Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:16 - ಕನ್ನಡ ಸಮಕಾಲಿಕ ಅನುವಾದ

16 ಅವರು ಪದೇಪದೇ ಎಡವುತ್ತಾರೆ. ಹೌದು, ಒಬ್ಬರ ಮೇಲೊಬ್ಬರು ಬಿದ್ದರು. ‘ಅವರು ಉಪದ್ರವ ಪಡಿಸುವವರ ಖಡ್ಗವನ್ನು ಬಿಟ್ಟು, ಸ್ವಂತ ಜನರ ಬಳಿಗೂ, ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬಹು ಜನರು ಮುಗ್ಗರಿಸುವಂತೆ ಮಾಡಿದನು; ಹೌದು, ಒಬ್ಬರಿಗೊಬ್ಬರು ಮೇಲೆ ಬಿದ್ದು; ‘ನಾವು ಎದ್ದು ಜನ್ಮಭೂಮಿಗೆ ಹೊರಟು ಸ್ವಜನರನ್ನು ಸೇರಿ ಹಿಂಸೆಯ ಖಡ್ಗದಿಂದ ತಪ್ಪಿಸಿಕೊಳ್ಳೋಣ’ ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬಹುಜನರು ಮುಗ್ಗರಿಸಿ ಬಿದ್ದರು ಹೌದು, ಒಬ್ಬರಿಗೊಬ್ಬರು ತಾಕಿ ಬಿದ್ದರು. ‘ಎದ್ದು ಜನ್ಮಭೂಮಿಗೆ ತೆರಳೋಣ ಸ್ವಜನರನ್ನು ಸೇರಿಕೊಳ್ಳೋಣ ಸಂಹರಿಸುವ ಖಡ್ಗದಿಂದ ತಪ್ಪಿಸಿಕೊಳ್ಳೋಣ’ ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬಹು ಜನರು ಮುಗ್ಗರಿಸುವಂತೆ ಮಾಡಿದನು; ಹೌದು, ಒಬ್ಬರಿಗೊಬ್ಬರು ತಗಲಿ ಬಿದ್ದರು; ನಾವು ಎದ್ದು ಜನ್ಮಭೂವಿುಗೆ ಹೊರಟು ಸ್ವಜನರನ್ನು ಸೇರಿ ಹಿಂಸೆಯ ಖಡ್ಗದಿಂದ ತಪ್ಪಿಸಿಕೊಳ್ಳೋಣ ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಸೈನಿಕರು ಮತ್ತೆಮತ್ತೆ ಎಡವುತ್ತಾರೆ. ಅವರು ಒಬ್ಬರಮೇಲೊಬ್ಬರು ಬೀಳುವರು. ‘ಎದ್ದೇಳು, ನಮ್ಮ ಜನರಲ್ಲಿಗೆ ನಾವು ಹೋಗೋಣ. ನಮ್ಮ ಜನ್ಮಭೂಮಿಗೆ ನಾವು ಹೋಗೋಣ. ನಮ್ಮ ವೈರಿಯು ನಮ್ಮನ್ನು ಸೋಲಿಸುತ್ತಿದ್ದಾನೆ. ನಾವು ಇಲ್ಲಿಂದ ಹೊರಡಬೇಕು’ ಎಂದು ಅವರು ಹೇಳಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:16
5 ತಿಳಿವುಗಳ ಹೋಲಿಕೆ  

“ ‘ನಾವು ಬಾಬಿಲೋನನ್ನು ವಾಸಿಮಾಡಲು ಪ್ರಯತ್ನಿಸಿದೆವು; ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳವರೆಗೂ ಏರುತ್ತದೆ.’


ಬಿತ್ತುವವನನ್ನೂ, ಸುಗ್ಗಿಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬಿಲೋನಿನೊಳಗಿಂದ ಕಡಿದುಬಿಡಿರಿ; ಕಷ್ಟಪಡುವ ಖಡ್ಗದ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿಹೋಗುವರು.


ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಕರುಗಳಂತಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಏಕೆಂದರೆ ಅವರ ಆಪತ್ತಿನ ದಿವಸವೂ, ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.


“ವೇಗಶಾಲಿಗಳು ಓಡಿ ಹೋಗದಿರಲಿ; ಪರಾಕ್ರಮಶಾಲಿಯು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು