂಮಿಯ ಮೇಲಿನಿಂದ ತೆಗೆದುಬಿಡುತ್ತೇನೆ. ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.”


“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.


ಆದರೆ ನೀವು ತಿರಸ್ಕರಿಸಿ ತಿರುಗಿಬಿದ್ದರೆ, ಖಡ್ಗದ ಬಾಯಿಗೆ ತುತ್ತಾಗುವಿರಿ,” ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ಮರುಭೂಮಿಯಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ನಾಶಮಾಡುವವರು ಬಂದಿದ್ದಾರೆ. ಏಕೆಂದರೆ, ಯೆಹೋವ ದೇವರ ಖಡ್ಗವು ದೇಶದ ಒಂದು ಕಡೆಯಿಂದ ದೇಶದ ಇನ್ನೊಂದು ಕಡೆಯವರೆಗೂ ನುಂಗಿಬಿಡುತ್ತದೆ. ಯಾವ ಮನುಷ್ಯನೂ ಸುರಕ್ಷಿತವಾಗಿ ಉಳಿಯುವುದಿಲ್ಲ.


ಯೆಹೋವ ದೇವರ ಖಡ್ಗವು ರಕ್ತದಲ್ಲಿ ಸ್ನಾನ ಮಾಡಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಮುಚ್ಚಲಾಗಿದೆ. ಏಕೆಂದರೆ ಯೆಹೋವ ದೇವರಿಗೆ ಬೊಚ್ರದಲ್ಲಿ ಬಲಿಯು, ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯು ಉಂಟು.


ಆಗ ಅಸ್ಸೀರಿಯದವರು ಖಡ್ಗದಿಂದ ಬೀಳುವರು. ಅದು ಮನುಷ್ಯರ ಖಡ್ಗವಲ್ಲ, ಖಡ್ಗವು ಅವರನ್ನು ನುಂಗುವುದು. ಅದು ಮಾನವ ಖಡ್ಗವಲ್ಲ. ಅವರು ಖಡ್ಗದಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಜೀತದಾಳುಗಳಾಗುವರು.


ಆಗ ಅಬ್ನೇರನು ಯೋವಾಬನಿಗೆ, “ಖಡ್ಗವು ಯಾವಾಗಲೂ ನುಂಗಿ ಬಿಡುವುದೋ? ಅಂತ್ಯದಲ್ಲಿ ಅದು ಕಹಿತನಕ್ಕೆ ನಡೆಸುವುದೆಂದು ನಿನಗೆ ಗೊತ್ತಾಗಲಿಲ್ಲವೋ? ತಮ್ಮ ಸಹೋದರರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಕ್ಕೆ ತಿರುಗುವಂತೆ ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದು ಕೂಗಿ ಹೇಳಿದನು.


“ಇಸ್ರಾಯೇಲರು ಹಿಂತಿರುಗಿ ಹೋಗಿ ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಲ್ಜೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಅವರಿಗೆ ಹೇಳು. ಅದರ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳಿದುಕೊಳ್ಳಬೇಕು.


ಸತ್ತವರ ಮತ್ತು ಸೆರೆಯಾದವರ ರಕ್ತದಿಂದಲೂ, ಶತ್ರುವಿಗೆ ಮಾಡಿದ ಪ್ರತೀಕಾರದಿಂದಲೂ ನನ್ನ ಬಾಣಗಳು ಅಮಲೇರುವುದು. ನನ್ನ ಖಡ್ಗವು ಮಾಂಸವನ್ನು ಭಕ್ಷಿಸುವುದು. ಹೀಗೆ ಶತ್ರುಗಳ ನಾಯಕರ ತಲೆ ಬೀಳುವುದು.”


ಚೋವನಿನ ಶ್ರೇಷ್ಠರು ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಈಜಿಪ್ಟಿನ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ. ಅದನ್ನು ತಪ್ಪು ದಾರಿಗೆಳೆದಿದ್ದಾರೆ.


ಈಜಿಪ್ಟನ್ನು ಕುರಿತದ್ದು: ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿಯಿರುವ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಆ ಸೈನ್ಯದ ಮೇಲೆ ದಾಳಿಮಾಡಿದ್ದರ ವಿಷಯ:


ಈಜಿಪ್ಟಿನ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜುಗೊಳಿಸಿಕೋ; ಏಕೆಂದರೆ ನೋಫ್ ಪಟ್ಟಣವು ಹಾಳಾಗುವುದು; ನಿವಾಸಿಗಳಿಲ್ಲದ ಬೀಡಾಗುವುದು.


“ಮನುಷ್ಯಪುತ್ರನೇ, ನೀನು ಪ್ರವಾದಿಸಿ, ಸಾರ್ವಭೌಮ ಯೆಹೋವ ದೇವರು ಅಮ್ಮೋನಿಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾರೆ, ‘ಹೌದು, ನೀನು ಹೀಗೆ ಹೇಳು: “ ‘ಒಂದು ಖಡ್ಗವು, ಒಂದು ಖಡ್ಗವು ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಬಹಳವಾಗಿ ಮಸೆಯಲಾಗಿದೆ. ಥಳಥಳಿಸುತ್ತಾ ನುಂಗುವಹಾಗಿದೆ.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾನು ಮೂರ್ತಿಗಳನ್ನು ನಾಶಮಾಡುವೆನು. ಮತ್ತು ನೋಫಿನ ವಿಗ್ರಹಗಳನ್ನು ಕೊನೆಗೊಳಿಸುವೆನು. ಈಜಿಪ್ಟ್ ದೇಶದ ರಾಜಕುಮಾರ ಇನ್ನು ಮುಂದೆ ಇರುವುದಿಲ್ಲ, ನಾನು ಈಜಿಪ್ಟ್ ದೇಶದಲ್ಲಿ ಭಯವನ್ನು ಉಂಟುಮಾಡುವೆನು.


ಇಗೋ, ನಾಶನದಿಂದ ಅವರು ತಪ್ಪಿಸಿಕೊಂಡರೂ ಈಜಿಪ್ಟ್ ಅವರನ್ನು ಕೂಡಿಸುವುದು. ಮೋಫ್ ಪಟ್ಟಣವು ಅವರನ್ನು ಹೂಳುವುದು. ಅವರ ಬೆಳ್ಳಿಯ ಬೊಕ್ಕಸಗಳು ಮುಳ್ಳು ಪೊದೆಗಳ ಪಾಲಾಗುವುವು. ಮುಳ್ಳುಗಿಡಗಳು ಅವರ ಗುಡಾರಗಳನ್ನು ಆವರಿಸಿಕೊಂಡಿರುವುದು.


ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು