Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:2 - ಕನ್ನಡ ಸಮಕಾಲಿಕ ಅನುವಾದ

2 ಈಜಿಪ್ಟನ್ನು ಕುರಿತದ್ದು: ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿಯಿರುವ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಆ ಸೈನ್ಯದ ಮೇಲೆ ದಾಳಿಮಾಡಿದ್ದರ ವಿಷಯ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಐಗುಪ್ತವನ್ನು ಕುರಿತದ್ದು; ಐಗುಪ್ತದ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಆ ಸೈನ್ಯದ ಮೇಲೆ ದಾಳಿಮಾಡಿದ ವಿಷಯ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಐಗುಪ್ತವನ್ನು ಕುರಿತದ್ದು. ಐಗುಪ್ತದ ಅರಸನಾದ ಫರೋಹನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:2
16 ತಿಳಿವುಗಳ ಹೋಲಿಕೆ  

ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ಸಹಾಯಮಾಡಲು ಯೂಫ್ರೇಟೀಸ್ ನದಿಯವರೆಗೆ ಹೋದನು. ಅರಸನಾದ ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದಾಗ, ನೆಕೋ ಅವನನ್ನು ಎದುರಿಸಿ ಮೆಗಿದ್ದೋವಿನಲ್ಲಿ ಕೊಂದುಹಾಕಿದನು.


“ಈಜಿಪ್ಟಿನಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿಸಿ, ನೋಫಿನಲ್ಲಿಯೂ, ತಹಪನೇಸಿನಲ್ಲಿಯೂ ಪ್ರಕಟಿಸಿ, ‘ನಿಮ್ಮ ಸ್ಥಾನಗಳನ್ನು ತೆಗೆದುಕೊಳ್ಳಿ ಮತ್ತು ಸಿದ್ಧರಾಗಿ, ಏಕೆಂದರೆ ಖಡ್ಗವು ನಿನ್ನ ಸುತ್ತಲೂ ಸಂಹರಿಸುವುದು,’ ಎಂದು ಹೇಳಿರಿ.


ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ, ಸುರುಳಿಯಲ್ಲಿ ಬರೆದ ಮೇಲೆ ಪ್ರವಾದಿಯಾದ ಯೆರೆಮೀಯನು ಅವನಿಗೆ ಹೇಳಿದ ವಾಕ್ಯವೇನೆಂದರೆ,


ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವ ದೇವರಿಂದ ಈ ವಾಕ್ಯವು ಬಂದಿತು:


ಈಜಿಪ್ಟಿನ ಅರಸನಾದ ಫರೋಹನಿಗೂ, ಅವನ ಸೇವಕರಿಗೂ, ಅವನ ಅಧಿಕಾರಿಗಳಿಗೂ, ಅವನ ಎಲ್ಲಾ ಜನರಿಗೂ,


ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.


ಕಲ್ನೋ, ಕರ್ಕೆಮೀಷಿನ ಹಾಗಲ್ಲವೋ? ಹಮಾತ್ ಅರ್ಪಾದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗಲ್ಲವೋ?


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಇಗೋ, ನೀನು ಜಜ್ಜಿದ ದಂಟಿಗೆ ಸಮಾನವಾಗಿರುವ ಈಜಿಪ್ಟಿನ ಮೇಲೆ ಭರವಸೆ ಇಟ್ಟಿರುವಿಯಷ್ಟೆ, ಅದರ ಮೇಲೆ ಮನುಷ್ಯನು ಊರಿಕೊಂಡರೆ ಅದು ಅವನ ಕೈಯನ್ನೇ ಚುಚ್ಚಿ ಗಾಯ ಮಾಡುವುದು! ಈಜಿಪ್ಟಿನ ಅರಸನಾದ ಫರೋಹನಲ್ಲಿ ಭರವಸೆ ಇಟ್ಟವರೆಲ್ಲರಿಗೂ ಇದೇ ಗತಿಯಾಗುವದು.


ಆದರೆ ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಆಳದ ಹಾಗೆ ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಬಂಧಿಸಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.


ಆದರೆ ಈಜಿಪ್ಟಿನ ಅರಸನು ತನ್ನ ದೇಶದಿಂದ ತಿರುಗಿ ಬರಲಿಲ್ಲ. ಏಕೆಂದರೆ ಈಜಿಪ್ಟ್ ನದಿ ಮೊದಲುಗೊಂಡು ಯೂಫ್ರೇಟೀಸ್ ನದಿಯವರೆಗೂ ಈಜಿಪ್ಟಿನ ಅರಸನಿಗೆ ಇದ್ದದ್ದನ್ನೆಲ್ಲಾ ಬಾಬಿಲೋನಿನ ಅರಸನು ಸ್ವಾಧೀನಮಾಡಿಕೊಂಡಿದ್ದನು.


ಅವನು ಬಂದು ಈಜಿಪ್ಟ್ ದೇಶವನ್ನು ಹೊಡೆದು, ಮರಣಕ್ಕೆ ಇರುವವರನ್ನು ಮರಣಕ್ಕೂ, ಸೆರೆಗೆ ಇರುವವರನ್ನು ಸೆರೆಗೂ, ಖಡ್ಗಕ್ಕೆ ಇರುವವರನ್ನು ಖಡ್ಗಕ್ಕೂ ಒಪ್ಪಿಸುವನು.


ಈಜಿಪ್ಟಿನವರ ವಿಷಯವಾದ ಪ್ರವಾದನೆ: ಇಗೋ, ಯೆಹೋವ ದೇವರು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಈಜಿಪ್ಟಿಗೆ ಬರುತ್ತಾರೆ. ಅವರು ಸಮ್ಮುಖರಾದಾಗ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯಗಳು ಅದರ ಮಧ್ಯೆ ಭಯದಿಂದ ಕರಗುವುವು.


ಆ ದಿನದಲ್ಲಿ ಈಜಿಪ್ಟ್ ದೇಶದ ಮಧ್ಯದಲ್ಲಿ ಯೆಹೋವ ದೇವರಿಗೆ ಬಲಿಪೀಠವು ದೇಶದ ಎಲ್ಲೆಯಲ್ಲಿ ಯೆಹೋವ ದೇವರಿಗೆ ಒಂದು ಸ್ತಂಭವು ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು